For Quick Alerts
ALLOW NOTIFICATIONS  
For Daily Alerts
 

Buchi Babu Tournament: ದೇಶೀಯ ಟೂರ್ನಿಯಲ್ಲಿ 'ರೋಹಿತ್‌ ಬ್ರಹ್ಮಾಸ್ತ್ರ' ಅಬ್ಬರ; ಶೀಘ್ರದಲ್ಲೇ ಟೀಮ್ ಇಂಡಿಯಾಗೆ ಎಂಟ್ರಿ?

ಆಗಸ್ಟ್ 18 ಭಾನುವಾರ, ಮುಂದಿನ ವರ್ಷ ಟೀಮ್ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಡಬೇಕಿದ್ದು, ಇದಕ್ಕಾಗಿ ರೋಹಿತ್ ಶರ್ಮಾ ನೇತೃತ್ವದ ತಂಡ ಈಗಿನಿಂದಲೇ ಸಜ್ಜಾಗಬೇಕಿದೆ. ಇದರ ಮಧ್ಯೆ ಚಾಂಪಿಯನ್ ಟ್ರೋಫಿಗೂ ಮುನ್ನ ಸ್ಫೋಟಕ ಬ್ಯಾಟರ್‌ವೊಬ್ಬರು ಟೀಮ್ ಇಂಡಿಯಾಕ್ಕೆ ಮರಳಲು ತಯಾರಿ ಆರಂಭಿಸಿದ್ದಾರೆ.

ಭಾರತ ತಂಡದಿಂದ ಹೊರಗುಳಿದಿರುವ ವಿಕೆಟ್‌ಕೀಪರ್-ಬ್ಯಾಟರ್ ಇಶಾನ್ ಕಿಶನ್ ಬುಚ್ಚಿ ಬಾಬು ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಇಶಾನ್ ಜಾರ್ಖಂಡ್ ತಂಡದ ನಾಯಕರಾಗಿದ್ದು, ಮೊದಲ ಪಂದ್ಯದಲ್ಲಿಯೇ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿ ಶತಕ ಸಿಡಿಸಿ ಸಂಭ್ರಮಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಸತತ ಎರಡು ಸಿಕ್ಸರ್‌ಗಳನ್ನು ಬಾರಿಸಿ ತಂಡದ ಗೆಲುವಿಗೆ ಕಾರಣರಾದರು.

Ishan Kishan who will soon enter Team India

ಈ ಅಬ್ಬರದ ಆಟವನ್ನು ನೋಡಿದ ಕ್ರಿಕೆಟ್ ಅಭಿಮಾನಿಗಳು ಟೀಮ್ ಇಂಡಿಯಾಕ್ಕೆ ಇಶಾನ್ ಬೇಗ ಮರಳಲುತ್ತಾರೆ ಎಂಬ ಭವಿಷ್ಯ ನುಡಿಯುತ್ತಿದ್ದಾರೆ. ಬುಚ್ಚಿ ಬಾಬು ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಕೇವಲ 107 ಎಸೆತಗಳಲ್ಲಿ 114 ರನ್ ಗಳಿಸಿದರು. ಇದರಿಂದಾಗಿ ಜಾರ್ಖಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 64 ರನ್‌ಗಳ ಮುನ್ನಡೆ ಸಾಧಿಸಿತು.

ಅಷ್ಟೇ ಅಲ್ಲ, ಎರಡನೇ ಇನ್ನಿಂಗ್ಸ್‌ನಲ್ಲಿ ತತ್ತರಿಸಿದ ಜಾರ್ಖಂಡ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. 174 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ್ದ ಜಾರ್ಖಂಡ್‌ನ 70 ರನ್ ಗಳಿಸುವಷ್ಟರಲ್ಲಿ ತಂಡ 5 ವಿಕೆಟ್ ಕಳೆದುಕೊಂಡಿತು. ಜಾರ್ಖಂಡ್ ತಂಡ ಗೆಲುವಿಗೆ 12 ರನ್‌ಗಳ ಅಂತರದಲ್ಲಿದ್ದು, ಕೇವಲ 2 ವಿಕೆಟ್‌ಗಳು ಮಾತ್ರ ಬಾಕಿ ಉಳಿದಿದ್ದವು. ಈ ವೇಳೆ ಇಶಾನ್ ಕಿಶನ್ ಸತತ ಎರಡು ಸಿಕ್ಸರ್ ಬಾರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ಬಿಸಿಸಿಐ ಕಠಿಣ ಶಿಕ್ಷೆ

ಕಳೆದ ವರ್ಷ ಇಶಾನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಕೇಂದ್ರ ಗುತ್ತಿಗೆಯಿಂದ ಕೈಬಿಡಲಾಗಿತ್ತು. ಇವರಿಬ್ಬರೂ ಮಂಡಳಿ ಹಾಗೂ ಆಯ್ಕೆ ಸಮಿತಿಯ ಆದೇಶವನ್ನು ಪಾಲಿಸಿರಲಿಲ್ಲ. ಎರಡು ರಣಜಿ ಟ್ರೋಫಿ ಪಂದ್ಯಗಳನ್ನು ಆಡಿದ್ದರೂ, ಅಯ್ಯರ್ ಅವರನ್ನು ಗುತ್ತಿಗೆ ಪಟ್ಟಿಯಿಂದ ತೆಗೆದುಹಾಕಲಾಯಿತು.

ಮತ್ತೊಂದೆಡೆ, ರಣಜಿ ಪಂದ್ಯಗಳಲ್ಲಿ ಭಾಗವಹಿಸದ ಕಾರಣ ಮತ್ತು ಬರೋಡದಲ್ಲಿ ಪ್ರತ್ಯೇಕ ತರಬೇತಿ ಪಡೆದಿದ್ದರಿಂದ ಕಿಶನ್ ಅವರನ್ನು ಕೇಂದ್ರ ಗುತ್ತಿಗೆ ಪಟ್ಟಿಯಿಂದ ಕೈ ಬಿಡಲಾಗಿತ್ತು. ಆದರೆ ಇತ್ತೀಚೆಗೆ ಶ್ರೀಲಂಕಾದಲ್ಲಿ ನಡೆದ ಏಕದಿನ ಪಂದ್ಯಗಳ ವೇಳೆ ಅಯ್ಯರ್ ಅವರನ್ನು ರಾಷ್ಟ್ರೀಯ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಆದರೆ ಇಶಾನ್ ಟೀಮ್ ಇಂಡಿಯಾದಿಂದ ದೂರ ಉಳಿದಿದ್ದಾರೆ. ಅವರು ಕೊನೆಯದಾಗಿ 2019-20ರಲ್ಲಿ ದುಲೀಪ್ ಟ್ರೋಫಿಯಲ್ಲಿ ಭಾಗವಹಿಸಿದ್ದರು.

Story first published: Sunday, August 18, 2024, 23:02 [IST]
Other articles published on Aug 18, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+