Team India: ಇಶಾನ್ ಕಿಶನ್ ಬೊಂಬಾಟ ಆಟ, ಕೆಎಲ್ ರಾಹುಲ್‌ಗೆ ಹೆಚ್ಚಾಯ್ತು ಸಂಕಷ್ಟ!
ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಆದರೆ, ಟೀಮ್ ಇಂಡಿಯಾದ ಬ್ಯಾಟಿಂಗ್ ಬಲ ಮತ್ತೊಮ್ಮೆ ಅನಾವರಣವಾಗಿದೆ. ಮೇಲ್ಪಂಕ್ತಿಯ ಆಟಗಾರರ ವೈಫಲ್ಯದ ಹೊರತಾಗಿಯೂ ಯುವ ಆಟಗಾರರು ಭರ್ಜರಿ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಿದ್ದಾರೆ. ಈ ಮೂಲಕ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಶ್ರಮಿಸಿದ್ದಾರೆ.
ಬೇಗ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ಆಧಾರವಾದರು. ಈ ಮೂಲಕ ಉಭಯ ಆಟಗಾರರು ತಮ್ಮ ಮೇಲೆ ಏಳುತ್ತಿದ್ದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಇಶಾನ್ ಕಿಶನ್ ಪಾಕಿಸ್ತಾನದ ವಿರುದ್ಧ ಅದ್ಭುತ ಇನ್ನಿಂಗ್ಸ್ ಆಡಿದರು. ಈ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ 81 ಎಸೆತಗಳಲ್ಲಿ 82 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಅವರು 7 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಸೇರಿವೆ.

ಶಾನ್ ಕಿಶನ್ ಅವರ ಸ್ಫೋಟಕ ಇನ್ನಿಂಗ್ಸ್ ನಂತರ ಕೆಎಲ್ ರಾಹುಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವುದು ಕಷ್ಟಕರವಾಗಿದೆ. ವಾಸ್ತವವಾಗಿ, ಭಾರತೀಯ ವಿಕೆಟ್-ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಭಾರತ ತಂಡದ ಜೊತೆ ಶ್ರೀಲಂಕಾಗೆ ಹೋಗಿರಲಿಲ್ಲ. ನೇಪಾಳ ವಿರುದ್ಧ ಪಂದ್ಯಕ್ಕೆ ಮುನ್ನ ತಂಡ ಸೇರುವ ಸಾಧ್ಯತೆ ಇದೆ.
ರಾಹುಲ್ ಟೆನ್ಷನ್ ಹೆಚ್ಚಿಸಿದ ಇಶಾನ್ ಕಿಶನ್!
ನೇಪಾಳ ವಿರುದ್ಧದ ಪಂದ್ಯದ ನಂತರ ಕೆಎಲ್ ರಾಹುಲ್ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯುತ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ. ಏಕೆಂದರೆ ಸದ್ಯ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಭರ್ಜರಿ ಪ್ರದರ್ಶನ ನೀಡಿ ಆಧಾರವಾಗಿದ್ದಾರೆ. ಇವರನ್ನು ತಂಡದಿಂದ ಹೊರಗಿಟ್ಟು ತಂಡದ ರಚನೆ ಈಗ ಕಷ್ಟ. ವೈದ್ಯಕೀಯ ತಂಡವು ಕೆಎಲ್ ರಾಹುಲ್ ಫಿಟ್ ಎಂದು ಘೋಷಿಸಿದರೆ, ಅದು ಭಾರತೀಯ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ. ಆದರೆ ಇಶಾನ್ ಕಿಶನ್ ಅವರ ಬಿರುಸಿನ ಇನ್ನಿಂಗ್ಸ್‌ನ ನಂತರ ಕೆಎಲ್ ರಾಹುಲ್ ಆಡುವ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಪ್ರಶ್ನೆಗಳು ಕಾಡುತ್ತಿದೆ. ಪಾಕ್ ವಿರುದ್ಧ ಇಶಾನ್ ಕಿಶನ್ ಆಡಿದ ರೀತಿಯ ನೋಡಿದ್ರೆ, ಕೆಎಲ್ ರಾಹುಲ್ ಗೆ ಪ್ಲೇಯಿಂಗ್ ಇಲೆವೆನ್ ಹಾದಿ ಸುಲಭವಲ್ಲ ಎಂದು ಕ್ರಿಕೆಟ್ ತಜ್ಞರು ಹೇಳಿದ್ದಾರೆ.
ಐಪಿಎಲ್ 2023ರ ಋತುವಿನಲ್ಲಿ ಕೆಎಲ್ ರಾಹುಲ್ ಗಾಯಗೊಂಡಿದ್ದರು. ಬಳಿಕ ಆಟದಿಂದ ದೂರವಿದ್ದರು. ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರಂತಹ ಆಟಗಾರರು ಏಷ್ಯಾಕಪ್‌ಗಾಗಿ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಆದರೆ ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರು ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಮೊದಲ 2 ಪಂದ್ಯಗಳಲ್ಲಿ ಆಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನ ವಿರುದ್ಧದ ಪಂದ್ಯದ ನಂತರ ಭಾರತ ತಂಡ ನೇಪಾಳದೊಂದಿಗೆ ಆಡಲಿದೆ. ಇದರ ನಂತರ ಸೂಪರ್-4 ಸುತ್ತುಗಳನ್ನು ಆಡಲಾಗುತ್ತದೆ. ಈ ಟೂರ್ನಿಯ ಫೈನಲ್ ಪಂದ್ಯ ಸೆಪ್ಟೆಂಬರ್ 17 ರಂದು ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications