ಭಾರತ vs ಇಂಗ್ಲೆಂಡ್: ಭಾರತೀಯರ ಪರ ದಾಖಲೆ ಬರೆದ ಇಶಾಂತ್ ಶರ್ಮಾ

ಚೆನ್ನೈ: ಭಾರತದ ಅನುಭವಿ ವೇಗಿ ಇಶಾಂತ್ ಶರ್ಮಾ ಸದ್ಯ ಚೆನ್ನೈ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೊದಲನೇ ಟೆಸ್ಟ್ ನಲ್ಲಿ ಭಾರತೀಯ ವೇಗಿಗಳ ಪರ ವಿಶೇಷ ದಾಖಲೆ ನಿರ್ಮಿಸಿದ್ದಾರೆ.
ಟೆಸ್ಟ್ ಕ್ರಿಕೆಟ್ ನಲ್ಲಿ 300+ಕ್ಕೂ ಹೆಚ್ಚು ವಿಕೆಟ್ ಪಡೆದ ಭಾರತದ ಮೂರನೇ ವೇಗಿಯಾಗಿ ಇಶಾಂತ್ ಗುರುತಿಸಿಕೊಂಡಿದ್ದಾರೆ. 99ನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಈ ಸಾಧನೆ ತೋರಿದ್ದಾರೆ.
ಇಂಗ್ಲೆಂಡ್ ಬ್ಯಾಟ್ಸ್ಮನ್ ಡೇನಿಯಲ್ ಲಾರೆನ್ಸ್ ವಿಕೆಟ್ ಪಡೆಯುವ ಮೂಲಕ ಇಶಾಂತ್ ಈ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಇದಕ್ಕೂ ಮೊದಲು ಭಾರತ ಮಾಜಿ ನಾಯಕ ಕಪಿಲ್ ದೇವ್ (434 ವಿಕೆಟ್), ಝಹೀರ್ ಖಾನ್ (311) ಈ ದಾಖಲೆ ನಿರ್ಮಿಸಿದ್ದರು.
ಇಶಾಂತ್ ಶರ್ಮಾ ಒಟ್ಟಾರೆಯಾಗಿ 300+ ವಿಕೆಟ್ ಪಡೆದ ಭಾರತದ ಆರನೇ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಈ ದಾಖಲೆ ಸಾಲಿನಲ್ಲಿ ಅನಿಲ್ ಕುಂಬ್ಳೆ (619), ಕಪಿಲ್ ದೇವ್ (434), ಹರ್ಭಜನ್ ಸಿಂಗ್ (417), ರವಿಚಂದ್ರನ್ ಅಶ್ವಿನ್ (382), ಝಹೀರ್ ಖಾನ್ (311) ಮತ್ತು ಇಶಾಂತ್ ಶರ್ಮಾ (300*) ಇದ್ದಾರೆ.
Story first published: Monday, February 8, 2021, 22:18 [IST]
Other articles published on Feb 8, 2021
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications