ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ದಕ್ಷಿಣ ಆಫ್ರಿಕಾ ಟೆಸ್ಟ್ ಪಂದ್ಯಕ್ಕೂ ಮುನ್ನ ಇಶಾಂತ್ ಗೆ ಗಾಯ

By Mahesh

ನವದೆಹಲಿ, ಅ.18: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಪ್ರಮುಖ ವೇಗಿ ಇಶಾಂತ್ ಶರ್ಮ ಅವರು ರಣಜಿ ಪಂದ್ಯದ ವೇಳೆ ಗಾಯ ಮಾಡಿಕೊಂಡಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಅಭಿಮಾನಿಗೆ ಆಘಾತಕಾರಿ ಸುದ್ದಿ ಕೊಟ್ಟಿದ್ದಾರೆ.

ರಣಜಿ ಟ್ರೋಫಿಯಲ್ಲಿ ಹರ್ಯಾಣ ವಿರುದ್ಧದ ಪಂದ್ಯದಲ್ಲಿ ಭಾರತದ ವೇಗದ ಬೌಲರ್ ಹಾಗೂ ದೆಹಲಿಯ ಆಟಗಾರ ಇಶಾಂತ್ ಶರ್ಮ ಸ್ನಾಯುಸೆಳೆತಕ್ಕೆ ಸಿಲುಕಿ ನರಳಿದ್ದಾರೆ. ಗಾಯದ ನಡುವೆ ಬೌಲಿಂಗ್ ಮಾಡಿದ್ದರಿಂದ ನೋವು ಉಲ್ಬಣವಾಗಿದೆ.

ರಣಜಿ ಪಂದ್ಯದ ಮೂರನೇ ದಿನ ಶನಿವಾರ ಇಶಾಂತ್ ಶರ್ಮ ಮೈದಾನಕ್ಕೆ ಇಳಿದಿರಲಿಲ್ಲ. ಶುಕ್ರವಾರ ಸಂಜೆ ಆರು ಓವರ್‌ಗಳನ್ನು ಮಾತ್ರ ಬೌಲ್ ಮಾಡಲು ಸಾಧ್ಯವಾಗಿತ್ತು. ಇಶಾಂತ್ ಗಾಯದ ಸಮಸ್ಯೆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ. [ಗಾಂಧಿ-ಮಂಡೇಲಾ ಕ್ರಿಕೆಟ್ ಸರಣಿ ಫುಲ್ ಗೈಡ್]

Ishant Sharma is injured ahead of South Africa Test series


ಇಶಾಂತ್ ಅವರ ಸ್ನಾಯು ಸೆಳೆತ ಸಮಸ್ಯೆ ಗಮನಿಸಿದರೆ ಕನಿಷ್ಠ ಎರಡರಿಂದ ಆರು ವಾರಗಳ ವಿಶ್ರಾಂತಿ ಪಡೆಯಬೇಕಾಗುತ್ತದೆ. ಎಲ್ಲವೂ ಗಾಯದ ಸ್ವರೂಪವನ್ನು ಅವಲಂಬಿಸಿರುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಅದರೆ, ಬಿಸಿಸಿಐ ಆಗಲಿ, ದೆಹಲಿ ಕ್ರಿಕೆಟ್ ತಂಡದ ವಕ್ತಾರರಾಗಲಿ ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ.

ಇಶಾಂತ್ ಐಸಿಸಿಯಿಂದ ಒಂದು ಪಂದ್ಯ ನಿಷೇಧ ಎದುರಿಸುತ್ತಿರುವ ಕಾರಣ ದಕ್ಷಿಣ ಆಫ್ರಿಕ ವಿರುದ್ಧದ ಮೊದಲ ಪಂದ್ಯದಿಂದ ವಂಚಿತರಾಗುವ ಸಾಧ್ಯತೆಯಿದೆ. ಒಂದು ವೇಳೆ ಗಾಯದ ಸಮಸ್ಯೆ ಗಂಭೀರ ಸ್ವರೂಪದ್ದಾಗಿದ್ದರೆ ಬೆಂಗಳೂರಿನಲ್ಲಿ ನಡೆಯಲಿರುವ ಎರಡನೆ ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯಬೇಕಾಗುತ್ತದೆ.

ದಕ್ಷಿಣ ಆಫ್ರಿಲಾ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಅಕ್ಟೋಬರ್ 19 ಸೋಮವಾರ ತಂಡದ ಆಯ್ಕೆ ಮಾಡಲಾಗುತ್ತದೆ. ಈಗಾಗಲೇ ಒಂದು ಟೆಸ್ಟ್ ಪಂದ್ಯದ ನಿಷೇಧಕ್ಕೆ ಒಳಗಾಗಿರುವ ಇಶಾಂತ್ ಶರ್ಮ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ. ಬೆಂಗಳೂರಿನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಾಗುತ್ತಾರೋ ಇಲ್ಲವೋ ಕಾದು ನೋಡಬೇಕಿದೆ. (ಪಿಟಿಐ)

Story first published: Wednesday, January 3, 2018, 10:03 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X