Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇಶಾಂತ್ ಗೆ ಚಿಕೂನ್ ಗುನ್ಯ, ಮೊದಲ ಟೆಸ್ಟ್ ನಿಂದ ಔಟ್!

ಕಾನ್ಪುರ, ಸೆ. 21 : ಟೀಂ ಇಂಡಿಯಾದ ವೇಗದ ಬೌಲರ್‌ ಇಶಾಂತ್ ಶರ್ಮಾ ಅವರು ಚಿಕೂನ್ ಗುನ್ಯದಿಂದ ಬಳಲುತ್ತಿದ್ದಾರೆ. ಇದರಿಂದ ನ್ಯೂಜಿಲೆಂಡ್ ವಿರುದ್ಧ ಸೆ.22 ರಿಂದ ಆರಂಭವಾಗಲಿರುವ ಮೊದಲ ಟೆಸ್ಟ್‌ ಕ್ರಿಕೆಟ್‌ ಪಂದ್ಯದಿಂದ ಹೊರ ಉಳಿಯಲಿದ್ದಾರೆ.

ಇಶಾಂತ್ ಶರ್ಮಾ ಅವರು ಚಿಕೂನ್ ಗುನ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಭಾರತ ಕ್ರಿಕೆಟ್‌ ತಂಡದ ಕೋಚ್ ಕನ್ನಡಿಗ ಅನಿಲ್‌ ಕುಂಬ್ಳೆ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಖಚಿತಪಡಿಸಿದ್ದಾರೆ.

Ishant Sharma

ಆದ್ದರಿಂದ ಸೆ.22 ರಿಂದ ಗ್ರೀನ್ ಪಾರ್ಕ್ ಕಾನ್ಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಆಡುತ್ತಿಲ್ಲ. ಅವರ ಬದಲು ಬೇರೆ ಆಟಗಾರನನ್ನು ಆಯ್ಕೆ ಮಾಡುವಂತೆ ಬಿಸಿಸಿಐಯನ್ನು ಕೇಳಿಲ್ಲ, ಇರುವ ಆಟಗಾರರಲ್ಲಿಯೇ ಅಂತಿಮ ಹನ್ನೊಂದರ ತಂಡವನ್ನು ಆಯ್ಕೆ ಮಾಡಲಾಗುವುದು ಎಂದು ಕುಂಬ್ಳೆ ಹೇಳಿದರು.

28 ವರ್ಷದ ಬಲಗೈ ವೇಗಿ ಇಶಾಂತ್ 72 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು ಒಟ್ಟು 209 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ 4 ವೇಗಿಗಳನ್ನು ಆಯ್ಕೆ ಮಾಡಲಾಗಿತ್ತು.

ಆದರೆ ಇಶಾಂತ್ ಮೊದಲ ಪಂದ್ಯದಿಂದ ಹೊರ ಉಳಿಯುವುದರಿಂದ ಇನ್ನುಳಿದ ವೇಗಿಗಳಾದ ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮತ್ತು ಭುವನೇಶ್ವರ ಕುಮಾರ್‌ ಮೇಲೆ ಹೆಚ್ಚು ಜವಾಬ್ದಾರಿಯಿದೆ.

Story first published: Wednesday, January 3, 2018, 10:04 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+