ಟೀಮ್ ಇಂಡಿಯಾಗೆ ವಿಶ್ವಕಪ್ ಗೆಲ್ಲಿಸಿಕೊಡುವ ಆಸೆ ವ್ಯಕ್ತಪಡಿಸಿದ ರವೀಂದ್ರ ಜಡೇಜಾ

ಭಾರತದಲ್ಲಿ ನಡೆಯಬೇಕಾಗಿದ್ದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಕೊರೊನಾವೈರಸ್ ಕಾರಣದಿಂದ ಮುಂದೂಡಲ್ಪಟ್ಟಿತ್ತು. ಹೀಗೆ ಕಳೆದ ವರ್ಷ ಮುಂದೂಡಲ್ಪಟ್ಟಿದ್ದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಈ ವರ್ಷ ಯುಎಇನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಅಕ್ಟೋಬರ್ 17ರಿಂದ ನವೆಂಬರ್‌ 14ರವರೆಗೆ ಟಿ ಟ್ವೆಂಟಿ ವಿಶ್ವಕಪ್ ಯುಎಇಯಲ್ಲಿ ನಡೆಯಲಿದ್ದು ಈ ಟೂರ್ನಿ ಕುರಿತು ಸಾಕಷ್ಟು ನಿರೀಕ್ಷೆಗಳಿವೆ.

ಭಾರತ vs ಇಂಗ್ಲೆಂಡ್: ಸಿರಾಜ್ ನಡೆದುಕೊಂಡ ರೀತಿ ಸರಿಯಲ್ಲ ಎಂದು ಬುದ್ಧಿ ಹೇಳಿದ ದಿನೇಶ್ ಕಾರ್ತಿಕ್ಭಾರತ vs ಇಂಗ್ಲೆಂಡ್: ಸಿರಾಜ್ ನಡೆದುಕೊಂಡ ರೀತಿ ಸರಿಯಲ್ಲ ಎಂದು ಬುದ್ಧಿ ಹೇಳಿದ ದಿನೇಶ್ ಕಾರ್ತಿಕ್

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಹತ್ತಿರ ಬರುತ್ತಿದ್ದಂತೆ ವಿವಿಧ ತಂಡಗಳ ಆಟಗಾರರು ಟೂರ್ನಿಗೆ ಸಜ್ಜಾಗುತ್ತಿದ್ದು, ಮುಂದಿನ ತಿಂಗಳಿನಿಂದ ಯುಎಇಯಲ್ಲಿ ಮುಂದುವರಿಯಲಿರುವ ಐಪಿಎಲ್ ಮುಂದುವರಿದ ಭಾಗ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಭಾಗವಹಿಸುವ ಆಟಗಾರರಿಗೆ ಒಳ್ಳೆಯ ಅನುಭವ ನೀಡಿದಂತಾಗುತ್ತದೆ.

ಕ್ರಿಕೆಟ್ ಜಗತ್ತಿನಲ್ಲಿ ಆಗಸ್ಟ್ 12ರಂದು ನಡೆದದ್ದೇನು?ಕ್ರಿಕೆಟ್ ಜಗತ್ತಿನಲ್ಲಿ ಆಗಸ್ಟ್ 12ರಂದು ನಡೆದದ್ದೇನು?

ಇದೀಗ ಟಿ ಟ್ವೆಂಟಿ ವಿಶ್ವಕಪ್ ಕುರಿತು ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ಮಾತನಾಡಿದ್ದು ಉತ್ತಮ ಆಟವನ್ನಾಡಿ ಟೀಮ್ ಇಂಡಿಯಾಗೆ ಟಿ ಟ್ವೆಂಟಿ ವಿಶ್ವಕಪ್ ಗೆಲ್ಲಿಸಿಕೊಡಬೇಕೆಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ. 'ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಉತ್ತಮ ಆಟವನ್ನಾಡಿ ನನ್ನ ತಂಡಕ್ಕೆ ವಿಶ್ವಕಪ್ ಗೆಲ್ಲಿಸಿಕೊಡುವ ಅವಕಾಶ ನನಗೆ ಲಭಿಸಿದೆ. ನನಗೆ ಅವಕಾಶ ಸಿಕ್ಕಾಗಲೆಲ್ಲ ಶೇ. 100ರಷ್ಟು ಕೊಡುಗೆ ನೀಡುವ ಪ್ರಯತ್ನ ಮಾಡುತ್ತೇನೆ. ಟಿ ಟ್ವೆಂಟಿ ವಿಶ್ವಕಪ್‌ನಂತಹ ಮಹತ್ವದ ಟೂರ್ನಿಯಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸುವುದು ದೊಡ್ಡ ವಿಷಯ' ಎಂದು ರವೀಂದ್ರ ಜಡೇಜಾ ಹೇಳಿದ್ದಾರೆ.

ಭಾರತ vs ಇಂಗ್ಲೆಂಡ್: ಸಿರಾಜ್ ನಡೆದುಕೊಂಡ ರೀತಿ ಸರಿಯಲ್ಲ ಎಂದು ಬುದ್ಧಿ ಹೇಳಿದ ದಿನೇಶ್ ಕಾರ್ತಿಕ್ಭಾರತ vs ಇಂಗ್ಲೆಂಡ್: ಸಿರಾಜ್ ನಡೆದುಕೊಂಡ ರೀತಿ ಸರಿಯಲ್ಲ ಎಂದು ಬುದ್ಧಿ ಹೇಳಿದ ದಿನೇಶ್ ಕಾರ್ತಿಕ್

ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿ ನಿರತರಾಗಿರುವ ರವೀಂದ್ರ ಜಡೇಜಾ ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 86 ಎಸೆತಗಳಲ್ಲಿ 56 ರನ್ ಬಾರಿಸಿ ಭಾರತದ ಪರ ಉತ್ತಮ ಆಟವನ್ನಾಡಿದ್ದರು. ಹೀಗೆ ಏಕದಿನ, ಟಿ ಟ್ವೆಂಟಿ ಮತ್ತು ಟೆಸ್ಟ್ ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲಿಯೂ ಟೀಮ್ ಇಂಡಿಯಾ ಪರ ಉತ್ತಮ ಆಟವನ್ನಾಡಿ ಮಿಂಚುತ್ತಿರುವ ರವೀಂದ್ರ ಜಡೇಜಾ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪರ ಉತ್ತಮ ಆಟವನ್ನು ಆಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

 ಭಾರತ vs ಇಂಗ್ಲೆಂಡ್: ಸಿರಾಜ್ ನಡೆದುಕೊಂಡ ರೀತಿ ಸರಿಯಲ್ಲ ಎಂದು ಬುದ್ಧಿ ಹೇಳಿದ ದಿನೇಶ್ ಕಾರ್ತಿಕ್ ಭಾರತ vs ಇಂಗ್ಲೆಂಡ್: ಸಿರಾಜ್ ನಡೆದುಕೊಂಡ ರೀತಿ ಸರಿಯಲ್ಲ ಎಂದು ಬುದ್ಧಿ ಹೇಳಿದ ದಿನೇಶ್ ಕಾರ್ತಿಕ್

ಇನ್ನು ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿ ಮುಗಿದ ನಂತರ ದುಬೈಗೆ ಹಾರಲಿರುವ ರವಿಂದ್ರ ಜಡೇಜಾ ಮುಂದುವರಿಯಲಿರುವ ಐಪಿಎಲ್ ಸಲುವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲಾರ್ಧದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಅತ್ಯದ್ಭುತ ಆಟವನ್ನಾಡಿದ್ದ ರವೀಂದ್ರ ಜಡೇಜಾ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿದ್ದು ಮುಂದುವರೆದಿರುವ ಐಪಿಎಲ್ ಟೂರ್ನಿಯಲ್ಲಿ ರವೀಂದ್ರ ಜಡೇಜಾ ಭಾಗವಹಿಸುವುದರಿಂದ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಸಹಕಾರಿಯಾಗಲಿದೆ. ಹೌದು ಮುಂದುವರಿಯಲಿರುವ ಐಪಿಎಲ್ ಟೂರ್ನಿ ಯುಎಇಯಲ್ಲಿ ನಡೆಯಲಿದೆ ಹಾಗೂ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಕೂಡ ಯುಎಇಯಲ್ಲಿಯೇ ನಡೆಯುವುದರಿಂದ ರವೀಂದ್ರ ಜಡೇಜಾ ಸೇರಿದಂತೆ ಇನ್ನೂ ಕೆಲ ಆಟಗಾರರಿಗೆ ಮುಂದುವರಿಯಲಿವ ಐಪಿಎಲ್ ಟೂರ್ನಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ನಡೆಸಲಿರುವ ಅಭ್ಯಾಸ ಪಂದ್ಯಗಳಿದ್ದಂತೆ ಎಂದರೆ ತಪ್ಪಾಗಲಾರದು..

KL ರಾಹುಲ್ ಪರಾಕ್ರಮಕ್ಕೆ ದಿಗ್ಗಜ ಕ್ರಿಕೆಟಿಗರ ದಾಖಲೆಗಳೇ ಪುಡಿಪುಡಿ | Oneindia Kannada

ಭಾರತ vs ಇಂಗ್ಲೆಂಡ್: ಅಶ್ವಿನ್‌ ಬದಲು ಇಶಾಂತ್‌ಗೆ ತಂಡದಲ್ಲಿ ಸ್ಥಾನ ನೀಡಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಕೊಹ್ಲಿಭಾರತ vs ಇಂಗ್ಲೆಂಡ್: ಅಶ್ವಿನ್‌ ಬದಲು ಇಶಾಂತ್‌ಗೆ ತಂಡದಲ್ಲಿ ಸ್ಥಾನ ನೀಡಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಕೊಹ್ಲಿ

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 22 - October 28 2021, 07:30 PM
ಆಸ್ಟ್ರೇಲಿಯಾ
ಶ್ರೀಲಂಕಾ
Predict Now

For Quick Alerts
ALLOW NOTIFICATIONS
For Daily Alerts
Story first published: Thursday, August 12, 2021, 23:28 [IST]
Other articles published on Aug 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X