ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೊಹ್ಲಿ ವಿಶ್ವದ ಬೆಸ್ಟ್‌ ಬ್ಯಾಟ್ಸ್‌ಮನ್ ಎಂದು ಸಾಬೀತುಪಡಿಸುವ ಸಮಯ ಬಂದಿದೆ: ಶೇನ್ ವಾರ್ನ್‌

Virat kohli

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಇತ್ತೀಚೆಗಷ್ಟೇ ದಿಢೀರನೆ ಟೆಸ್ಟ್ ಕ್ರಿಕೆಟ್ ನಾಯಕತ್ವಕ್ಕೆ ರಾಜೀನಾಮೆ ನೀಡುವ ಮೂಲಕ ಇಡೀ ಕ್ರಿಕೆಟ್‌ ಲೋಕಕ್ಕೆ ಅಚ್ಚರಿ ಮೂಡಿಸಿದ್ರು. ದಕ್ಷಿಣ ಆಫ್ರಿಕಾ ವಿರುದ್ಧ 1-2 ಅಂತರದಲ್ಲಿ ಭಾರತ ಟೆಸ್ಟ್ ಸರಣಿ ಸೋತ ಬಳಿಕ ಕೊಹ್ಲಿ ದೀರ್ಘ ಫಾರ್ಮೆಟ್‌ನ ಕ್ರಿಕೆಟ್ ನಾಯಕತ್ವದಿಂದ ಕೆಳಗಿಳಿದರು.

ಇದಕ್ಕೂ ಮೊದಲು ಟಿ20 ನಾಯಕತ್ವದಿಂದ ಹೊರಬಂದಿದ್ದ, ಏಕದಿನ ನಾಯಕತ್ವದಿಂದ ವಜಾಗೊಂಡಿದ್ದ ವಿರಾಟ್ ಕಳೆದ ಎರಡು ವರ್ಷಗಳಿಂದ ಕಷ್ಟದ ಹಾದಿ ಎದುರಿಸುತ್ತಿದ್ದಾರೆ. 70 ಅಂತರಾಷ್ಟ್ರೀಯ ಶತಕಗಳ ಒಡೆಯನಾದ ವಿರಾಟ್‌ ಕಳೆದ ಎರಡು ವರ್ಷದಿಂದ ಒಂದೇ ಒಂದು ಶತಕವನ್ನು ದಾಖಲಿಸಿಲ್ಲ. ಆದ್ರೂ ವಿರಾಟ್ ಬ್ಯಾಟಿಂಗ್‌ನಲ್ಲಿ ಮತ್ತೆ ತನ್ನ ಅದ್ಭುತ ಫಾರ್ಮ್‌ ತೋರುವ ಅತ್ಯುತ್ತಮ ಸಮಯ ಇದಾಗಿದೆ.

ಆತನಿಲ್ಲದೇ ನಮ್ಮ ದೇಶಕ್ಕೆ ಪ್ರವಾಸ ಕೈಗೊಂಡ ಟೀಮ್ ಇಂಡಿಯಾ ಸೋತಿದೆ ಎಂದ ಡೇಲ್ ಸ್ಟೇನ್!ಆತನಿಲ್ಲದೇ ನಮ್ಮ ದೇಶಕ್ಕೆ ಪ್ರವಾಸ ಕೈಗೊಂಡ ಟೀಮ್ ಇಂಡಿಯಾ ಸೋತಿದೆ ಎಂದ ಡೇಲ್ ಸ್ಟೇನ್!

ಮೂರು ಫಾರ್ಮೆಟ್‌ನಲ್ಲಿ ರನ್ ಹೊಳೆಯನ್ನೇ ಹರಿಸಬಲ್ಲ ವಿರಾಟ್ ಕೊಹ್ಲಿ ಮತ್ತೆ ತಮ್ಮ ಹಳೆಯ ರೂಪ ತೋರಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಶೇನ್ ವಾರ್ನ್ ನಂಬಿದ್ದಾರೆ. ಟೀಂ ಇಂಡಿಯಾ ಕಂಡಂತಹ ಯಶಸ್ವಿ ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ 68 ಟೆಸ್ಟ್ ಪಂದ್ಯಗಳಲ್ಲಿ 40 ಪಂದ್ಯ ಗೆದ್ದು ಬೀಗಿದೆ.

2019ರಲ್ಲಿ ಕೊಹ್ಲಿ ನಾಯಕತ್ವದಲ್ಲಿ ಭಾರತ ಮೊದಲ ಬಾರಿಗೆ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆದ್ದಿತು. ಆತ 2014ರಲ್ಲಿ ನಾಯಕತ್ವಕ್ಕೆ ಏರಿದ ಬಳಿಕ 7ನೇ ಸ್ಥಾನದಲ್ಲಿ ಭಾರತವನ್ನ ನಂಬರ್ ಒನ್ ಟೆಸ್ಟ್‌ ತಂಡವನ್ನಾಗಿ ಮಾಡಿದ್ದಾರೆ.

ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿರು ಟೀಂ ಇಂಡಿಯಾದ ನಾಯಕತ್ವ ವಹಿಸುವುದು ಅಷ್ಟು ಸುಲಭದ ಮಾತಲ್ಲ.ಆದ್ರೆ ವಿರಾಟ್ ಕೊಹ್ಲಿ ಅತ್ಯಂತ ಯಶಸ್ವಿಯಾಗಿ ಭಾರತ ತಂಡವನ್ನ ಮುನ್ನಡೆಸಿದ್ದಾರೆ ಎಂದು ವಾರ್ನ್ ಅಭಿಪ್ರಾಯಪಟ್ಟಿದ್ದಾರೆ.

ನಾಯಕತ್ವದ ಹೊರೆಯ ಹೊರತಾಗಿಯೂ ಬ್ಯಾಟ್‌ನೊಂದಿಗೆ ಅವರು ಅತ್ಯುತ್ತಮ ಆಟವಾಡಿದ್ದಾರೆ. ಈಗಾಗಲೇ 70 ಅಂತರಾಷ್ಟ್ರೀಯ ಶತಕಗಳನ್ನು ಬಾರಿಸಿರುವ ಕೊಹ್ಲಿ , ಸಚಿನ್ ತೆಂಡೂಲ್ಕರ್ ಅವರ 100 ಅಂತರಾಷ್ಟ್ರೀಯ ಶತಕಗಳ ದಾಖಲೆಯನ್ನು ಮುರಿಯುವ ಹಾದಿಯಲ್ಲಿದ್ದಾರೆ. ಆದಾಗ್ಯೂ, ಅವರ ಕೊನೆಯ ಶತಕವು 2019 ರಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತದ ಮೊದಲ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಮೂಡಿದೆ.

ವಿರಾಟ್ ಕೊಹ್ಲಿ ಬ್ಯಾಟಿಂಗ್‌ನಲ್ಲಿ ಮತ್ತೆ ತಮ್ಮ ಅದ್ಭುತ ಫಾರ್ಮ್‌ಗೆ ಮರಳುತ್ತಾರೆ ಎಂದು ಶೇಣ್ ವಾರ್ನ್ ನಂಬಿದ್ದಾರೆ. ಅವರು ಅತ್ಯುತ್ತಮ ಕ್ರಿಕೆಟಿಗನಾಗಿದ್ದು, ಕೊಹ್ಲಿ ನಾಯಕತ್ವದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ವಿಶ್ವ ಕ್ರಿಕೆಟ್‌ನಲ್ಲಿ ಭಾರತ ಪ್ರಾಬಲ್ಯ ಸಾಧಿಸಿದೆ ಎಂದು ಅವರು ಶ್ಲಾಘಿಸಿದರು.

''ವಿರಾಟ್ ಕಂಬ್ಯಾಕ್ ಮಾಡಲು , ಎಲ್ಲರಿಗೂ ತಾನು ಏಕೆ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್ ಎಂಬುದನ್ನು ಸಾಬೀತುಪಡಿಸಲು ಇದು ಉತ್ತಮ ಅವಕಾಶ ಎಂದು ನಾನು ಭಾವಿಸುತ್ತೇನೆ. ಅವರು ತಮ್ಮ ಬ್ಯಾಟಿಂಗ್‌ನಲ್ಲಿ ಗಮನಹರಿಸಬಹುದು ಮತ್ತು ಎಲ್ಲಾ ರೀತಿಯ ಫಾರ್ಮೆಟ್‌ನಲ್ಲೂ ಶತಕಗಳನ್ನು ಗಳಿಸಲು ಪ್ರಾರಂಭಿಸುತ್ತಾರೆ ಎಂದು ಭಾವಿಸುತ್ತೇವೆ. ಅವರು ತಮ್ಮ ಸಹ ಆಟಗಾರರಿಗೆ ಸ್ಫೂರ್ತಿ ನೀಡಿದ್ದಾರೆ. ಭಾರತವು ಕ್ರಿಕೆಟ್‌ನ ಅದ್ಭುತ ಬ್ರ್ಯಾಂಡ್ ಅನ್ನು ಆಡಿದೆ ಮತ್ತು ಅದು ಮುಂದುವರಿಯುತ್ತದೆ ಎಂದು ಆಶಿಸೋಣ'' ಎಂದು ಶೇನ್ ವಾರ್ನ್ ಹೇಳಿದ್ದಾರೆ.

ಮೊಹಮ್ಮದ್ ಶಮಿಗೆ ಟೆಸ್ಟ್ ತಂಡದ ನಾಯಕನಾಗುವ ಆಸೆ | Oneindia Kannada

ವಿರಾಟ್ ಕೊಹ್ಲಿ ಟೀಂ ಇಂಡಿಯಾ ನಾಯಕನಾಗಿ ಅದ್ಭುತ ದಾಖಲೆ ಹೊಂದಿದ್ದಾರೆ. ಟೆಸ್ಟ್ ಕ್ರಿಕೆಟ್‌ನ ಜೊತೆಗೆ ಲಿಮಿಟೆಡ್ ಓವರ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾದಂತಹ ಬಲಿಷ್ಠ ರಾಷ್ಟ್ರಗಳ ಎದುರು ಸರಣಿ ಗೆಲುವು ತಂದುಕೊಟ್ಟಿದ್ದಾರೆ. ವಿರಾಟ್ ನಾಯಕತ್ವದಲ್ಲಿ ಟೀಂ ಇಂಡಿಯಾ 19 ಏಕದಿನ ದ್ವಿಪಕ್ಷೀಯ ಸರಣಿಗಳಲ್ಲಿ 15 ಪಂದ್ಯಗಳನ್ನು ಗೆದ್ದಿದೆ. ತವರು ನೆಲದಲ್ಲಿ, ಅವರು 9 ದ್ವಿಪಕ್ಷೀಯ ಸರಣಿಗಳಲ್ಲಿ 8 ಅನ್ನು ಗೆದ್ದಿದ್ದಾರೆ. ಆದ್ರೆ ವಿರಾಟ್‌ ತಮ್ಮ ನಾಯಕತ್ವದಲ್ಲಿ ಒಂದೇ ಒಂದು ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗದೇ ಇರುವ ನಿರಾಸೆಯು ಸಹ ಇದೆ.

Story first published: Wednesday, January 26, 2022, 17:08 [IST]
Other articles published on Jan 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X