IPL 2025, RCB vs GT: ಗುಜರಾತ್ ವಿರುದ್ಧ ಕಣಕ್ಕಿಳಿಯಲು ಸ್ಫೋಟಕ ಬ್ಯಾಟರ್ ಸಿದ್ಧತೆ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರಲ್ಲಿ ಇಂದು ಅಂದರೆ ಬುಧವಾರ ಬ್ಲಾಕ್‌ಬಸ್ಟರ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಈ ಹೈವೋಲ್ಟೇಜ್ ಪಂದ್ಯವನ್ನು ಆಯೋಜಿಸುತ್ತಿದೆ. ಐಪಿಎಲ್ 2025 ರಲ್ಲಿ ಆರ್‌ಸಿಬಿ ಅದ್ಭುತ ಪ್ರದರ್ಶನ ನೀಡಿದ್ದು, ತವರು ನೆಲದಲ್ಲಿ ಇದು ಮೊದಲ ಪಂದ್ಯವಾಗಿದೆ.
ಐಪಿಎಲ್ 2025 ರ ಸೀಸನ್ ಅನ್ನು ಭರ್ಜರಿ ಗೆಲುವಿನೊಂದಿಗೆ ಆರಂಭಿಸಿದ್ದ ಆರ್‌ಸಿಬಿ, ಈಗಾಗಲೇ 2 ಪಂದ್ಯಗಳನ್ನು ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಐಪಿಎಲ್‌ನ ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಸೋಲಿಸಿದ್ದ ಆರ್‌ಸಿಬಿ, ಎರಡನೇ ಪಂದ್ಯದಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿತು. ಈಗ ತವರಿನಲ್ಲಿ ಆರ್‌ಸಿಬಿ ತಮ್ಮ ಮೂರನೇ ಪಂದ್ಯದಲ್ಲಿ ಗುಜರಾತ್ ತಂಡವನ್ನು ಎದುರಿಸಲು ಸಿದ್ಧವಾಗಿದೆ.

ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಲು ಆರ್‌ಸಿಬಿ ಸ್ಫೋಟಕ ಬ್ಯಾಟರ್ ಅನ್ನು ಕಣಕ್ಕಿಳಿಸಲು ಸಿದ್ಧತೆ ಮಾಡಿಕೊಂಡಿದೆ. ಒಂದು ವೇಳೆ ಈ ಸ್ಫೋಟಕ ಬ್ಯಾಟರ್ ಆಡುವ ಅವಕಾಶ ಪಡೆದುಕೊಂಡರೆ ಗುಜರಾತ್ ತಂಡವನ್ನು ಸುಲಭವಾಗಿ ಸೋಲಿಸಬಹುದಾಗಿದೆ. ಈ ಸ್ಫೋಟಕ ಬ್ಯಾಟರ್ ಬೇರೆ ಯಾರು ಅಲ್ಲ, ಇಂಗ್ಲೆಂಡ್ ತಂಡದ ಪರ ಇತ್ತೀಚೆಗೆ ಮಿಂಚುತ್ತಿರುವ ಯುವ ಬ್ಯಾಟಿಂಗ್ ಆಲ್‌ರೌಂಡರ್ ಜಾಕೋಬ್ ಬೆಥೆಲ್.
ಗುಜರಾತ್ ಟೈಟಾನ್ಸ್ ವಿರುದ್ಧ ಆಡುವ ಮೂಲಕ ಜಾಕೋಬ್ ಬೆಥೆಲ್ ಐಪಿಎಲ್‌ಗೆ ಪಾದಾರ್ಪಣೆ ಮಾಡಬಹುದು. ತಮ್ಮ ಮೊದಲ ತವರಿನ ಪಂದ್ಯವನ್ನು ಗೆಲ್ಲುವ ಗುರಿಯನ್ನು ಹೊಂದಿರುವ ಆರ್‌ಸಿಬಿ, ಬಲಿಷ್ಠ ತಂಡದೊಂದಿಗೆ ಗುಜರಾತ್ ಟೈಟಾನ್ಸ್ ಅನ್ನು ಎದುರಿಸಲಿದೆ. ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ಜಾಕೋಬ್ ಬೆಥೆಲ್ ಇಂದು ಆರ್‌ಸಿಬಿ ಪರ ಮೈದಾನಕ್ಕಿಳಿಯುವ ಸಾಧ್ಯತೆಯಿದೆ.
ಕಳೆದ ಎರಡು ಪಂದ್ಯಗಳಿಂದ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಸರಾಸರಿ ಪ್ರದರ್ಶನ ನೀಡಿದ್ದು, ಇಂದಿನ ಪಂದ್ಯದಿಂದ ಅವರು ಹೊರಗುಳಿಯುವ ಸಾಧ್ಯತೆ ಇದೆ. ಲಿವಿಂಗ್‌ಸ್ಟೋನ್ ಹೊರಗುಳಿದರೆ, ಅವರ ಸ್ಥಾನದಲ್ಲಿ ಜಾಕೋಬ್ ಬೆಥೆಲ್ ಮೈದಾನಕ್ಕಿಳಿಯಲಿದ್ದಾರೆ. ಇದೀಗ ಎಲ್ಲರ ಚಿತ್ತ ಬೆಥೆಲ್ ಮೇಲೆ ನೆಟ್ಟಿದೆ.
ಆರ್‌ಸಿಬಿ vs ಜಿಟಿ ಹೆಡ್ ಟು ಹೆಡ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಇಲ್ಲಿಯವರೆಗೆ ಐಪಿಎಲ್‌ನಲ್ಲಿ ಒಟ್ಟು 5 ಬಾರಿ ಮುಖಾಮುಖಿಯಾಗಿವೆ. ಗುಜರಾತ್ ವಿರುದ್ಧ ಆರ್‌ಸಿಬಿ 3 ಪಂದ್ಯಗಳನ್ನು ಗೆದ್ದಿದ್ದರೆ, ಗುಜರಾತ್ 2 ಬಾರಿ ಗೆದ್ದಿದೆ. ಗುಜರಾತ್ ವಿರುದ್ಧ 206 ರನ್‌ಗಳು ಆರ್‌ಸಿಬಿಯ ಅತ್ಯಧಿಕ ಸ್ಕೋರ್ ಆಗಿದೆ. ಅಲ್ಲದೆ, 170 ರನ್ ಅತ್ಯಂತ ಕಡಿಮೆ ಸ್ಕೋರ್ ಆಗಿದೆ. ಆರ್‌ಸಿಬಿ ವಿರುದ್ಧ ಗುಜರಾತ್‌ನ ಗರಿಷ್ಠ ಸ್ಕೋರ್ 200 ಮತ್ತು ಕನಿಷ್ಠ ಸ್ಕೋರ್ 147 ರನ್‌ಗಳು. ಇಂದಿನ ಪಂದ್ಯದಲ್ಲಿ ಈ ದಾಖಲೆಗಳನ್ನು ಅಳಿಸಿ ಹಾಕುವ ಎಲ್ಲಾ ಅವಕಾಶಗಳನ್ನು ಉಭಯ ತಂಡಗಳು ಹೊಂದಿದೆ.
ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್-11
ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ದೇವದತ್ ಪಡಿಕ್ಕಲ್, ಲಿಯಾಮ್ ಲಿವಿಂಗ್‌ಸ್ಟೋನ್/ಜೇಕಬ್ ಬೆಥೆಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹೇಜಲ್‌ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications