For Quick Alerts
ALLOW NOTIFICATIONS  
For Daily Alerts
 

Jacob Bethel: ಚಾಂಪಿಯನ್ಸ್ ಟ್ರೋಫಿಯಿಂದ ಆರ್‌ಸಿಬಿ ಆಲ್‌ರೌಂಡರ್ ಔಟ್

ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಫೆಬ್ರವರಿ 19 ರಿಂದ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ, ಇಂಗ್ಲೆಂಡ್ ತಂಡವು ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ. ಕಳೆದ ಭಾನುವಾರ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವು ಭಾರತ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕಳೆದುಕೊಳ್ಳಬೇಕಾಯಿತು. ಈಗ ಇಂಗ್ಲೆಂಡ್ ತಂಡದ ಯುವ ಆಲ್‌ರೌಂಡರ್ 2025ರ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಇದು ಇಂಗ್ಲೆಂಡ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಇಂಗ್ಲೆಂಡ್‌ನ ಯುವ ಸ್ಟಾರ್ ಆಲ್‌ರೌಂಡರ್ ಜೇಕಬ್‌ ಬೆಥೆಲ್‌ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗಿದ್ದಾರೆ. ನಾಗ್ಪುರದಲ್ಲಿ ನಡೆದ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅವರು ಅರ್ಧಶತಕ ಗಳಿಸಿ ಎಲ್ಲರ ಗಮನ ಸೆಳೆದಿದ್ದರು. ಇಂಗ್ಲೆಂಡ್ ತಂಡಕ್ಕೆ ಅಗತ್ಯವಿದ್ದಾಗ ಅವರು ನೆರವಾಗಿದ್ದರು. ಅವರು 64 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 51 ರನ್ ಗಳಿಸಿ ಮಿಂಚಿದ್ದರು.

Jacob Bethel out of ICC Champions Trophy 2025

ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಜೇಕಬ್‌ ಬೆಥೆಲ್‌ ಎಡ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದರು. ಇದಾದ ನಂತರ, ಅವರನ್ನು ಭಾರತದ ವಿರುದ್ಧದ ಉಳಿದ ಎರಡು ಪಂದ್ಯಗಳಿಗೆ ತಂಡದಿಂದ ಬಿಡುಗಡೆ ಮಾಡಲಾಯಿತು. ಇದರೊಂದಿಗೆ, ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ಜೇಕಬ್‌ ಬೆಥೆಲ್‌ ಬದಲಿಗೆ ಟಾಮ್ ಬ್ಯಾಂಟನ್ ಭಾರತಕ್ಕೆ ಬರಲಿದ್ದಾರೆ ಎಂದು ಘೋಷಿಸಿತು. ಈಗ ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿಯೂ ಇಂಗ್ಲೆಂಡ್ ತಂಡದಲ್ಲಿ ಜೇಕಬ್‌ ಬೆಥೆಲ್‌ ಬದಲಿಗೆ ಸ್ಥಾನ ಪಡೆಯಬಹುದು. ಇದನ್ನು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಇನ್ನೂ ಘೋಷಿಸಿಲ್ಲ.

ಜೇಕಬ್‌ ಬೆಥೆಲ್‌ ಇಂಗ್ಲೆಂಡ್ ಪರ 9 ಏಕದಿನ ಪಂದ್ಯಗಳ 8 ಇನ್ನಿಂಗ್ಸ್‌ಗಳಲ್ಲಿ 2 ಅರ್ಧಶತಕಗಳ ಸಹಾಯದಿಂದ 272 ರನ್ ಗಳಿಸಿದ್ದಾರೆ. ಅವರು 2024 ರಲ್ಲಿ ಇಂಗ್ಲೆಂಡ್ ಪರ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. ಅವರು 3 ಟೆಸ್ಟ್ ಪಂದ್ಯಗಳ 6 ಇನ್ನಿಂಗ್ಸ್‌ನಲ್ಲಿ 260 ರನ್ ಬಾರಿಸಿದ್ದಾರೆ. ಅಲ್ಲದೆ, 3 ಅರ್ಧಶತಕಗಳನ್ನು ಹೊಂದಿದ್ದಾರೆ. ಇನ್ನೂ ಟಿ20 ಕ್ರಿಕೆಟ್‌ನಲ್ಲಿ ಬೆಥೆಲ್ 10 ಪಂದ್ಯಗಳಲ್ಲಿ 9 ಇನ್ನಿಂಗ್ಸ್‌ನಲ್ಲಿ ಆಡಿದ್ದು, 196 ಕಲೆ ಕಲೆ ಹಾಕಿದ್ದಾರೆ. ಇದರಲ್ಲಿ ಅವರು 2 ಅರ್ಧಶತಕ ಸಿಡಿಸಿದ್ದಾರೆ. ಐಪಿಎಲ್ 2025ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಪರ ಬೆಥೆಲ್ ಆಡಲಿದ್ದಾರೆ. ಇದಕ್ಕೂ ಮುನ್ನ ಅವರು ಮಂಡಿರಜ್ಜು ಗಾಯದಿಂದ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ.

Story first published: Monday, February 10, 2025, 18:04 [IST]
Other articles published on Feb 10, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+