ಜಾಕೋಬ್ ಬೆಥೆಲ್ ಭರ್ಜರಿ ಶತಕ: ಇಂಗ್ಲೆಂಡ್‌ಗೆ 119 ರನ್ ಮುನ್ನಡೆ
ಸಿಡ್ನಿ: ಭರವಸೆಯ ಆಟಗಾರ ಜಾಕೋಬ್ ಬೆಥೆಲ್ ಅವರು ಬಾರಿಸಿದ ಭರ್ಜರಿ ಶತಕದ ನೆರವಿನಿಂದ ಆಷಸ್ ಟೆಸ್ಟ್ ಸರಣಿಯ ಐದನೇ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ಎರಡನೇ ಇನಿಂಗ್ಸ್‌ನಲ್ಲಿ, ಆಸ್ಟ್ರೇಲಿಯಾ ವಿರುದ್ಧ 119 ರನ್‌ಗಳ ಮುನ್ನಡೆಯನ್ನು ಸಾಧಿಸಿದೆ.
ಬುಧವಾರ 7 ವಿಕೆಟ್‌ಗೆ 518 ರನ್‌ಗಳಿಂದ ಮೊದಲ ಇನಿಂಗ್ಸ್ ಮುಂದುವರೆಸಿದ ಆಸ್ಟ್ರೇಲಿಯಾ 567 ರನ್‌ಗಳಿಗೆ ಆಲೌಟ್ ಆಯಿತು. ಸ್ಟೀವನ್ ಸ್ಮಿತ್ 138 ರನ್‌ಗಳಿಗೆ ಔಟ್ ಆದರೆ, ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ 37 ರನ್ ಸಿಡಿಸಿದರು. ಕೆಳ ಕ್ರಮಾಂಕದಲ್ಲಿ ಬ್ಯೂ ವೆಬ್‌ಸ್ಟರ್ 87 ಎಸೆತಗಳಲ್ಲಿ 7 ಬೌಂಡರಿ ಸಹಾಯದಿಂದ 71 ರನ್ ಬಾರಿಸಿ ಮಿಂಚಿದರು. ಈ ಮೂಲಕ ಆಸ್ಟ್ರೇಲಿಯಾ 183 ರನ್ ಮುನ್ನಡೆ ಸಾಧಿಸಿತು.

ಎರಡನೇ ಇನಿಂಗ್ಸ್ ಆರಂಭಿಸಿದ ಜಾಕ್ ಕ್ರಾಲಿ (1) ರನ್ ಕಲೆ ಹಾಕುವಲ್ಲಿ ವಿಫಲರಾದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಜಾಕೋಬ್ ಬೆಥೆಲ್ ತಂಡಕ್ಕೆ ಆಧಾರವಾದರು. ಇವರು ಎರಡನೇ ವಿಕೆಟ್‌ಗೆ ಬೆನ್ ಡಕೆಟ್ (42) ಜೊತೆಗೂಡಿ ಸಂಕಷ್ಟದಲ್ಲಿದ್ದ ತಂಡಕ್ಕೆ ನೆರವಾದರು. ಈ ಜೋಡಿ ಎರಡನೇ ವಿಕೆಟ್‌ಗೆ 81 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ನಾಲ್ಕನೇ ಕ್ರಮಾಂಕದಲ್ಲಿ ಜೋ ರೂಟ್ (6) ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು.
ಬೆಥೆಲ್ ಭರ್ಜರಿ ಶತಕ
ನಾಲ್ಕನೇ ವಿಕೆಟ್‌ಗೆ ಹ್ಯಾರಿ ಬ್ರೂಕ್ ಹಾಗೂ ಜಾಕೋಬ್ ಬೆಥೆಲ್ ಜೋಡಿ ಸಮಯೋಚಿತ ಆಟದ ಪ್ರದರ್ಶನ ನೀಡಿ ಶತಕದ ಜೊತೆಯಾಟವನ್ನು ನೀಡಿತು. ಉತ್ತಮವಾಗಿ ಆಡುತ್ತಿದ್ದ ಹ್ಯಾರಿ ಬ್ರೂಕ್ 42 ರನ್ ಬಾರಿಸಿದ್ದಾಗ ಔಟ್ ಆದರು. ವಿಕೆಟ್ ಕೀಪರ್ ಬ್ಯಾಟರ್ ಜೇಮಿ ಸ್ಮಿತ್ 26 ರನ್‌ಗಳಿಗೆ ಆಟ ಮುಗಿಸಿದರು. ಕೊನೆಯ ದಿನಕ್ಕೆ ಮ್ಯಾಥ್ಯೂ ಪಾಟ್ಸ್ ಹಾಗೂ ಬೆಥೆಲ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

22 ವರ್ಷದ ಜಾಕೋಬ್ ಬೆಥೆಲ್ ಮೂರನೇ ಕ್ರಮಾಂಕದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು ತಮ್ಮ ವೃತ್ತಿ ಜೀವನದ ಆರನೇ ಟೆಸ್ಟ್ ಪಂದ್ಯವನ್ನು ಸ್ಮರಣೀಯವಾಗಿಸಿಕೊಂಡರು. ಬೆಥೆಲ್ ತಮ್ಮ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಶತಕ ಬಾರಿಸಿ ಮಿಂಚಿದರು. ಈ ಮೂಲಕ ಬೆಥೆಲ್ ಮೂರನೇ ಕ್ರಮಾಂಕಕ್ಕೆ ನ್ಯಾಯ ಒದಗಿಸಿದರು. ಇವರು 232 ಎಸೆತಗಳಲ್ಲಿ 15 ಬೌಂಡರಿ ನೆರವಿನಿಂದ ಅಜೇಯ 142 ರನ್ ಬಾರಿಸಿದ್ದಾರೆ. ಅಂತಿಮವಾಗಿ ಇಂಗ್ಲೆಂಡ್ ಎರಡನೇ ಇನಿಂಗ್ಸ್‌ನಲ್ಲಿ ದಿನದಾಟದಂತ್ಯಕ್ಕೆ 8 ವಿಕೆಟ್‌ಗೆ 302 ರನ್ ಸೇರಿಸಿದೆ.
ಜಾಕೋಬ್ ಬೆಥೆಲ್ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಪರ ಆಡುವ ಆಟಗಾರ. ಇವರನ್ನು ಹಿಂದಿನ ಹರಾಜಿನಲ್ಲಿ (ಐಪಿಎಲ್ 2025) ಮೆಗಾ ಹರಾಜಿನಲ್ಲಿ ಆರ್‌ಸಿಬಿ ಉತ್ತಮ ಮೊತ್ತ ನೀಡಿ ತಂಡಕ್ಕೆ ಸೇರಿಸಿಕೊಂಡಿತ್ತು. ಅಲ್ಲದೆ ಇವರನ್ನು ಮುಂದಿನ ಬಾರಿಯ ಐಪಿಎಲ್‌ಗೂ ತಂಡದಲ್ಲಿ ಉಳಿಸಿಕೊಂಡಿದೆ. ಇವರು ಆರ್‌ಸಿಬಿ ಪರ ಕಳೆದ ಆವೃತ್ತಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ಭರವಸೆ ಮೂಡಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications