For Quick Alerts
ALLOW NOTIFICATIONS  
For Daily Alerts
 

ಶ್ರೀಲಂಕಾ ಸರಣಿಗೆ ಇಂಗ್ಲೆಂಡ್ ಬ್ಯಾಟಿಂಗ್ ಸಲಹೆಗಾರನಾಗಿ ನೇಮಕವಾದ ಜಾಕ್ ಕ್ಯಾಲೀಸ್

Jacques Kallis appointed England’s batting consultant for next tour

ದಕ್ಷಿಣ ಆಫ್ರಿಕಾ ಕ್ರಿಕೆಟ್ ಕಂಡ ಶ್ರೇಷ್ಠ ಆಟಗಾರ ದಿಗ್ಗಜ ಆಲ್‌ರೌಂಡರ್ ಜಾಕ್ ಕ್ಯಾಲೀಸ್ ಅವರನ್ನು ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ (ECB) ಶ್ರೀಲಂಕಾ ವಿರುದ್ಧದ ಸರಣಿಗಾಗಿ ಬ್ಯಾಟಿಂಗ್ ಸಲಹೆಗಾರನಾಗಿ ಆಗಿ ನೇಮಕ ಮಾಡಿದೆ. ಇಂಗ್ಲೆಂಡ್ ತಂಡ ಶ್ರೀಲಂಕಾಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ತೆರಳಲಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇನ್ನು ಇದೇ ಸಂದರ್ಭದಲ್ಲಿ ಇಸಿಬಿ ಇಂಗ್ಲೆಂಡ್ ಕ್ರಿಕೆಟ್ ತಂಡದ ಫೀಲ್ಡಿಂಗ್ ಸಲಹೆಗಾರನಾಗಿ ಆಗಿ ಮಾಜಿ ಇಂಗ್ಲೀಷ್ ಆಟಗಾರ ಕಾರ್ಲ್ ಹಾಪ್ಕಿನ್ಸನ್ ಅವರನ್ನು ನೇಮಕಗೊಳಿಸಿದ್ದು ನ್ಯೂಜಿಲೆಂಡ್ ತಂಡದ ಮಾಜಿ ಸ್ಪಿನ್ನರ್ ಜೀತನ್ ಪಟೇಲ್ ಅವರನ್ನು ಸ್ಪಿನ್ ಬೌಲಿಂಗ್ ಸಲಹೆಗಾರರನ್ನಾಗಿ ನೇಮಕಗೊಳಿಸಿದೆ.

ಇದಕ್ಕೂ ಮುನ್ನ ಇಂಗ್ಲೆಂಡ್ ಕ್ರಿಕೆಟ್ ತಂಡದ ಶ್ರೀಲಂಕಾ ಪ್ರವಾಸಕ್ಕಾಗಿ 16 ಆಟಗಾರರ ತಂಡವನ್ನು ಇಸಿಬಿ ಪ್ರಕಟಿಸಿತ್ತು. ಈ ತಂಡದಲ್ಲಿ ಪ್ರಮುಖ ಆಟಗಾರರಾದ ಬೆನ್ ಸ್ಟೋಕ್ಸ್ ಹಾಗೂ ಜೋಫ್ರಾ ಆರ್ಚರ್‌ಗೆ ವಿಶ್ರಾಂತಿಯನ್ನು ನೀಡಲಾಗಿದೆ. ಇಂಗ್ಲೆಂಡ್ ಹಾಗೂ ಶ್ರೀಲಂಕಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದ್ದು ಮೊದಲ ಪಂದ್ಯ ಜನವರಿ 14 ರಿಂದ ಆರಂಭವಾಗಲಿದೆ.

ಇಂಗ್ಲೆಂಡ್‌ನ ಶ್ರೀಲಂಕಾ ಪ್ರವಾಸ ಕಳೆದ ಮಾರ್ಚ್‌ನಲ್ಲಿ ನಿಗದಿಯಾಗಿತ್ತು. ಆದರೆ ಕೊರೊನಾ ವೈರಸ್‌ನ ಕಾರಣದಿಂದಾಗಿ ಈ ಸರಣಿಯನ್ನು ಮುಂದೂಡಲಾಗಿತ್ತು. ಇದೀಗ ಮತ್ತೆ ಈ ಸರಣಿಯನ್ನು ಆಯೋಜನೆಗೆ ನಿರ್ಧಾರಿಸಲಾಗಿದ್ದು ಗಾಲೆ ಮೈದಾನದಲ್ಲಿ ಮುಚ್ಚಿದ ಬಾಗಿಲುಗಳಲ್ಲಿ ಈ ಪಂದ್ಯ ನಡೆಯಲಿದೆ.

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರನಿಯ ಬಳಿಕ ಇಂಗ್ಲೆಂಡ್ ಭಾರತ ಪ್ರವಾಸವನ್ನು ಆರಂಭಿಸಲಿದೆ. ಭಾರತದ ವಿರುದ್ಧ ಸುದೀರ್ಘ ಪ್ರವಾಸದಲ್ಲಿ ಇಂಗ್ಲೆಂಡ್ ಪಾಲ್ಗೊಳ್ಳಲಿದ್ದು ಮೊದಲಿಗೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಫೆಬ್ರವರಿ 5 ರಿಂದ ಈ ಟೆಸ್ಟ್ ಸರಣಿಗೆ ಚಾಲನೆ ದೊರೆಯಲಿದೆ.

Story first published: Tuesday, December 22, 2020, 9:55 [IST]
Other articles published on Dec 22, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+