IND vs SA 3rd ODI: 271 ರನ್‌ಗಳ ಗುರಿಯನ್ನು "ಯಶಸ್ವಿ"ಯಾಗಿ ಚೇಸ್ ಮಾಡಿದ ಭಾರತಕ್ಕೆ ಸರಣಿ
ಭರವಸೆಯ ಬ್ಯಾಟರ್ ಯಶಸ್ವಿ ಜೈಸ್ವಾಲ್ ಬಾರಿಸಿದ ಶತಕದ ನೆರವಿನಿಂದ ಭಾರತ 9 ವಿಕೆಟ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಮೂರನೇ ಏಕದಿನ ಪಂದ್ಯದಲ್ಲಿ ಮಣಿಸಿದ್ದು, ಸರಣಿಯನ್ನು 2-1 ರಿಂದ ಗೆದ್ದು ಬೀಗಿದೆ.
ದಕ್ಷಿಣ ಆಫ್ರಿಕಾ ನೀಡಿದ್ದ 271 ರನ್‌ಗಳ ಗುರಿಯನ್ನು ಭಾರತ ಯಶಸ್ವಿಯಾಗಿ ಚೇಸ್ ಮಾಡಿತು. ದಕ್ಷಿಣ ಆಫ್ರಿಕಾ ನೀಡಿದ್ದ ಸ್ಪರ್ಧಾತ್ಮಕ ಮೊತ್ತವನ್ನು ಟೀಮ್ ಇಂಡಿಯಾ 39.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 271 ರನ್ ಸೇರಿಸಿ ಜಯ ಸಾಧಿಸಿತು. ಟೀಮ್ ಇಂಡಿಯಾ ಮೊದಲ ಏಕದಿನ ಪಂದ್ಯದಲ್ಲಿ ಜಯ ಸಾಧಿಸಿತ್ತು. ಎರಡನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡಿತ್ತು. ಹೀಗಾಗಿ ಮೂರನೇ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿತ್ತು. ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿ ಸರಣಿಯನ್ನು ವಶಕ್ಕೆ ಪಡೆದಿದೆ. ಟೆಸ್ಟ್ ಸರಣಿಯಲ್ಲಿ ಸೋಲು ಕಂಡಿದ್ದ ಟೀಮ್ ಇಂಡಿಯಾ ಏಕದಿನ ಸರಣಿಯಲ್ಲಿ ಪುಟಿದೆದ್ದಿದೆ.

ಗುರಿಯನ್ನು ಹಿಂಬಾಲಿಸಿದ ಭಾರತ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ ಮೊದಲ ವಿಕೆಟ್‌ಗೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿಯನ್ನು ಕಟ್ಟಿಹಾಕುವಲ್ಲಿ ದಕ್ಷಿಣ ಆಫ್ರಿಕಾದ ಬೌಲರ್‌ಗಳು ವಿಫಲರಾದರು. ರೋಹಿತ್ ಶರ್ಮಾ ನೈಜ ಆಟವನ್ನು ಆಡಿ 73 ಎಸೆತಗಳಲ್ಲಿ 7 ಬೌಂಡರಿ, 3 ಸಿಕ್ಸರ್ ನೆರವಿನಿಂದ 75 ರನ್ ಬಾರಿಸಿ ಕೇಶವ್ ಮಹಾರಾಜ್ ತೋಡಿದ ಖೆಡ್ಡಾಗೆ ಬಲಿಯಾದರು. ಮೊದಲ ವಿಕೆಟ್‌ಗೆ ರೋಹಿತ್, ಯಶಸ್ವಿ ಜೈಸ್ವಾಲ್ ಜೋಡಿ 25.5 ಓವರ್‌ಗಳಲ್ಲಿ 155 ರನ್‌ಗಳ ಜೊತೆಯಾಟ ಕಾಣಿಕೆ ನೀಡಿತು.
ಯಶಸ್ವಿ ಶತಕ
ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ಯಶಸ್ವಿ ಜೈಸ್ವಾಲ್ ಅಬ್ಬರಿಸಿದರು. ಇವರು ತಮ್ಮ ವೃತ್ತಿ ಜೀವನದ 4ನೇ ಏಕದಿನ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಆಡಿದ 121 ಎಸೆತಗಳಲ್ಲಿ 12 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 116 ರನ್ ಬಾರಿಸಿ ಅಬ್ಬರಿಸಿದರು. ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಇವರು 45 ಎಸೆತಗಳಲ್ಲಿ 144ರ ಸ್ಟ್ರೈಕ್ ರೇಟ್‌ನಲ್ಲಿ ಅಜೇಯ 65 ರನ್ ಬಾರಿಸಿದರು. ಇವರ ಇನಿಂಗ್ಸ್‌ನಲ್ಲಿ 6 ಬೌಂಡರಿ, 3 ಸಿಕ್ಸರ್ ಸಿಡಿಸಿದರು.
ಡಿಕಾಕ್ ಶತಕ ವ್ಯರ್ಥ
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡದ ಆರಂಭಿಕ ಕ್ವಿಂಟನ್ ಡಿಕಾಕ್ 89 ಎಸೆತಗಳಲ್ಲಿ 8 ಬೌಂಡರಿ, 6 ಸಿಕ್ಸರ್ ಸಹಾಯದಿಂದ 106 ರನ್ ಬಾರಿಸಿದರು. ನಾಯಕ ತೆಂಬು ಬವುಮಾ 48, ಮ್ಯಾಥ್ಯೂ ಬ್ರೀಟ್ಜ್‌ಕೆ 24, ಡೆವಾಲ್ಡ್ ಬ್ರಾವೀಸ್ 29, ಮಾರ್ಕೊ ಜಾನ್ಸನ್ 17, ಕೇಶವ್ ಮಹಾರಾಜ್ 20 ರನ್ ಬಾರಿಸಿ ಮಿಂಚಿದರು. ಅಂತಿಮವಾಗಿ 47.5 ಓವರ್‌ಗಳಲ್ಲಿ 270 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಪ್ರಸಿದ್ಧ್ ಕೃಷ್ಣಾ, ಕುಲ್‌ದೀಪ್ ಯಾದವ್ ತಲಾ 4 ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications