Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Yashasvi Jaiswal: 97 ರನ್‌ ಬಾರಿಸುತ್ತಿದ್ದಂತೆ ದಾಖಲೆ ಬರೆಯಲಿರುವ ಯಶಸ್ವಿ

ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ತಂಡಗಳ ನಡುವಣ ಎರಡನೇ ಟೆಸ್ಟ್‌ ಪಂದ್ಯ ಎಡ್ಜ್‌ಬಸ್ಟನ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಪುಟಿದೇಳುವ ಲೆಕ್ಕಾಚಾರವನ್ನು ಹಾಕಿಕೊಂಡಿದೆ. ಈ ವೇಳೆ ಎಲ್ಲರ ಕಣ್ಣುಗಳು ಸ್ಟಾರ್ ಆಟಗಾರರ ಮೇಲೆ ನೆಟ್ಟಿದೆ. ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್‌ ಒಂದು ದೊಡ್ಡ ದಾಖಲೆಯನ್ನು ಬರೆಯುವ ಕನಸು ಕಾಣುತ್ತಿದ್ದಾರೆ.

ಲೀಡ್ಸ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಯಶಸ್ವಿ ಜೈಸ್ವಾಲ್‌ ಕ್ಯಾಚ್‌ಗಳನ್ನು ಬಿಟ್ಟು ಟೀಕೆಗೆ ಗುರಿಯಾಗಿದ್ದರು. ಆದರೆ ಮೊದಲ ಇನಿಂಗ್ಸ್‌ನಲ್ಲಿ ಅಮೋಘ ಶತಕ ಬಾರಿಸಿ ಅಬ್ಬರಿಸಿದ್ದರು. ಇವರು ಇದೇ ಫಾರ್ಮ್‌ನ್ನು ಎರಡನೇ ಟೆಸ್ಟ್‌ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ಮುಂದುವರೆಸಿದರೆ ದೊಡ್ಡ ದಾಖಲೆಯನ್ನು ಬರೆಯಬಹುದು. ಇವರು ಎರಡನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ 97 ರನ್‌ ಬಾರಿಸುವಲ್ಲಿ ಸಫಲರಾದರೆ, ದೊಡ್ಡ ದಾಖಲೆಯನ್ನು ಬರೆಯಬಹುದು. ಈ ಮೂಲಕ ಇವರು ರಾಹುಲ್ ದ್ರಾವಿಡ್‌, ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಅಳಿಸಿ ಹಾಕಬಹುದು.

Jaiswal Eyes Historic Milestone in Second Test Against England

ಟೆಸ್ಟ್‌ ಕ್ರಿಕೆಟ್‌ನಲ್ಲಿ 2 ಸಾವಿರ ರನ್‌ಗಳನ್ನು ವೇಗವಾಗಿ ಕಲೆ ಹಾಕಿದ ಕಿರ್ತಿ ಟೀಮ್ ಇಂಡಿಯಾದ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ಅವರಿಗೆ ಸಲ್ಲುತ್ತದೆ. ಇವರ ಬಳಿಕ ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಈ ಸಾಧನೆಯನ್ನು 40 ಇನಿಂಗ್ಸ್‌ಗಳಲ್ಲಿ ಮಾಡಿದ ಸಾಧನೆಯನ್ನು ಮಾಡಿದ್ದಾರೆ. ಇನ್ನು ಯಶಸ್ವಿ ಜೈಸ್ವಾಲ್‌ ಆಡಿದ 20 ಪಂದ್ಯಗಳ 38 ಇನಿಂಗ್ಸ್‌ ಆಡಿದ್ದು 1903 ರನ್‌ ಕಲೆ ಹಾಕಿದ್ದಾರೆ. ಇವರಿಗೆ ಟೆಸ್ಟ್‌ ಕ್ರಿಕೆಟ್‌ನಲ್ಲಿ 2000 ರನ್‌ ಪೂರೈಸಲು ಇವರಿಗೆ 97 ರನ್‌ ಅವಶ್ಯಕತೆ ಇದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್‌ನಲ್ಲಿ ಅವರು 97 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಅವರು ಕನಿಷ್ಠ ಪಂದ್ಯಗಳಲ್ಲಿ 2000 ಟೆಸ್ಟ್ ರನ್ ಗಳಿಸಿದ ಭಾರತೀಯರಾಗುತ್ತಾರೆ.

ದಾಖಲೆಯ ಕನಸಿನಲ್ಲಿ ಯಶಸ್ವಿ

ಕಡಿಮೆ ಇನಿಂಗ್ಸ್‌ಗಳಲ್ಲಿ ಈ ಸಾಧನೆಯನ್ನು ಮಾಡಿದ ಕೀರ್ತಿ ಸುನಿಲ್ ಗವಾಸ್ಕರ್ ಹೆಸರಿನಲ್ಲಿದೆ. ಇವರು 23 ಟೆಸ್ಟ್‌ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಯಶಸ್ವಿ ಈ ದಾಖಲೆಯನ್ನು ಸಹ ಮುರಿಯಬಹುದಾಗಿದೆ. ಇನ್ನು ವೀರೇಂದ್ರ ಸೆಹ್ವಾಗ್ ಹಾಗೂ ರಾಹುಲ್ ದ್ರಾವಿಡ್ 25 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇನ್ನು ಸುನಿಲ್ ಗವಾಸ್ಕರ್ 44 ಇನಿಂಗ್ಸ್‌ನಲ್ಲಿ 2 ಸಾವಿರ ರನ್‌ ಪೂರೈಸಿದ ಹಿರಿಮೆ ಹೊಂದಿದ್ದಾರೆ.

Jaiswal Eyes Historic Milestone in Second Test Against England

ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್ ಯಶಸ್ವಿ ಜೈಸ್ವಾಲ್‌ ಎರಡನೇ ಟೆಸ್ಟ್‌ನಲ್ಲಿ ಆಡುತ್ತಾರಾ ಎಂಬ ಅನುಮಾನ ಆರಂಭವಾಗಿದೆ. ಮೊದಲು ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್‌ ಸ್ಥಿರ ಪ್ರದರ್ಶನ ಬ್ಯಾಟಿಂಗ್‌ನಲ್ಲಿ ನಡೆಸಿದ್ರೂ, ಫೀಲ್ಡಿಂಗ್‌ನಲ್ಲಿ ಸಾಲು ಸಾಲು ಕ್ಯಾಚ್‌ಗಳನ್ನು ಬಿಟ್ಟು ಕೈ ಸುಟ್ಟುಕೊಂಡಿದ್ದರು. ಹೀಗಾಗಿ ಇವರ ಬಗ್ಗೆ ಟೀಕೆಗಳು ಸಹ ಕೇಳಿ ಬಂದಿದ್ದವು. ಒಂದು ವೇಳೆ ಎರಡನೇ ಟೆಸ್ಟ್‌ನಲ್ಲಿ ಇವರಿಗೆ ಆಡುವ ಅವಕಾಶ ಸಿಕ್ಕರೆ, ಕ್ಯಾಚಿಂಗ್ ಪ್ರ್ಯಾಕ್ಟಿಸ್ ನಡೆಸಬೇಕಿದೆ.

Story first published: Sunday, June 29, 2025, 9:15 [IST]
Other articles published on Jun 29, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+