ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಭಾನುವಾರದಿಂದ ಏಕದಿನ ಸರಣಿಯಲ್ಲಿ ಕಾದಾಟ ನಡೆಸಲಿವೆ. ಈ ವೇಳೆ ಎಲ್ಲರ ಕಣ್ಣುಗಳು ಟೀಮ್ ಇಂಡಿಯಾದ ಸಂಯೋಜನೆಯ ಮೇಲೆ ನೆಟ್ಟಿದೆ. ಭಾರತದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಏಕದಿನ ಸರಣಿಯಲ್ಲಿ ಮತ್ತೆ ತಂಡ ಪ್ರವೇಶಿಸಲಿದ್ದಾರೆ. ಮೊದಲ ಏಕದಿನ ಪಂದ್ಯ ರಾಂಚಿಯಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಅವರೊಂದಿಗೆ ಇನಿಂಗ್ಸ್ ಆರಂಭಿಸುವುದು ಯಾರು? ಎಂಬ ಪ್ರಶ್ನೆಗಳು ಉದ್ಭವಿಸಿವೆ.
ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಕುತ್ತಿಗೆಯ ಗಾಯಕ್ಕೆ ತುತ್ತಾಗಿದ್ದು, ಇವರು ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಈ ಸುವರ್ಣ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಟೀಮ್ ಇಂಡಿಯಾದ ಭರವಸೆಯ ಆಟಗಾರ ಯಶಸ್ವಿ ಜೈಸ್ವಾಲ್ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇವರಿಗೆ ತಂಡದಲ್ಲಿ ಆಡುವ ಅಕವಾಶ ಸಿಗುತ್ತದಾ ಎಂಬ ಪ್ರಶ್ನೆಗಳು ಎದ್ದಿವೆ. ತಂಡದ ಚುಕ್ಕಾಣಿಯನ್ನು ಹಿಡಿದರುವ ಕನ್ನಡಿಗ ಕೆಎಲ್ ರಾಹುಲ್ ಹಾಗೂ ಮ್ಯನೇಜ್ಮೆಂಟ್ ಚಿಂತೆ ಹೆಚ್ಚಿಸಿದೆ. 2 ಆಟಗಾರರು ಒಂದು ಸ್ಥಾನದ ಮೇಲೆ ಆಟಗಾರರು ಕಣ್ಣು ನೆಟ್ಟಿವೆ.

ಇದೇ ವರ್ಷ ಫೆಬ್ರವರಿಯಲ್ಲಿ ಭಾರತದ ಪರ ಏಕದಿನ ಕ್ರಿಕೆಟ್ ಟೂರ್ನಿಗೆ ಪದಾರ್ಪಣೆ ಮಾಡಿರುವ ಯಶಸ್ವಿ ಜೈಸ್ವಾಲ್ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಇವರು ಅವಕಾಶವನ್ನು ಬಳಸಿಕೊಂಡು 2027ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ತಂಡದಲ್ಲಿ ಭಾರತದ ಪರ ಬ್ಯಾಕ್ ಅಪ್ ಓಪನರ್ ಸ್ಥಾನದ ಮೇಲೆ ಯಶಸ್ವಿ ಕಣ್ಣು ನೆಟ್ಟಿದ್ದಾರೆ. ಇವರು ಈಗಾಗಲೇ ಭಾರತದ ಪರ ಟೆಸ್ಟ್‌ನಲ್ಲಿ ಏಳು ಶತಕಗಳು ಮತ್ತು 13 ಅರ್ಧಶತಕಗಳು ಸೇರಿದಂತೆ 2,511 ರನ್ ಬಾರಿಸಿ ಭರವಸೆ ಮೂಡಿಸಿದ್ದಾರೆ.
28 ವರ್ಷದ ರುತುರಾಜ್ ಗಾಯಕ್ವಾಡ್ ಅವರು ಈಗಾಗಲೇ ಭಾರತದ ಪರ 6 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಇವರು 1 ಅರ್ಧಶತಕ ಸೇರಿದಂತೆ 115 ರನ್ ಸಿಡಿಸಿ ಭರವಸೆ ಮೂಡಿಸಿದ್ದಾರೆ. ಯಶಸ್ವಿ ಜೈಸ್ವಾಲ್ ಅವರಿಗೆ ಹೋಲಿಸಿದರೆ, ಗಾಯಕ್ವಾಡ್ ಅವರ ಅನುಭವ ಹೆಚ್ಚಾಗಿದೆ. ಅಲ್ಲದೆ ಇವರು ದೇಶೀಯ ಟೂರ್ನಿಯಲ್ಲಿ ಅಬ್ಬರದ ಪ್ರದರ್ಶನ ನೀಡಿ ರನ್‌ಗಳನ್ನು ಕಲೆ ಹಾಕಿ ಅಬ್ಬರಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಾಣಿಸಿಕೊಳ್ಳುವುದು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಒಂದು ವೇಳೆ ರೋಹಿತ್ ಶರ್ಮಾ ಅವರು ಏಕದಿನ ವಿಶ್ವಕಪ್‌ನಲ್ಲಿ ಆಡಿದರೆ, ಬ್ಯಾಕ್ ಅಪ್ ಬ್ಯಾಟರ್ ಆಗಿ ಆಡುವುದು ಯಾರು ಎಂಬ ಪ್ರಶ್ನೆಗಳು ಎದ್ದಿವೆ. ಈ ಪ್ರಶ್ನೆಗೆ ಈ ಸರಣಿಯಲ್ಲಿ ಉತ್ತರ ಸಿಗುವ ಸಾಧ್ಯತೆ ಇದೆ. ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕೆ ಇಳಿದು ಅಬ್ಬರಿಸಲು ಸಜ್ಜಾಗಿದ್ದರೆ, ರುತುರಾಜ್ ಗಾಯಕ್ವಾಡ್ ಅವರು ದೇಶೀಯ ಟೂರ್ನಿಯಲ್ಲಿ ನೀಡಿದ ಪ್ರದರ್ಶನವನ್ನು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮುಂದುವರೆಸುವ ವಿಶ್ವಾಸವನ್ನು ಹೊಂದಿದ್ದಾರೆ.