Yashasvi Jaiswal: ಟೆಸ್ಟ್ ತಂಡದಲ್ಲಿ ಯಶಸ್ವಿಗೆ ಸ್ಥಾನ ಲಭಿಸುತ್ತದಾ? ಗಂಭೀರ್ ಜೊತೆ ನಡೆಸಿದ ಮಾತುಕತೆ
ಭಾರತ ಸದ್ಯ ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಿದೆ. ಈ ವೇಳೆ ತಂಡ ಐದು ಪಂದ್ಯಗಳ ಟೆಸ್ಟ್ ಆಡಲಿದೆ. ಈ ಟೆಸ್ಟ್ 2025-27ರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನ ಭಾಗವಾಗಿದೆ. ಈ ಸರಣಿಯ ಮೇಲೆ ಟೀಮ್ ಇಂಡಿಯಾ ಕಣ್ಣು ನೆಟ್ಟಿದೆ. ಈ ಪ್ರವಾಸಕ್ಕೂ ಮುನ್ನ ಭಾರತದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತರಾದ ಬಳಿಕ ಯುವ ಆಟಗಾರರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಯುವ ಆಟಗಾರರು ತಮ್ಮ ಕ್ಷಮತೆಯನ್ನು ತೋರಿಸಿ ತಂಡಕ್ಕೆ ನೆರವಾಗಬೇಕಿದೆ.
ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಜೂನ್ 20 ರಂದು ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೂ ಮುನ್ನು ಭಾರತ ಅಭ್ಯಾಸ ಪಂದ್ಯವನ್ನು ಆಡಲಿದೆ. ಇವರು ಅಭ್ಯಾಸ ಪಂದ್ಯದಲ್ಲಿ ರನ್ ಕಲೆ ಹಾಕುವಲ್ಲಿ ವಿಫರಾದರು. ಇವರು ಲಯನ್ಸ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೇವಲ 24, 64, 17 ಮತ್ತು 5 ರನ್ ಸಿಡಿಸಿದರು. ಇವರು ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಿಲ್ಲ. ಇವರ ಈ ಪ್ರದರ್ಶನದ ಫಲವಾಗಿ ತಂಡದಲ್ಲಿ ಸ್ಥಾನ ಲಭಿಸುತ್ತದಾ ಎಂಬ ಪ್ರಶ್ನೆಗಳು ಎದ್ದಿವೆ.

ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಯುವ ಆಟಗಾರರು ಅಬ್ಬರಿಸ ಬೇಕಿದೆ. ಯುವಕರು ತಮ್ಮ ಕ್ಷಮತೆಯನ್ನು ಸಾಬೀತು ಪಡಿಸಲು ಇದು ಸುವರ್ಣವಕಾಶವಾಗಿದೆ. ಟೀಮ್ ಇಂಡಿಯಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರು ರನ್ ಕಲೆ ಹಾಕದೇ ಇರುವುದು ತಂಡದ ಚಿಂತೆಯನ್ನು ದ್ವಿಗುಣ ಗೊಳಿಸಿದೆ. ಹೀಗಾಗಿ ಟೀಮ್ ಇಂಡಿಯಾದ ಕೋಚ್ ಗೌತಮ್ ಗಂಭೀರ್ ಯಶಸ್ವಿ ಜೈಸ್ವಾಲ್ ಅವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಯಶಸ್ವಿ ಆಗಬೇಕಿದೆ ಜೈಸ್ವಾಲ್
ಟೀಮ್ ಇಂಡಿಯಾದ ಹೆಡ್ ಕೋಚ್ ಗಂಭೀರ್ ಜೈಸ್ವಾಲ್, ಯಶಸ್ವಿ ಜೈಸ್ವಾಲ್ ಅವರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದರು. ಈ ವೇಳೆ ಬ್ಯಾಟಿಂಗ್, ಮನಸ್ಥಿತಿಯ ಬಗ್ಗೆ ಕೋಚ್, ಯುವ ಬ್ಯಾಟರ್ ಜತೆ ಮಾತನಾಡಿದ್ದಾರೆ. ಯಶಸ್ವಿ ತನ್ನನ್ನು ತಾನು ಸಾಬೀತು ಪಡಿಸಿಕೊಳ್ಳುವ ಅವಶ್ಯಕತೆ ಇದೆ. ಏಕೆಂದರೆ ಈ ಸ್ಥಾನವನ್ನು ತುಂಬಲು ಯುವ ಆಟಗಾರರು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ಯಶಸ್ವಿ ಜೈಸ್ವಾಲ್ ಅವರಿಗೆ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ಲಭಿಸಿದಲ್ಲಿ ಅಬ್ಬರಿಸುವ ಅವಶ್ಯಕತೆ ಇದೆ. ಇಲ್ಲದಿದ್ದರೆ ಅವರ ಸ್ಥಾನಕ್ಕೆ ಕುತ್ತು ಬರುವುದು ಗ್ಯಾರಂಟಿ. ಏಕೆಂದರೆ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ಭಾರತ "ಎ" ತಂಡದ ನಾಯಕ ಅಭಿಮನ್ಯು ಈಶ್ವರನ್ ಸ್ಥಿರ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಇವರು ಭಾರತ ತಂಡದಲ್ಲಿ ಸ್ಥಾನ ಪಡೆಯಬಹುದಾಗಿದೆ. ಆದರೆ ಇವರು ಯಾವ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಾರೆ ಎಂಬುದು ಇನ್ನು ನಿರ್ಧಾರವಾಗಿಲ್ಲ. ಒಂದು ವೇಳೆ ಯಶಸ್ವಿ ರನ್ ಕಲೆ ಹಾಕುವಲ್ಲಿ ವಿಫಲರಾದಲ್ಲಿ ಅಭಿಮನ್ಯು ಆರಂಭಿಕರಾಗಿ ಕಾಣಿಸಿಕೊಳ್ಳಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications