IND vs ENG Test: ಯಶಸ್ವಿ ಜೈಸ್ವಾಲ್ ದಾಖಲೆಯ ಶತಕ: ಇಂಗ್ಲೆಂಡ್ ಗೆಲುವಿಗೆ 374 ರನ್ ಗುರಿ
ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯ ಓವಲ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಎರಡನೇ ಇನಿಂಗ್ಸ್‌ನಲ್ಲಿ ಅಮೋಘವಾಗಿ ಬ್ಯಾಟಿಂಗ್ ಮಾಡಿ ಶತಕ ಸಿಡಿಸಿದ್ದಾರೆ. ಅಲ್ಲದೆ ಹಲವು ದಾಖಲೆಗಳನ್ನು ಬರೆದಿದ್ದಾರೆ. ಯಶಸ್ವಿ ಜೈಸ್ವಾಲ್ ಐದನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 2 ರನ್ ಬಾರಿಸಿ ನಿರಾಸೆ ಅನುಭವಿಸಿದ್ದರು. ಆದರೆ ಎರಡನೇ ಇನಿಂಗ್ಸ್‌ನಲ್ಲಿ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನ ನೀಡಿದರು.
ಎರಡನೇ ಇನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ ತಮ್ಮ ನೈಜ್ಯ ಆಟವನ್ನು ಆಡಿದರು. ಇವರು ರನ್ ರೇಟ್ ಹಿಗ್ಗಿಸುತ್ತಾ ಬ್ಯಾಟ್ ಮಾಡಿ ಅಬ್ಬರಿಸಿದರು. ಇವರು ಈ ಶತಕದ ಆಧಾರದ ಮೇಲೆ ಟೀಮ್ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ಸುನಿಲ್ ಗವಾಸ್ಕರ್ ವಿಶೇಷ ಪಟ್ಟಿಗೆ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧ ಯಶಸ್ವಿ ಜೈಸ್ವಾಲ್ ಬಾರಿಸಿದ ನಾಲ್ಕನೇ ಶತಕವಾಗಿದೆ. ಇದರೊಂದಿಗೆ ಅವರು ಈಗ ರೋಹಿತ್ ಶರ್ಮಾ ಮತ್ತು ಸುನಿಲ್ ಗವಾಸ್ಕರ್ ಅವರ ಸಾಧನೆಯನ್ನು ಸರಿಗಟ್ಟಿದ್ದಾರೆ.

ಇಂಗ್ಲೆಂಡ್ ವಿರುದ್ಧ ಭಾರತದ ಪರ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ದಾಖಲೆ ದಿಗ್ಗಜ ಆಟಗಾರರಾದ ಸಚಿನ್ ತೆಂಡುಲ್ಕರ್ ಹಾಗೂ ರಾಹುಲ್ ದ್ರಾವಿಡ್ ತಲಾ 7 ಶತಕ ಬಾರಿಸಿದ್ದಾರೆ. ಯಶಸ್ವಿ ಜೊತೆಗೆ ನಾಲ್ಕನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಸಹ ನಾಲ್ಕು ಶತಕ ಬಾರಿಸಿದ್ದಾರೆ. ಈ ಅಮೋಘ ಇನಿಂಗ್ಸ್ ಮೂಲಕ ಯಶಸ್ವಿ ಜೈಸ್ವಾಲ್ ಮತ್ತೊಂದು ದಾಖಲೆ ಬರೆದಿದ್ದಾರೆ. ಇಂಗ್ಲೆಂಡ್ ವಿರುದ್ಧ 23ನೇ ವಯಸ್ಸಿನಲ್ಲಿ ಅತಿ ಹೆಚ್ಚು ಬಾರಿ 50 ಪ್ಲಸ್ ರನ್ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಸಚಿನ್ ತೆಂಡುಲ್ಕರ್ 23ನೇ ವಯಸ್ಸಿನಲ್ಲಿ 8 ಬಾರಿ 50ಕ್ಕೂ ಹೆಚ್ಚು ರನ್ ಸಿಡಿಸಿದ್ದರು.
ಅತಿ ಹೆಚ್ಚು ಶತಕದ ಜೊತೆಯಾಟ
ಭಾರತದ ಸ್ಟಾರ್ ಆರಂಭಿಕ ಯಶಸ್ವಿ ಜೈಸ್ವಾಲ್ ಹಾಗೂ ನೈಟ್ ವಾಚ್‌ಮನ್ ಆಕಾಶ್ ದೀಪ್ ಮೂರನೇ ವಿಕೆಟ್‌ಗೆ ಶತಕದ ಜೊತೆಯಾಟವನ್ನು ನೀಡಿದರು. ಈ ಮೂಲಕ ಈ ಸರಣಿಯಲ್ಲಿ ಒಟ್ಟು 18 ಶತಕಗಳ ಜೊತೆಯಾಟಗಳು ದಾಖಲಾದವು. ಈ ಮೂಲಕ 21ನೇ ಶತಮಾನದಲ್ಲಿ ದಾಖಲಾದ ಅತಿ ಹೆಚ್ಚು ಶತಕಗಳ ಜೊತೆಯಾಟವಾಗಿದೆ. ಇದಕ್ಕೂ ಮೊದಲ 2004ರಲ್ಲಿ ನಡೆದಿದ್ದ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಒಟ್ಟು 17 ಶತಕಗಳ ಪಾಲುದಾರಿಕೆ ಮೂಡಿ ಬಂದಿತ್ತು.

ಇಂಗ್ಲೆಂಡ್ ಗೆಲುವಿಗೆ 374 ರನ್ ಗುರಿ
ಟೀಮ್ ಇಂಡಿಯಾ ಐದನೇ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಸೊಗಸಾದ ಬ್ಯಾಟಿಂಗ್ ನಡೆಸಿದೆ. ಈ ವೇಳೆ ಟೀಮ್ ಇಂಡಿಯಾದ ಪರ ಆಕಾಶ್ ದೀಪ್ (66), ಆಲ್‌ರೌಂಡರ್ ರವೀಂದ್ರ ಜಡೇಜಾ (53) ಹಾಗೂ ಸರಣಿಯಲ್ಲಿ ವೇಗದ ಅರ್ಧಶತಕ ಬಾರಿಸಿದ ವಾಷಿಂಗ್ಟನ್ ಸುಂದರ್ (53) ಇವರುಗಳ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಟೀಮ್ ಇಂಡಿಯಾ ಐದನೇ ಟೆಸ್ಟ್ ಪಂದ್ಯ ಗೆಲ್ಲಲು 374 ರನ್‌ಗಳ ಗುರಿಯನ್ನು ಇಂಗ್ಲೆಂಡ್ ತಂಡಕ್ಕೆ ನೀಡಿದೆ. ಶುಭಮನ್ ಗಿಲ್ ಪಡೆ ಎರಡನೇ ಇನಿಂಗ್ಸ್‌ನಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 396 ರನ್ ಸೇರಿಸಿದೆ. ಇಂಗ್ಲೆಂಡ್ ಪರ ಜೋಶ್ ಟಂಗ್ 5, ಗಸ್ ಅಟ್ಕಿನ್ಸನ್ 3, ಜೇಮೀ ಓವರ್ಟನ್ 2 ವಿಕೆಟ್ ಪಡೆದು ಮಿಂಚಿದರು. ಇಂಗ್ಲೆಂಡ್ ತಂಡಕ್ಕೆ ಎರಡನೇ ಇನಿಂಗ್ಸ್‌ನಲ್ಲಿ ಕ್ರಿಸ್ ವೋಕ್ಸ್ ಅನುಪಸ್ಥಿತಿ ಬಹುವಾಗಿ ಕಾಡಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications