ಶನಿವಾರದಿಂದ 18ನೇ ಆವೃತ್ತಿ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇನ್ನು ಐಪಿಎಲ್‌ನಲ್ಲಿ ಭಾಗವಹಿಸುವ ತಂಡಗಳು ಈಗಾಗಲೇ ಅಭ್ಯಾಸವನ್ನು ಆರಂಭಿಸಿವೆ. ಈ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಂಪ್‌ನಿಂದ ಬರುತ್ತಿರುವ ಸುದ್ದಿ ನಿಜಕ್ಕೂ ಅಭಿಮಾನಿಗಳಿಗೆ ಫುಲ್ ಖುಷ್ ಮಾಡಿದೆ.
ಡೆಲ್ಲಿ ಕ್ಯಾಪಿಟಲ್ಸ್ ತನ್ನ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಈ ಬಾರಿ ಐಪಿಎಲ್‌ಗೆ ಡೆಲ್ಲಿ ಅಕ್ಷರ್ ಪಟೇಲ್ ಅವರನ್ನು ತಂಡದ ನಾಯಕನನ್ನಾಗಿ ನೇಮಕ ಮಾಡಿದೆ. ಇವರ ಮುಂದಾಳತ್ವದಲ್ಲಿ ಡೆಲ್ಲಿ ಚೊಚ್ಚಲ ಪ್ರಶಸ್ತಿಯ ಕನಸು ಕಾಣುತ್ತಿದೆ. ಐಪಿಎಲ್‌ಆರಂಭಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎಂದಿನಂತೆ ಅಭ್ಯಾಸವನ್ನು ಆರಂಭಿಸಿದೆ. ಈ ವೇಳೆ ಯುವ ಆಟಗಾರ ಭರ್ಜರಿ ಬ್ಯಾಟಿಂಗ್ ನಡೆಸಿ ಎದುರಾಳಿಗಳಿಗೆ ಈಗಲೇ ಖಡಕ್ ಸಂದೇಶವನ್ನು ರವಾನಿಸಿದೆ.

ಜ್ಯಾಕ್ ಫ್ರೇಸರ್ ಮೆಕ್‌ಗರ್ಕ್ ಇಂಟ್ರಾ-ಸ್ಕ್ವಾಡ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಅದ್ಭುತ ಬ್ಯಾಟಿಂಗ್ ಮಾಡಿ ಅದ್ಭುತ ಶತಕ ಗಳಿಸಿದ್ದಾರೆ. ಇವರು ಯಾವಾಗಲು ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದಲೇ ಹೆಸರು ವಾಸಿ. ಇವರು ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿ ಬೊಬ್ಬೆರೆದಿದ್ದಾರೆ. ಇಂಟ್ರಾ-ಸ್ಕ್ವಾಡ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಆರ್ಭಟಿಸಿದ್ದಾರೆ. ಇವರು ಅಭ್ಯಾಸ ಪಂದ್ಯದಲ್ಲಿ 39 ಎಸೆತಗಳಲ್ಲಿ 9 ಬೌಂಡರಿ ಮತ್ತು 10 ಸಿಕ್ಸರ್ ಬಾರಿಸಿದ್ದಾರೆ. ಈ ಮೂಲಕ 110 ರನ್ ಬಾರಿಸಿ ಸ್ಫೋಟಿಸಿದ್ದಾರೆ. ಈ ಪಂದ್ಯದಲ್ಲಿ ಇವರ ತಂಡ 20 ಓವರ್‌ಗಳಲ್ಲಿ 289 ರನ್ ಸಿಡಿಸಿದೆ.
ಜ್ಯಾಕ್ ಫ್ರೇಸರ್ ಮೆಕ್‌ಗರ್ಕ್ ಕಳೆದ ವರ್ಷ ಐಪಿಎಲ್‌ನಲ್ಲಿ ಎಲ್ಲರ ಚಿತ್ತ ಕದ್ದ ಪ್ಲೇಯರ್. ಇವರು ಕಳೆದ ಆವೃತ್ತಿಯಲ್ಲಿ ಆಡಿದ 9 ಪಂದ್ಯಗಳಲ್ಲಿ 330 ರನ್ ಸಿಡಿಸಿದ್ದಾರೆ. ಈ ವೇಳೆ 4 ಅರ್ಧಶತಕಗಳು ಸೇರಿವೆ. ಈ ಬಾರಿಯ ಐಪಿಎಲ್‌ನಲ್ಲಿ ಇವರು ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಇವರು ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಬಲ್ಲರು.
ಡೆಲ್ಲಿ ಕ್ಯಾಪಿಟಲ್ಸ್ ಈ ವರೆಗೆ 6 ಬಾರಿ ಪ್ಲೇ ಆಫ್‌ಗೆ ಪ್ರವೇಶ ಪಡೆದಿದೆ. ಅಲ್ಲದೆ ಒಮ್ಮೆ ಫೈನಲ್ ಸಹ ಆಡಿದೆ. ಆದ್ರೆ ಒಮ್ಮೆಯೂ ಚಾಂಪಿಯನ್ ಪಟ್ಟವನ್ನು ಅಲಂಕರಿಸಿಲ್ಲ. 2020ರಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 5 ವಿಕೆಟ್‌ಗಳಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡಿದೆ. ಹೀಗಾಗಿ ಈ ಬಾರಿ ಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ. ಈ ಬಾರಿ ಡೆಲ್ಲಿ ತಂಡ ಬಲಿಷ್ಠವಾಗಿದೆ. ತಂಡದಲ್ಲಿ ಫಾಫ್ ಡು ಪ್ಲೆಸಿಸ್, ಕೆಎಲ್ ರಾಹುಲ್, ಕುಲದೀಪ್ ಯಾದವ್, ಮಿಚೆಲ್ ಸ್ಟಾರ್ಕ್ ಮತ್ತು ಅಕ್ಷರ್ ಪಟೇಲ್ ಸ್ಟಾರ್ ಪ್ಲೇಯರ್‌ಗಳು ಇದ್ದು ಎದುರಾಳಿಗೆ ಕಾಟ ನೀಡಬಲ್ಲರು.