ಟೆಸ್ಟ್ ಕ್ರಿಕೆಟ್: ಸ್ಫೋಟಕ ಬ್ಯಾಟ್ಸ್‌ಮನ್‌ಗೆ ಬುಲಾವ್ ನೀಡಿದ ಇಂಗ್ಲೆಂಡ್

ಲಂಡನ್, ಜುಲೈ 17: ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಆಷಸ್ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವ ಆತಿಥೇಯ ಇಂಗ್ಲೆಂಡ್ ತಂಡ, ಇದಕ್ಕೂ ಮುನ್ನ ನಡೆಯಲಿರುವ ಐರ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಜೇಸನ್ ರಾಯ್‌ಗೆ ಮೊದಲ ಬಾರಿ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಿದೆ.
ಜೇಸನ್ ರಾಯ್, ಇತ್ತೀಚೆಗಷ್ಟೇ ಅಂತ್ಯಗೊಂಡ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡಿದ 8 ಪಂದ್ಯಗಳಿಂದ 443 ರನ್‌ಗಳನ್ನು ಚೆಚ್ಚಿ ಇಂಗ್ಲೆಂಡ್ ತಂಡಕ್ಕೆ ಚೊಚ್ಚಲ ಪ್ರಶಸ್ತಿ ಗೆದ್ದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಆಷಸ್ ಟೆಸ್ಟ್ ಸರಣಿಯಲ್ಲೂ ರಾಯ್ ಇಂಥದ್ದೇ ಯಶಸ್ಸು ತಂದು ಕೊಡುತ್ತಾರೆ ಎಂಬ ಲೆಕ್ಕಾಚಾರದಲ್ಲಿ ಟೆಸ್ಟ್ ತಂಡಕ್ಕೆ ಇಂಗ್ಲೆಂಡ್ ಬುಲಾವ್ ನೀಡಿದೆ.
ದಕ್ಷಿಣ ಆಫ್ರಿಕಾ ಸಂಜಾತ 28 ವರ್ಷದ ಇಂಗ್ಲೆಂಡ್ ಆಟಗಾರ ರಾಯ್, ಐರ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಸರ್ರೆ ಕೌಂಟಿ ತಂಡದ ಜೊತೆಗಾರ ರೋರಿ ಬರ್ನ್ಸ್ ಜೊತೆಗೆ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ಆಸ್ಟ್ರೇಲಿಯಾ ವಿರುದ್ಧದ ಆಷಸ್ ಟೆಸ್ಟ್ ಸರಣಿ ಆಗಸ್ಟ್ 1ರಂದು ಆರಂಭವಾಗಲಿದ್ದು, ಐರ್ಲೆಂಡ್ ಎದುರಿನ ಪಂದ್ಯದಲ್ಲಿ ಆಯ್ಕೆದಾರರ ಗಮನ ಸೆಳೆಯುವ ಕಡೆಗೆ ರಾಯ್ ಪ್ರಯತ್ನಿಸಲಿದ್ದಾರೆ.
ಇದೇ ವೇಳೆ ಐರ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರರಾದ ಜೋಸ್ ಬಟ್ಲರ್ ಮತ್ತು ಬೆನ್ ಸ್ಟೋಕ್ಸ್‌ಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಗಾಯದ ಸಮಸ್ಯೆ ಎದುರಿಸಿರುವ ಜೋಫ್ರಾ ಆರ್ಚರ್ ಮತ್ತು ಮಾರ್ಕ್ ವುಡ್ ಕೂಡ ತಂಡದಿಂದ ಹೊರಗುಳಿದಿದ್ದಾರೆ.
ಐರ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ಪ್ರಕಟಿಸಿರುವ ತಂಡ ಹೀಗಿದೆ
ಇಂಗ್ಲೆಂಡ್ ಟೆಸ್ಟ್ ತಂಡ: ಜೋ ರೂಟ್ (ನಾಯಕ), ಮೊಯೀನ್ ಅಲಿ, ಜೇಮ್ಸ್ ಆಂಡರ್ಸನ್, ಜಾನಿ ಬೈರ್‌ಸ್ಟೋವ್ (ವಿಕೆಟ್‌ಕೀಪರ್), ಸ್ಟುವರ್ಟ್ ಬ್ರಾಡ್, ರೋರಿ ಬರ್ನ್ಸ್, ಸ್ಯಾಮ್ ಕರ್ರನ್, ಜೋ ಡೆನ್ಲೀ, ಲೂಯಿಸ್ ಗ್ರೆಗೊರಿ, ಜಾಕ್ ಲೀಚ್, ಜೇಸನ್ ರಾಯ್, ಓಲೀ ಸ್ಟೋನ್, ಕ್ರಿಸ್ ವೋಕ್ಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications