Jasprit Bumrah: ಜಸ್ಪ್ರಿತ್ ಬುಮ್ರಾಗೆ ನಾಯಕತ್ವ ನೀಡಬೇಡಿ: ಕೈಫ್
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ರನ್ ಕಲೆ ಹಾಕುವಲ್ಲಿ ವಿಫಲರಾಗುತ್ತಿರುವುದು ಅಲ್ಲದೆ ನಾಯಕನಾಗಿ ತಂಡವನ್ನು ಸಮರ್ಥವಾಗಿ ಮುನ್ನಡೆಸದಿರುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈಗ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಹೊಸ ನಾಯಕನ ಹುಡುಕಾಟ ನಡೆಸಿದೆ. ಟೀಮ್ ಇಂಡಿಯಾದಲ್ಲಿ ಹಲವು ಆಟಗಾರರು ನಾಯಕತ್ವ ಗುಣಗಳನ್ನು ಹೊಂದಿರವವರು ಇದ್ದಾರೆ. ಈಗ ಆಯ್ಕೆ ಸಮಿತಿ ಅದರಲ್ಲಿರುವ ಒಬ್ಬ ಬೆಸ್ಟ್ ಪ್ಲೇಯರ್‌ಗೆ ಚಾನ್ಸ್ ನೀಡುವ ಸಾಧ್ಯತೆ ಇದೆ. ಹೀಗಾಗಿ ಯಾರಿಗೆ ನಾಯಕತ್ವ ನೀಡಿದರೆ ಬೆಸ್ಟ್ ಎಂಬ ಚರ್ಚೆಗಳು ಆರಂಭವಾಗಿವೆ.
ರೋಹಿತ್ ಶರ್ಮಾ ವೈಯಕ್ತಿಕ ಕಾರಣಗಳಿಂದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಆಡಿರಲಿಲ್ಲ. ಇವರ ಅನುಪಸ್ಥಿತಿಯಲ್ಲಿ ಜಸ್ಪ್ರಿತ್ ಬುಮ್ರಾ ತಂಡವನ್ನು ಮುನ್ನಡೆಸಿದ್ದರು. ಇವರು ಸಿಕ್ಕ ಅವಕಾಶವನ್ನು ಚೆನ್ನಾಗಿ ಉಪಯೋಗಿಸಿಕೊಂಡು ತಂಡದ ಜಯದಲ್ಲಿ ಮಿಂಚಿದ್ದರು. ಅಲ್ಲದೆ ಸಿಡ್ನಿ ಟೆಸ್ಟ್‌ನಲ್ಲೂ ತಂಡವನ್ನು ಮುನ್ನಡೆಸಿದ ಹೆಗ್ಗಳಿಕೆ ಬುಮ್ರಾ ಅವರದ್ದಾಗಿದೆ. ಇವರಲ್ಲಿನ ಕ್ಷಮತೆಯನ್ನು ನೋಡಿದರೆ, ಜಸ್ಪ್ರೀತ್ ಬುಮ್ರಾ ಟೆಸ್ಟ್‌ನಲ್ಲಿ ಅತ್ಯುತ್ತಮ ನಾಯಕ ಎಂದು ಸಾಬೀತುಪಡಿಸಬಹುದು.

ಬುಮ್ರಾಗೆ ನಾಯಕತ್ವ ನೀಡಬೇಡಿ?
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಜಸ್ಪ್ರಿತ್ ಬುಮ್ರಾ ಅವರ ಹೆಗಲಿಗೆ ನಾಯಕತ್ವ ನೀಡಿದ್ದೇ ಆದಲ್ಲಿ, ಇದು ಅವರ ಆಟದ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ಅವರ ವೃತ್ತಿ ಸಹ ಬಹು ಬೇಗನೆ ಮುಗಿಯಬಹುದು ಎಂಬ ಆತಂಕ ಇದೆ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ತಿಳಿಸಿದ್ದಾರೆ.
ಟೀಮ್ ಇಂಡಿಯಾದ ನಾಯಕನ ಜವಾಬ್ದಾರಿಯನ್ನು ಬುಮ್ರಾಗೆ ನೀಡುವ ಬಗ್ಗೆ ಮೊಹಮ್ಮದ್ ಕೈಫ್ ತಮ್ಮ ಅನಿಸಿಕೆಯನ್ನು ಸಾಮಾಜಿಕ ತಾಣದಲ್ಲಿ ವ್ಯಕ್ತ ಪಡಿಸಿದ್ದಾರೆ. ಇವರನ್ನು ಪೂರ್ಣಾವಧಿಯ ನಾಯಕನನ್ನಾಗಿ ಮಾಡುವ ಮೊದಲು ಬಿಸಿಸಿಐ ಹಲವು ಬಾರಿ ಯೋಚಿಸಬೇಕು. ಬುಮ್ರಾ ಈ ಎಲ್ಲ ವಿಚಾರಗಳಿಂದ ಸದ್ಯ ದೂರ ಇದ್ದು, ವಿಕೆಟ್ ಬೇಟೆ ಹಾಗೂ ಫಿಟ್ನೆಸ್ ಕಡೆಗೆ ಗಮನ ಹರಿಸಬೇಕು. ಅವರಿಗೆ ನಾಯಕತ್ವ ನೀಡುವುದರಿಂದ ಒತ್ತಡ ಹೆಚ್ಚಾಗುತ್ತದೆ. ಹೀಗಾಗಿ ಬುಮ್ರಾ ವೃತ್ತಿ ಜೀವನ ಅರ್ಧದಲ್ಲಿ ನಿಲ್ಲಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರು ಆಡಿದ 5 ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 32 ವಿಕೆಟ್ ಪಡೆದಿದ್ದಾರೆ.

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಜಸ್ಪ್ರಿತ್ ಬುಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಈ ಬಾರಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ಬುಮ್ರಾ ಅವರಿಗೆ ಐದು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಮುನ್ನಡೆಸುವ ಅವಕಾಶ ಸಿಕ್ಕಿತು. ಬುಮ್ರಾ ಈ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಒಂದು ಸೋಲು ಕಂಡಿದೆ. ಟೀಮ್ ಇಂಡಿಯಾದ ಪರ ಜಸ್ಪ್ರಿತ್ ಬುಮ್ರಾ ಸಿಕ್ಕ ಅವಕಾಶವನ್ನು ಬಳಸಿಕೊಂಡು ಅಬ್ಬರಿಸುತ್ತಿದ್ದಾರೆ. ಅಲ್ಲದೆ ಇವರು ಟೆಸ್ಟ್ ಕ್ರಿಕೆಟ್‌ನಲ್ಲಿ ನಾಯಕರಾಗಿಯೂ ಉತ್ತಮ ಅಂಕಿ ಅಂಶಗಳನ್ನು ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications