Jasprit Bumrah: ಟಿ20 ವಿಶ್ವಕಪ್‌ನಲ್ಲಿ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ
ಟೀಮ್ ಇಂಡಿಯಾದ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ, ಸದ್ಯ ಅಮೋಘ ಫಾರ್ಮ್‌ನಲ್ಲಿದ್ದಾರೆ. ಇವರು ದಕ್ಷಿಣ ಆಫ್ರಿಕಾ ವಿರುದ್ಧದ ಸೂಪರ್ 8 ಹಂತದ ಪಂದ್ಯದಲ್ಲಿ ಮೊನಚಾದ ದಾಳಿ ಸಂಘಟಿಸಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರ ಯಾರ್ಕರ್ ಹಾಗೂ ಮಿಶ್ರಣದ ದಾಳಿಗೆ ಉತ್ತರ ನೀಡುವಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟರ್‌ಗಳು ವಿಫಲರಾಗಿದ್ದಾರೆ. ಈ ಪಂದ್ಯದಲ್ಲಿ ಬುಮ್ರಾ ಸ್ಥಿರ ಪ್ರದರ್ಶನ ನೀಡಿದರೂ, ಭಾರತ ಸೋಲು ಕಂಡಿದೆ. ಮಹತ್ವದ ಪಂದ್ಯದಲ್ಲಿ ಬುಮ್ರಾ ದೊಡ್ಡ ದಾಖಲೆಯನ್ನು ಬರೆದಿದ್ದಾರೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಪರ ಬಿಗುವಿನ ದಾಳಿ ನಡೆಸಿದ ಜಸ್ಪ್ರೀತ್ ಬುಮ್ರಾ ಎದುರಾಳಿಗೆ ಕಂಟಕರಾದರು. ಇವರು 4 ಓವರ್ ಬೌಲಿಂಗ್ ನಡೆಸಿ 15 ರನ್ ನೀಡಿ 3 ವಿಕೆಟ್ ಕಬಳಿಸಿದರು. ಇವರು ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್, ಮಧ್ಯಮ ಕ್ರಮಾಂಕದ ರಿಯಾನ್ ರಿಕಲ್ಟನ್, ಕಾರ್ಬಿನ್ ಬೊಷ್ ಅವರ ವಿಕೆಟ್ ಪಡೆದು ಅಬ್ಬರಿಸಿದರು. ಈ ಮೂಲಕ ಬುಮ್ರಾ ಟಿ20 ವಿಶ್ವಕಪ್‌ನಲ್ಲಿ ದೊಡ್ಡ ದಾಖಲೆಯನ್ನು ಬರೆದರು.

ಟಿ20 ವಿಶ್ವಕಪ್‌ನಲ್ಲಿ ಬುಮ್ರಾ ದಾಖಲೆ
ಭಾರತದ ಪರ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ದಾಖಲೆ ಟೀಮ್ ಇಂಡಿಯಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅವರದ್ದಾಗಿದೆ. ದಕ್ಷಿಣ ಆಫ್ರಿಕಾ ಪಂದ್ಯಕ್ಕೂ ಮೊದಲು ಈ ದಾಖಲೆ ಟೀಮ್ ಇಂಡಿಯಾದ ಸ್ಪಿನ್ ಮಾಂತ್ರಿಕ ಅಶ್ವಿನ್ ಹೆಸರಿನಲ್ಲಿತ್ತು. ಅಶ್ವಿನ್ ಟಿ20 ವಿಶ್ವಕಪ್‌ನಲ್ಲಿ ಆಡಿದ 24 ಪಂದ್ಯಗಳಲ್ಲಿ 17.25 ಸರಾಸರಿಯಲ್ಲಿ 32 ವಿಕೆಟ್ ಕಬಳಿಸಿದ್ದಾರೆ. ಈಗ ಈ ಲೀಸ್ಟ್‌ನಲ್ಲಿ ಅಗ್ರ ಸ್ಥಾನಕ್ಕೆ ಬುಮ್ರಾ ಬಡ್ತಿ ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ 22 ಪಂದ್ಯಗಳಲ್ಲಿ 13.36ರ ಸರಾಸರಿಯಲ್ಲಿ 33 ವಿಕೆಟ್ ಹೊಂದಿದ್ದಾರೆ.
ಭಾರತದ ಪರ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಈಗ ಅರ್ಶದೀಪ್ ಸಿಂಗ್‌ಗೆ ಎರಡನೇ ಸ್ಥಾನ. ಇವರು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸಿದ್ದಾರೆ. ಅರ್ಶದೀಪ್ ಆಡಿದ 18 ಟಿ20 ಪಂದ್ಯಗಳಲ್ಲಿ 14.84ರ ಸರಾಸರಿಯಲ್ಲಿ 32 ವಿಕೆಟ್ ಕಬಳಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್‌ನಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಇವರು ತಮ್ಮ ನಾಲ್ಕು ಓವರ್‌ಗಳ ಸ್ಪೆಲ್‌ನಲ್ಲಿ 15 ರನ್ ನೀಡಿದರು. ಈ ಮೂಲಕ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್ ಇತಿಹಾಸದಲ್ಲಿ 15 ಅಥವಾ ಅದಕ್ಕಿಂತ ಕಡಿಮೆ ರನ್ ನೀಡಿದ ಸಾಧನೆಯನ್ನು ಅತಿ ಹೆಚ್ಚು ಬಾರಿ ಮಾಡಿದ ಬೌಲರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು ಟಿ20 ವಿಶ್ವಕಪ್‌ನಲ್ಲಿ ಇಂತಹ ಸಾಧನೆಯನ್ನು 5ನೇ ಬಾರಿ ಬೀಗಿದ್ದಾರೆ. ಇವರಿಗಿಂತಲೂ ಮೊದಲು ವೆಸ್ಟ್ ಇಂಡೀಸ್ ತಂಡದ ಸ್ಪಿನ್ ಬೌಲರ್ ಸುನಿಲ್ ನರೈನ್ ಈ ಸಾಧನೆ ಮಾಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications