Jasprit Bumrah: ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಬೌಲರ್ ಬುಮ್ರಾ
ಅಡಿಲೇಡ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ವಿಶೇಷ ಸಾಧನೆ ಆಡಿದ್ದಾರೆ. ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ ಒಂದು ವಿಕೆಟ್ ಪಡೆಯುತ್ತಿದ್ದಂತೆ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ಮಾಡಿದ್ದಾರೆ. ಅಡಿಲೇಡ್ ಟೆಸ್ಟ್ ಪಂದ್ಯದ ಮೊದಲ ದಿನ ಜಸ್ಪ್ರೀತ್ ಬುಮ್ರಾ ಕೇವಲ ಒಂದು ವಿಕೆಟ್ ಪಡೆದರು.
ಅಡಿಲೇಡ್ ಟೆಸ್ಟ್ ಪಂದ್ಯದ ಮೊದಲ ದಿನ ಬ್ಯಾಟಿಂಗ್ ಮಾಡಿದ ಭಾರತ 180 ರನ್ ಗಳಿಗೆ ಸೀಮಿತವಾಯಿತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ ಒಂದು ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿದೆ. ಜಸ್ಪ್ರೀತ್ ಬುಮ್ರಾ ವಿಕೆಟ್ ಪಡೆದ ಭಾರತದ ಏಕೈಕ ಬೌಲರ್. ಮೊದಲ ಇನಿಂಗ್ಸ್‌ನ 11ನೇ ಓವರ್‌ನಲ್ಲಿ ಬುಮ್ರಾ ಆಸೀಸ್ ಆರಂಭಿಕ ಬ್ಯಾಟರ್ ಉಸ್ಮಾನ್ ಖವಾಜಾ ಅವರನ್ನು ಔಟ್ ಮಾಡಿದರು.

ಉಸ್ಮಾನ್ ಖವಾಜಾ ಅವರ ವಿಕೆಟ್ ಪಡೆಯುತ್ತಿದ್ದಂತೆ ಬುಮ್ರಾ 2024ರಲ್ಲಿ ತಮ್ಮ 50 ಟೆಸ್ಟ್ ವಿಕೆಟ್‌ಗಳನ್ನು ಪೂರ್ಣಗೊಳಿಸಿದರು. ಬುಮ್ರಾ ಈ ವರ್ಷವಷ್ಟೇ ತಮ್ಮ 11ನೇ ಟೆಸ್ಟ್ ಪಂದ್ಯದಲ್ಲಿ 50 ವಿಕೆಟ್‌ಗಳ ಸಾಧನೆ ಮಾಡಿದರು. ಇದರೊಂದಿಗೆ ಬುಮ್ರಾ ಈ ವರ್ಷ 50 ಟೆಸ್ಟ್ ವಿಕೆಟ್‌ಗಳ ಗಡಿ ಮುಟ್ಟಿದ ವಿಶ್ವದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದು, ಅವರ ಹೆಸರಿನಲ್ಲಿ 46 ವಿಕೆಟ್‌ಗಳಿವೆ.
ಜಸ್ಪ್ರೀತ್ ಬುಮ್ರಾ ಒಂದು ಕ್ಯಾಲೆಂಡರ್ ವರ್ಷದಲ್ಲಿ 50 ಅಥವಾ ಅದಕ್ಕಿಂತ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಮೂರನೇ ಭಾರತೀಯ ವೇಗದ ಬೌಲರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾದ ದಿಗ್ಗಜ ಬೌಲರ್‌ಗಳಾದ ಕಪಿಲ್ ದೇವ್ ಮತ್ತು ಜಹೀರ್ ಖಾನ್ ಮಾತ್ರ 50 ವಿಕೆಟ್‌ಗಳ ಗಡಿಯನ್ನು ಮುಟ್ಟಿದ ಏಕೈಕ ಭಾರತೀಯ ವೇಗದ ಬೌಲರ್‌ಗಳಾಗಿದ್ದರು. ಕಪಿಲ್ 1983 ಮತ್ತು 1979ರಲ್ಲಿ ಎರಡು ಬಾರಿ 50ಕ್ಕೂ ಹೆಚ್ಚು ವಿಕೆಟ್ ಪಡೆದರೆ, ಜಹೀರ್ 2002 ರಲ್ಲಿ ಈ ಸಾಧನೆ ಮಾಡಿದ್ದರು.
ಟೆಸ್ಟ್ ಕ್ರಿಕೆಟ್‌ನ ನಂಬರ್-1 ಬೌಲರ್ ಎನಿಸಿಕೊಂಡಿರುವ ಬುಮ್ರಾ ಈ ವರ್ಷ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು 15.20 ರ ಅದ್ಭುತ ಸರಾಸರಿಯಲ್ಲಿ 50 ವಿಕೆಟ್‌ಗಳನ್ನು ಕಬಳಿಸಿರುವುದು ವಿಶೇಷ. ಪರ್ತ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಬುಮ್ರಾ ಟೀಮ್ ಇಂಡಿಯಾಕ್ಕೆ ಹಂಗಾಮಿ ನಾಯಕನಾಗಿದ್ದರು. ತಂಡವನ್ನು ಉತ್ತಮವಾಗಿ ಮುನ್ನಡೆಸುವುದರ ಜೊತೆಗೆ ತಮ್ಮ ಬೌಲಿಂಗ್ ತಾಕತ್ತು ಪ್ರದರ್ಶನ ಮಾಡಿದ್ದರು. ಪರ್ತ್ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್‌ಗಳನ್ನು ಕಬಳಿಸುವ ಮೂಲಕ ತಂಡದ ಗೆಲುವಿಗೆ ಸಹಾಯ ಮಾಡುವಲ್ಲಿ ದೊಡ್ಡ ಪಾತ್ರವನ್ನು ವಹಿಸಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಬುಮ್ರಾ ಒಟ್ಟು 5 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಉರುಳಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications