ನೆಟ್ಸ್‌ನಲ್ಲಿ ಬೌಲಿಂಗ್ ಆರಂಭಿಸಿದ ಬುಮ್ರಾ : ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಆಯ್ಕೆ?

ಗಾಯದಿಂದ ಚೇತರಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ ನೆಟ್ಸ್‌ನಲ್ಲಿ ಬೌಲಿಂಗ್ ಆರಂಭಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮಹತ್ವದ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಅವರು ತಂಡಕ್ಕೆ ಮರಳುವ ಸಾಧ್ಯತೆ ಇದೆ. ಈ ಸರಣಿ ಭಾರತಕ್ಕೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಲು ಮುಖ್ಯವಾಗಿದೆ.
ಟೀಂ ಇಂಡಿಯಾ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಜನವರಿ 21 ರ ಶನಿವಾರ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅವರು ನೆಟ್ಸ್‌ನಲ್ಲಿ ಬುಮ್ರಾ ಬೌಲಿಂಗ್‌ನಲ್ಲಿ ಬ್ಯಾಟಿಂಗ್ ಮಾಡುವುದನ್ನು ನೋಡಬಹುದಾಗಿದೆ. ಬೆನ್ನು ನೋವಿನ ಕಾರಣ ಬುಮ್ರಾ ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆದಿಲ್ಲ.
ಮತ್ತೆ ತಂಡಕ್ಕೆ ಮರಳಲು ಬುಮ್ರಾ ಸಿದ್ಧತೆ ಆರಂಭಿಸಿರುವುದು ಅಭಿಮಾನಿಗಳಿಗೆ ಸಂತೋಷ ತಂದಿದೆ. 2022ರ ಸೆಪ್ಟೆಂಬರ್ ತಿಂಗಳಿನಲ್ಲಿ ತವರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಕೊನೆಯದಾಗಿ ಆಡಿದ್ದರು. ಪಂದ್ಯದ ನಂತರ ಅವರಿಗೆ ಬೆನ್ನಿನ ನೋವು ಕಾಣಿಸಿಕೊಂಡ ಕಾರಣ, ಮುಂದಿನ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿಯಬೇಕಾಯಿತು. ಅದಾದ ನಂತರ ಅವರಿಗೆ ದೀರ್ಘ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಹೇಳಿದ ಕಾರಣ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಿಂದ ಹೊರಗುಳಿಯಬೇಕಾಯಿತು.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ
ಸುದೀರ್ಘ ವಿಶ್ರಾಂತಿಯ ನಂತರ ಬುಮ್ರಾರನ್ನು ಇತ್ತೀಚೆಗೆ ಮುಕ್ತಾಯವಾದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿತ್ತು. ಆದರೆ, ಅಭ್ಯಾಸದ ವೇಳೆ ಬೆನ್ನು ನೋವು ಕಾಣಿಸಿಕೊಂಡ ಕಾರಣ ಅವರನ್ನು ಟೂರ್ನಿಯಿಂದ ಹೊರಗುಳಿಯಲು ಕೇಳಲಾಯಿತು. 2023ರ ಅಕ್ಟೋಬರ್ ನವೆಂಬರ್ ತಿಂಗಳಿನಲ್ಲಿ ಏಕದಿನ ವಿಶ್ವಕಪ್ ಇರುವುದರಿಂದ ಬುಮ್ರಾ ಫಿಟ್‌ನೆಸ್ ಟೀಂ ಇಂಡಿಯಾಗೆ ಮುಖ್ಯವಾಗಿದೆ.

ಮೊದಲ ಎರಡು ಪಂದ್ಯಗಳಿಗೆ ಬುಮ್ರಾ ಅಲಭ್ಯ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಬುಮ್ರಾ ತಂಡದಲ್ಲಿ ಸ್ಥಾನ ಪಡೆದಿಲ್ಲ. ಬುಮ್ರಾ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ.
ಕೊನೆಯ ಟೆಸ್ಟ್ ಪಂದ್ಯಗಳನ್ನಾಡುವ ದೃಷ್ಟಿಯಿಂದ ಬುಮ್ರಾ ಫಿಟ್‌ನೆಸ್ ಹೆಚ್ಚಿಸಿಕೊಳ್ಳಲು ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಗಾಯಗೊಂಡಿದ್ದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಫಿಟ್ ಆಗಿದ್ದು, ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ತಂಡಕ್ಕೆ ಆಯ್ಕೆಯಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications