Jasprit Bumrah: ವಾಸೀಮ್ ಅಕ್ರಮ್ ದಾಖಲೆ ಅಳಿಸಿ, ಕಪಿಲ್ ರೆಕಾರ್ಡ್ ಸಮಕ್ಕೆ ನಿಂತ ಬುಮ್ರಾ
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬೌಲರ್ ಜಸ್ಪ್ರಿತ್ ಬುಮ್ರಾ ಪರ್ತ್‌ನಲ್ಲಿ ಅಬ್ಬರಿಸಿದ್ದಾರೆ. ಆಸ್ಟ್ರೇಲಿಯಾ ನೆಲದಲ್ಲಿ ಮನಮೋಹಕ ಲೈನ್ ಹಾಗೂ ಲೆಂತ್‌ನಲ್ಲಿ ದಾಳಿ ನಡೆಸಿ, ಎದುರಾಳಿ ಬೌಲರ್‌ಗಳನ್ನು ಕಾಡಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಬಾರ್ಡರ್ ಗವಾಸ್ಕರ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಸಫಲರಾಗಿದ್ದಾರೆ. ಮೊದಲ ಟೆಸ್ಟ್‌ನಲ್ಲಿ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಐದು ವಿಕೆಟ್ ಪಡೆದು ಬೀಗಿದರು.
ಪರ್ತ್ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 150 ರನ್‌ಗಳಿಗೆ ಆಲೌಟ್ ಆಯಿತು. ಇನ್ನು ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಸಹ ಟೀಮ್ ಇಂಡಿಯಾದ ಜಸ್ಪ್ರಿತ್ ಬುಮ್ರಾ ಅವರ ದಾಳಿಯನ್ನು ಎದುರಿಸುವಲ್ಲಿ ವಿಫಲರಾದರು. ಈ ಮೂಲಕ ಮೊದಲ ಇನಿಂಗ್ಸ್‌ನಲ್ಲಿ ಜಸ್ಪ್ರಿತ್ ಬುಮ್ರಾ 5 ವಿಕೆಟ್‌ಗಳನ್ನು ಕಬಳಿಸಿ ಅಬ್ಬರಿಸಿದರು. ಈ ಮೂಲಕ ಟೀಮ್ ಇಂಡಿಯಾ ನಾಯಕ ಹಲವು ದಾಖಲೆಗಳನ್ನು ನಿರ್ಮಿಸಿದರು.

ಕಪಿಲ್ ದಾಖಲೆಯ ಸಮಕ್ಕೆ ಬುಮ್ರಾ
ಪರ್ತ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಿರುವ ಭಾರತದ ವೇಗದ ಬೌಲರ್ ಮತ್ತು ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾ ಅವರು ಆಸ್ಟ್ರೇಲಿಯಾ ನೆಲದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಪರ್ತ್ ಟೆಸ್ಟ್ ಪಂದ್ಯದ ಎರಡನೇ ದಿನ, ಬುಮ್ರಾ ಅಲೆಕ್ಸ್ ಕ್ಯಾರಿಗೆ ಬಲೆ ಕೆಡವವು ಮೂಲಕ ಆರ್ಭಟಿಸಿದರು. ಮೊದಲ ದಿನವೇ ಬುಮ್ರಾ 4 ವಿಕೆಟ್ ಪಡೆದು ಆಸ್ಟ್ರೇಲಿಯಾ ಪಾಳಯದ ಚಿಂತೆಯನ್ನು ಹೆಚ್ಚಿಸಿದ್ದ ವೇಗಿ, ಎರಡನೇ ದಿನದಾಟದ ಆರಂಭದಲ್ಲಿ ಒಂದು ವಿಕೆಟ್ ಪಡೆದು ಅಬ್ಬರಿಸಿದರು. ಈ ಮೂಲಕ ಬುಮ್ರಾ ಇತಿಹಾಸ ಸೃಷ್ಟಿಸಿದ್ದಾರೆ.
ಬುಮ್ರಾ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಪಡೆದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 11ನೇ ಬಾರಿ ಐದು ವಿಕೆಟ್ ಪಡೆದು ಬೀಗಿದರು. ಆಸ್ಟ್ರೇಲಿಯಾದ ನೆಲದಲ್ಲಿ ಎರಡನೇ ಬಾರಿ ಐದು ವಿಕೆಟ್ ಸಾಧನೆ ಮಾಡಿದರು. ಈ ಮೊದಲು ಬುಮ್ರಾ 2018ರ ಡಿಸೆಂಬರ್‌ನಲ್ಲಿ ಮೆಲ್ಬೋರ್ನ್ 6 ವಿಕೆಟ್ ಪಡೆದು ಸಾಧನೆ ಮಾಡಿದ್ದರು. ಈ ಮೂಲಕ ಬುಮ್ರಾ ಸೇನಾ ರಾಷ್ಟ್ರದಲ್ಲಿ ಅತಿ ಹೆಚ್ಚು ಬಾರಿ ಐದು ವಿಕೆಟ್‌ಗಳನ್ನು ಕಬಳಿಸಿದ ಭಾರತೀಯ ಬೌಲರ್‌ಗಳ ಪಟ್ಟಿಯಲ್ಲಿ ಜಂಟಿ ಅಗ್ರ ಸ್ಥಾನವನ್ನು ಪಡೆದಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕಪಿಲ್ ದೇವ್ ಸೇನಾ ರಾಷ್ಟ್ರದಲ್ಲಿ ಏಳು ವಿಕೆಟ್‌ಗಳನ್ನು ಪಡೆದ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ.

ವಾಸೀಮ್ ದಾಖಲೆ ಉಡೀಸ್
ಆಸ್ಟ್ರೇಲಿಯಾದಲ್ಲಿ 1990ರ ಬಳಿಕ ಅತಿ ಹೆಚ್ಚಿ ವಿಕೆಟ್ ಪಡೆದ ಏಷ್ಯಾ ಖಂಡದ ವೇಗದ ಬೌಲರ್ ಎಂಬ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ವಾಸಿಂ ಅಕ್ರಮ್ 36 ವಿಕೆಟ್ ಪಡೆದಿದ್ದರು. ಈಗ ಈ ದಾಖಲೆಯನ್ನು ಬುಮ್ರಾ ಮುರಿದಿದ್ದಾರೆ. ಬುಮ್ರಾ 37 ವಿಕೆಟ್ ಪಡೆಯುವ ಮೂಲಕ ಅಬ್ಬರಿಸಿದ್ದಾರೆ. ಈ ಪಟ್ಟಿಯಲ್ಲಿ ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್ ಸ್ಥಾನ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications