For Quick Alerts
ALLOW NOTIFICATIONS  
For Daily Alerts
 

Jasprit Bumrah: ಬುಮ್ರಾ ಬೆಸ್ಟ್ ದಾಳಿಗೆ ಇಮ್ರಾನ್ ಖಾನ್ ದಾಖಲೆ ಉಡೀಸ್

ವೇಗದ ಬೌಲರ್‌ಗಳ ಸ್ವರ್ಗ ಎಂದೇ ಬಿಂಬಿತವಾಗಿದ್ದ ಕೇಪ್‌ಟೌನ್‌ನ ನ್ಯೂಲೆಂಡ್ಸ್‌ ಅಂಗಳದಲ್ಲಿ ಟೀಮ್ ಇಂಡಿಯಾ ಯಾರ್ಕರ್‌ ಸ್ಪೇಷಲಿಸ್ಟ್‌ ಮ್ಯಾಜಿಕ್ ಸ್ಪೆಲ್ ನಡೆಸಿದ್ದಾರೆ.

ಮೊದಲ ಟೆಸ್ಟ್‌ನಲ್ಲಿ ಹೀನಾಯ ಸೋಲು ಕಂಡಿದ್ದ ಟೀಮ್ ಇಂಡಿಯಾ ಎರಡನೇ ಟೆಸ್ಟ್‌ನಲ್ಲಿ ಭರ್ಜರಿಯಾಗಿ ಕಮ್‌ ಬ್ಯಾಕ್‌ ಮಾಡಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್‌ ಸರಣಿ ಸೋಲಿನಿಂದ ಪಾರಾಗಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಟಿ20 ಹಾಗೂ ಟೆಸ್ಟ್ ಸರಣಿಯಲ್ಲಿ ಸಮಬಲ ಸಾಧಿಸಿದೆ. ಅಲ್ಲದೆ ಏಕದಿನ ಸರಣಿಯನ್ನು ಗೆದ್ದು ಬೀಗಿದೆ.

Jasprit Bumrah broke the record of Pakistani legend Imran Khan

ಕೇಪ್ ಟೌನ್ ನಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ ಕೇವಲ ಒಂದೂವರೆ ದಿನಗಳಲ್ಲಿ ಆತಿಥೇಯ ತಂಡವನ್ನು ಮಣಿಸಿದೆ. ಅನುಭವಿ ಬೌಲರ್ ಜಸ್ಪ್ರೀತ್ ಬುಮ್ರಾ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಅವರ ಬೌಲಿಂಗ್ ಪಂದ್ಯವನ್ನು ಸಂಪೂರ್ಣವಾಗಿ ಬದಲಿಸಿತು. ಈ ಪಂದ್ಯದ ವೇಳೆ ಪಾಕಿಸ್ತಾನದ ಮಾಜಿ ನಾಯಕ ಇಮ್ರಾನ್ ಖಾನ್ ಅವರ ದಾಖಲೆಯನ್ನು ಈ ಆಟಗಾರ ಮುರಿದಿದ್ದಾರೆ.

ಚೊಚ್ಚಲ ಬಾರಿಗೆ ಟೆಸ್ಟ್ ಸರಣಿ ಗೆಲ್ಲುವ ಕನಸಿನೊಂದಿಗೆ ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಿದ್ದ ನಾಯಕ ರೋಹಿತ್ ಶರ್ಮಾ ಅವರ ಉದ್ದೇಶ ಸಫಲವಾಗದೇ ಇದ್ದರೂ, ಕೇಪ್ ಟೌನ್ ಟೆಸ್ಟ್ ಗೆದ್ದು ಇತಿಹಾಸ ಸೃಷ್ಟಿಸಿ ಭಾರತಕ್ಕೆ ಮರಳುತ್ತಿದ್ದಾರೆ.

ಎರಡು ಟೆಸ್ಟ್‌ಗಳ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ನಾಯಕ ಡೀನ್ ಎಲ್ಗರ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲ ಇನ್ನಿಂಗ್ಸ್‌ನಲ್ಲಿ ಮೊಹಮ್ಮದ್ ಸಿರಾಜ್ 6 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ ಆರು ವಿಕೆಟ್ ಪಡೆದರು. ದಕ್ಷಿಣ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 55 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 176 ರನ್ ಗಳಿಸಲಷ್ಟೇ ಶಕ್ತವಾಯಿತು.

Jasprit Bumrah broke the record of Pakistani legend Imran Khan

ಎರಡನೇ ಇನ್ನಿಂಗ್ಸ್‌ನಲ್ಲಿ ದೊಡ್ಡ ಸ್ಕೋರ್ ಮಾಡುವ ಉದ್ದೇಶದಿಂದ ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ ಅಖಾಡಕ್ಕೆ ಇಳಿಯಿತು. ಬುಮ್ರಾ ಎರಡನೇ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಕಬಳಿಸುವುದರೊಂದಿಗೆ ಆತಿಥೇಯ ತಂಡಕ್ಕೆ ದೊಡ್ಡ ಗುರಿ ನೀಡದಂತೆ ತಡೆದರು. ಎರಡನೇ ದಿನದಾಟದಲ್ಲಿ ಇಡೀ ದಕ್ಷಿಣ ಆಫ್ರಿಕಾ ತಂಡ ಮೊದಲ ಸೆಷನ್ ನಲ್ಲಿಯೇ ಕುಸಿದು ಬಿದ್ದಿತ್ತು. ಬುಮ್ರಾ ಅವರ 5 ವಿಕೆಟ್‌ಗಳು ಇದರಲ್ಲಿ ಪ್ರಮುಖ ಪಾತ್ರವಹಿಸಿದವು.

ಜಸ್ಪ್ರೀತ್ ಬುಮ್ರಾ ತನ್ನ ಕರಾರುವಕ್ ದಾಳಿಯ ಬಲದಿಂದ ಎರಡನೇ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ಅನ್ನು ಛಿದ್ರಗೊಳಿಸಿದರು. ಈ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಗಳನ್ನು ಕಬಳಿಸುವುದರೊಂದಿಗೆ, ಅವರು SENA (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ) ದೇಶಗಳಲ್ಲಿ ವಿಕೆಟ್ ಪಡೆಯುವ ವಿಷಯದಲ್ಲಿ ಪಾಕಿಸ್ತಾನದ ಮಾಜಿ ನಾಯಕ ಇಮ್ರಾನ್ ಖಾನ್ ಅವರ ದಾಖಲೆಯನ್ನು ಅಳಿಸಿದರು. ಬುಮ್ರಾ ಸೆನಾ ದೇಶಗಳ ವಿರುದ್ಧ 113 ವಿಕೆಟ್‌ಗಳನ್ನು ಪಡೆದಿದ್ದರೆ, ಪಾಕಿಸ್ತಾನದ ದಂತಕಥೆ 109 ವಿಕೆಟ್‌ಗಳನ್ನು ಪಡೆದಿದ್ದಾರೆ.

ಪಾಕಿಸ್ತಾನದ ವಾಸಿಂ ಅಕ್ರಮ್ (146) ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಅನಿಲ್ ಕುಂಬ್ಳೆ (141) ಹೆಸರು ಎರಡನೇ ಸ್ಥಾನದಲ್ಲಿದೆ. ಭಾರತದ ಹಿರಿಯ ವೇಗದ ಬೌಲರ್ ಇಶಾನ್ ಶರ್ಮಾ (130) ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

Story first published: Thursday, January 4, 2024, 18:51 [IST]
Other articles published on Jan 4, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+