For Quick Alerts
ALLOW NOTIFICATIONS  
For Daily Alerts
 

Jasprit Bumrah: ಇತಿಹಾಸ ಸೃಷ್ಟಿಸಿದ ಜಸ್ಪ್ರೀತ್ ಬುಮ್ರಾ; ಲಸಿತ್ ಮಾಲಿಂಗ ರೆಕಾರ್ಡ್ ಬ್ರೇಕ್

ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಐಪಿಎಲ್ 2025 ರ 45 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ವಿಶೇಷ ಸಾಧನೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದರು. ಈ ಪಂದ್ಯದಲ್ಲಿ, ಅವರು ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದರೊಂದಿಗೆ ಅವರು ಶ್ರೀಲಂಕಾ ತಂಡದ ಮಾಜಿ ದಿಗ್ಗಜ ವೇಗದ ಬೌಲರ್ ಲಸಿತ್ ಮಾಲಿಂಗ ಅವರನ್ನು ಹಿಂದಿಕ್ಕಿದರು.

ಜಸ್ಪ್ರೀತ್ ಬುಮ್ರಾ 2013 ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದಾಗಿನಿಂದ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ. ಆಗ ಮಾಜಿ ವೇಗದ ಬೌಲರ್ ಮತ್ತು ಪ್ರಸ್ತುತ ಮುಂಬೈ ಬೌಲಿಂಗ್ ಕೋಚ್ ಲಸಿತ್ ಮಾಲಿಂಗ ತಮ್ಮ ಅದ್ಭುತ ಪ್ರದರ್ಶನ ನೀಡಿದ್ದರು.

Jasprit Bumrah created the record of taking most wickets for Mumbai Indians

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಒಂದು ವಿಕೆಟ್ ಪಡೆದ ತಕ್ಷಣ, ಮಾಲಿಂಗ ಅವರನ್ನು ಹಿಂದಿಕ್ಕಿದರು. 31 ವರ್ಷದ ಬುಮ್ರಾ ಈಗ ಮುಂಬೈ ಇಂಡಿಯನ್ಸ್ ಪರ 138 ಪಂದ್ಯಗಳಲ್ಲಿ 174 ವಿಕೆಟ್‌ಗಳನ್ನು ಪಡೆದಿದ್ದಾರೆ. ಮಾಲಿಂಗ 170 ವಿಕೆಟ್‌ಗಳನ್ನು ಹೊಂದಿದ್ದಾರೆ. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಮುಂಬೈ ಇಂಡಿಯನ್ಸ್ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಅವರು ತಮ್ಮ 4 ಓವರ್‍‌ಗಳ ಕೋಟಾದಲ್ಲಿ 22 ರನ್ ನೀಡಿ 4 ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದರು.

ಜಸ್ಪ್ರೀತ್ ಬುಮ್ರಾ ಅವರು 2013 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ತಮ್ಮ ಐಪಿಎಲ್ ವೃತ್ತಿಜೀವನವನ್ನು ಪ್ರಾರಂಭಿಸಿದರು. ಇಲ್ಲಿಂದ ಅವರು ಮುಂಬೈ ಇಂಡಿಯನ್ಸ್ ತಂಡದ ಪರ ಆಡಲು ಶುರು ಮಾಡಿದರು. ಅಂದಿನಿಂದ ಅವರು ಈ ತಂಡದ ಭಾಗವಾಗಿದ್ದಾರೆ. ಈ ಅವಧಿಯಲ್ಲಿ ಬುಮ್ರಾ ಮುಂಬೈ ಪರ ಆನೇಕ ಪಂದ್ಯಗಳನ್ನು ತಮ್ಮ ಅಪಾಯಕಾರಿ ಬೌಲಿಂಗ್ ಮೂಲಕ ಗೆಲ್ಲಿಸಿದ್ದಾರೆ. ಇಂದು ಅವರು ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿದ್ದಾರೆ.

Jasprit Bumrah created the record of taking most wickets for Mumbai Indians

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್‍‌ಗಳಲ್ಲಿ 160 ರನ್‌ಗಳಿಗೆ ಆಲೌಟಾಯಿತು. ಇದರೊಂದಿಗೆ ಮುಂಬೈ ಇಂಡಿಯನ್ಸ್ 54 ರನ್‌ಗಳಿಂದ ಗೆಲುವು ಸಾಧಿಸಿತು.

Story first published: Sunday, April 27, 2025, 20:02 [IST]
Other articles published on Apr 27, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+