Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Jasprit Bumrah: ಗಬ್ಬಾದಲ್ಲಿ 5 ವಿಕೆಟ್ ಪಡೆದು ಇತಿಹಾಸ ಸೃಷ್ಟಿಸಿದ ಜಸ್ಪ್ರಿತ್ ಬುಮ್ರಾ

ಭಾರತ ತಂಡದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಮ್ಮ ಹೆಸರಿನಲ್ಲಿ ಮತ್ತೊಂದು ದಾಖಲೆ ಮಾಡಿದ್ದಾರೆ. ಬ್ರಿಸ್ಬೇನ್‌ನ ಗಬ್ಬಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅವರು ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ತಮ್ಮ ಬೆಂಕಿ ಬೌಲಿಂಗ್ ದಾಳಿ ಮೂಲಕ ಆಸ್ಟ್ರೇಲಿಯಾದ ಐವರು ಬ್ಯಾಟರ್‌ಗಳನ್ನು ಔಟ್ ಮಾಡಿದ್ದಾರೆ. ಇದರೊಂದಿಗೆ ಬುಮ್ರಾ ಅವರು ಐದು ವಿಕೆಟ್ ಕಬಳಿಸಿ ದಾಖಲೆಯನ್ನು ಮಾಡಿದ್ದಾರೆ.

ಗಬ್ಬಾ ಟೆಸ್ಟ್ ಪಂದ್ಯದಲ್ಲಿ ಉಸ್ಮಾನ್ ಖವಾಜಾ (21), ನಾಥನ್ ಮೆಕ್‌ಸಾವ್ನಿ (9), ಸ್ಟೀವ್ ಸ್ಮಿತ್ (101), ಟ್ರಾವಿಸ್ ಹೆಡ್ (152) ಮತ್ತು ಮಿಚೆಲ್ ಮಾರ್ಷ್ (5) ಅವರನ್ನು ಬುಮ್ರಾ ಔಟ್ ಮಾಡಿದ್ದಾರೆ. ಈ ಐವರು ಆಸ್ಟ್ರೇಲಿಯಾದ ಬ್ಯಾಟರ್‌ಗಳ ವಿಕೆಟ್‌ಗಳನ್ನು ಕಬಳಿಸುವ ಮೂಲಕ ಬುಮ್ರಾ ಗಬ್ಬಾದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಜಸ್ಪ್ರೀತ್ ಬುಮ್ರಾ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 12ನೇ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಅವರು ಮೂರು ಬಾರಿ ಐದು ವಿಕೆಟ್ ಪಡೆದ ದಾಖಲೆಯನ್ನು ತಮ್ಮ ಹೆಸರಲ್ಲಿ ಬರೆದಿದ್ದಾರೆ.

Jasprit Bumrah creates history by taking 5 wickets in Gabba Test match

ಬುಮ್ರಾ ಹೆಸರಿನಲ್ಲಿ 3 ದಾಖಲೆಗಳು

ಜಸ್ಪ್ರೀತ್ ಬುಮ್ರಾ ಅವರು ಸೆನಾ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ) ದೇಶಗಳಲ್ಲಿ ಅತಿ ಹೆಚ್ಚು ಬಾರಿ ಐದು ವಿಕೆಟ್ ಪಡೆದ ಭಾರತ ಬೌಲರ್ ಎನಿಸಿಕೊಂಡಿದ್ದಾರೆ. ಸೆನಾ ದೇಶಗಳಲ್ಲಿ ಒಟ್ಟು 8 ಬಾರಿ ಐದು ವಿಕೆಟ್ ಪಡೆದಿದ್ದಾರೆ. ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದಲ್ಲಿ ತಲಾ ಮೂರು ಬಾರಿ ಐದು ವಿಕೆಟ್ ಪಡೆದರೆ, ಇಂಗ್ಲೆಂಡ್‌ನಲ್ಲಿ ಎರಡು ಬಾರಿ ಐದು ವಿಕೆಟ್ ಉರುಳಿಸಿದ್ದಾರೆ. ಕಪಿಲ್ ದೇವ್ ಅವರ ತಮ್ಮ ಹೆಸರಿನಲ್ಲಿ ಏಳು ಬಾರಿಗೆ ಐದು ವಿಕೆಟ್‌ಗಳನ್ನು ಪಡೆದ ದಾಖಲೆಯನ್ನು ಹೊಂದಿದ್ದಾರೆ. ಆಸ್ಟ್ರೇಲಿಯಾದಲ್ಲಿ ಐದು ಮತ್ತು ಇಂಗ್ಲೆಂಡ್‌ನಲ್ಲಿ ಎರಡು ಬಾರಿ ಐದು ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ ಅವರು ಕಪಿಲ್ ದೇವ್ ನಂತರ ಭಾರತದ ಪರ ಟೆಸ್ಟ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆದ ಎರಡನೇ ವೇಗದ ಬೌಲರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಬುಮ್ರಾ ಈಗ ತಮ್ಮ ಹೆಸರಿನಲ್ಲಿ 12 ಬಾರಿ ಐದು ವಿಕೆಟ್‌ಗಳನ್ನು ಪಡೆದ ದಾಖಲೆಯನ್ನು ಹೊಂದಿದ್ದರೆ, ಕಪಿಲ್ ದೇವ್ ಅವರು 23 ಬಾರಿಗೆ ಐದು ವಿಕೆಟ್‌ಗಳನ್ನು ಪಡೆದಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತ ಬೌಲರ್‌ಗಳ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಮೂರನೇ ಸ್ಥಾನಕ್ಕೇರಿದ್ದಾರೆ. ಕಪಿಲ್ ದೇವ್ (108) ಮೊದಲ ಸ್ಥಾನದಲ್ಲಿದ್ದರೆ, ರವಿಚಂದ್ರನ್ ಅಶ್ವಿನ್ (71) ಎರಡನೇ ಸ್ಥಾನದಲ್ಲಿದ್ದಾರೆ. ಜಸ್ಪ್ರೀತ್ ಬುಮ್ರಾ (63*) ಮೂರನೇ ಸ್ಥಾನವನ್ನು ಅಲಂಕರಿಸಿದ್ದಾರೆ.

Story first published: Sunday, December 15, 2024, 21:16 [IST]
Other articles published on Dec 15, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+