ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಎಡ್ಜ್‌ಬಸ್ಟನ್‌ನಲ್ಲಿ ನಡೆಯಲಿದೆ. ಜುಲೈ 3 ರಿಂದ ಆರಂಭವಾಗುವ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈಗಾಗಲೇ ಇಂಗ್ಲೆಂಡ್ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಗೆದ್ದು ಬೀಗಿದೆ. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸುವುದು ಅನಿವಾರ್ಯವಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅವರು ಆಡುವುದು ಅನುಮಾನವಾಗಿದೆ. ಇನ್ನು ಜಸ್ಪ್ರೀತ್ ಬುಮ್ರಾ ಅವರ ಸ್ಥಾನದಲ್ಲಿ ಆಡುವುದು ಯಾರು ಎಂಬ ಪ್ರಶ್ನೆಗಳು ಉದ್ಭವಿಸಿವೆ.
ಹೆಡಿಂಗ್ಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣಾ ಸ್ಥಾನ ಪಡೆದಿದ್ದರು. ಇನ್ನು ಆಲ್‌ರೌಂಡರ್ ಕೋಟಾದಲ್ಲಿ ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದರು. ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಪರ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಕಂಡು ಬರುವುದು ಖಚಿತವಾಗಿದೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಆಡುವುದು ಅನುಮಾನವಾಗಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಲಾರ್ಡ್ಸ್‌ನಲ್ಲಿ ನಡೆಯುವುದರಿಂದ, ಬುಮ್ರಾ ಈ ಪಂದ್ಯದಲ್ಲಿ ಆಡಬೇಕಾಗುತ್ತದೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಿಂದ ಬುಮ್ರಾ ವಿಶ್ರಾಂತಿ ಪಡೆಯಬಹುದು. ಹೀಗಾಗಿ ಇವರ ಸ್ಥಾನವನ್ನು ತುಂಬುವುದು ಯಾರು ಎಂಬ ಪ್ರಶ್ನೆಗಳು ಉದ್ಭವಿಸಿವೆ. ಎರಡನೇ ಟೆಸ್ಟ್‌ನಲ್ಲಿ ವೇಗದ ಬೌಲರ್‌ಗಳಾಗಿ ಸಿರಾಜ್ ಹಾಗೂ ಪ್ರಸಿದ್ಧ ಆಡುವುದು ಕನ್ಫರ್ಮ್. ಇನ್ನು ಬುಮ್ರಾ ಬದಲಿಗೆ ಆಕಾಶ್ ದೀಪ್ ಸ್ಥಾನ ಪಡೆಯಬಹುದು ಎಂಬ ಲೆಕ್ಕಾಚಾರ ಆರಂಭವಾಗಿದೆ.
ಬರ್ಮಿಂಗ್‌ಹ್ಯಾಮ್‌ನಲ್ಲಿ ಟೀಮ್ ಇಂಡಿಯಾ ಅಭ್ಯಾಸ ಆರಂಭಿಸಿದೆ. ಟೀಮ್ ಇಂಡಿಯಾದ ಆಟಗಾರರ ಜೊತೆ ಆಕಾಶ್ ದೀಪ್ ಸಹ ನೆಟ್ಸ್‌ನಲ್ಲಿ ಬೌಲಿಂಗ್ ನಡೆಸಿದರು. ಒಂದು ವೇಳೆ ಜಸ್ಪ್ರೀತ್ ಬುಮ್ರಾ ಅವರು ಫಿಟ್ ಆಗಿದ್ದರೂ ಅವರನ್ನು ಕಣಕ್ಕೆ ಇಳಿಸುವುದು ಡೌಟ್. ಏಕೆಂದರೆ ಮೂರನೇ ಟೆಸ್ಟ್‌ಗೆ ಬುಮ್ರಾ ಅವಶ್ಯಕತೆ ತುಂಬಾ ಇದೆ.

ಲೀಡ್ಸ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆದ ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದರು. ಇವರು ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾದರು. ಅಲ್ಲದೆ ಮೊದಲ ಇನಿಂಗ್ಸ್‌ನಲ್ಲಿ ವಿಕೆಟ್ ಬರವನ್ನು ಅನುಭವಿಸಿದರು. ಆದರೆ ಎರಡನೇ ಇನಿಂಗ್ಸ್‌ನಲ್ಲಿ 2 ವಿಕೆಟ್ ಕಬಳಿಸಿ ಭರವಸೆ ಮೂಡಿಸಿದ್ದರು. ಆದರೆ ಭಾರತಕ್ಕೆ ಇನ್ನು ಕೆಳ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಟೀಮ್ ಮ್ಯಾನೇಜ್ಮೆಂಟ್ ನಿತೀಶ್ ಕುಮಾರ್ ರೆಡ್ಡಿಗೆ ಮಣೆ ಹಾಕಬಹುದು. ಅಲ್ಲದೆ ಇವರು ಆಸ್ಟ್ರೇಲಿಯಾ ವಿರುದ್ಧ ಇವರು ಅಮೋಘ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಿದ್ದರು. ಅಲ್ಲದೆ ಶತಕ ಬಾರಿಸಿ ತಂಡಕ್ಕೆ ಆಧಾರವಾಗಿದ್ದರು. ಅಲ್ಲದೆ ಬೌಲಿಂಗ್‌ನಲ್ಲೂ ಸ್ಥಿರ ಪ್ರದರ್ಶನ ನೀಡಿದ್ದರು. ಹೀಗಾಗಿ ಇವರು ತಂಡದಲ್ಲಿ ಸ್ಥಾನ ಪಡೆಯುವುದು ಪಕ್ಕಾ ಕಂಡಂತೆ ಕಾಣುತ್ತಿದೆ.