Jasprit Bumrah: ಇಂಗ್ಲೆಂಡ್ ವಿರುದ್ಧ ಜಸ್ಪ್ರೀತ್ ಬುಮ್ರಾ ಆಡೋದು ಡೌಟ್; ಇಲ್ಲಿದೆ ಕಾರಣ..
ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಗಾಗಿ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಸಿಡ್ನಿಯಲ್ಲಿ ನಡೆಯಲಿರುವ ಐದನೇ ಟೆಸ್ಟ್ ಬಳಿಕ ಟೀಮ್ ಇಂಡಿಯಾ ತವರಿಗೆ ಮರಳಿದೆ. ಇದಾದ ಬಳಿಕ ಇಂಗ್ಲೆಂಡ್ ತಂಡ ಭಾರತಕ್ಕೆ ಭೇಟಿ ನೀಡಲಿದೆ. ಈ ವೇಳೆ ಭಾರತ ಮತ್ತು ಇಂಗ್ಲೆಂಡದ ನಡುವೆ ಐದು ಟಿ20 ಮತ್ತು ಮೂರು ಏಕದಿನ ಪಂದ್ಯಗಳ ಸರಣಿಗಳು ನಡೆಯಲಿವೆ. ಈ ಸರಣಿಗಳಲ್ಲಿ ಟೀಮ್ ಇಂಡಿಯಾ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೊರಗುಳಿಯುವ ಸಾಧ್ಯತೆಯಿದೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ( ಬಿಸಿಸಿಐ) ಆಯ್ಕೆ ಸಮಿತಿಯು ಇಂಗ್ಲೆಂಡ್ ವಿರುದ್ಧದ ವೈಟ್-ಬಾಲ್ ಸರಣಿಗೆ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಿದೆ ಎಂಬ ವರದಿಗಳು ಹೊರಬರುತ್ತಿವೆ. ವರದಿಗಳ ಪ್ರಕಾರ, 2024ರ ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ಜಸ್ಪ್ರೀತ್ ಬುಮ್ರಾ ಅವರಿಗೆ ಚಾಂಪಿಯನ್ಸ್ ಟ್ರೋಫಿ ಟೂರ್ನಿವರೆಗೆ ವಿಶ್ರಾಂತಿ ನೀಡಲಾಗುವುದು.

ಭಾರತ ಮತ್ತು ಇಂಗ್ಲೆಂಡ್ ನಡುವೆ ಜನವರಿ 22 ರಿಂದ ಫೆಬ್ರವರಿ 12 ರವರೆಗೆ ಐದು ಪಂದ್ಯಗಳ ಟಿ20 ಸರಣಿ ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯನ್ನು ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಏಳು ದಿನ ಬಾಕಿ ಇರುವಾಗಲೇ ಏಕದಿನ ಸರಣಿ ಮುಕ್ತಾಯವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಮತ್ತೊಂದು ಐಸಿಸಿ ಟ್ರೋಫಿ ಗೆಲ್ಲುವುದಕ್ಕಾಗಿ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡುವುದು ಟೀಮ್ ಇಂಡಿಯಾಕ್ಕೆ ಅನಿವಾರ್ಯವಾಗಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಒಂದು ವಾರದ ನಂತರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದೆ. ಹೀಗಾಗಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ಈ ಬಾರಿ ವಿಶ್ರಾಂತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ಆಯ್ಕೆ ಸಮಿತಿ ಶೀಘ್ರದಲ್ಲೇ ನಿರ್ಧರಿಸಲಿದೆ. ಆದರೆ, ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಫಾರ್ಮ್‌ಗೆ ಬರಲು ರೋಹಿತ್ ಹಾಗೂ ಕೊಹ್ಲಿ ಏಕದಿನ ಸರಣಿಯಲ್ಲಿ ಆಡಲು ಬಯಸಿದ್ದಾರೆ ಎನ್ನುತ್ತಾರೆ ಕ್ರಿಕೆಟ್ ಪಂಡಿತರು.
ಬುಮ್ರಾ ಮೇಲೆ ಹೆಚ್ಚಿನ ಹೊರೆ
ಜಸ್ಪ್ರೀತ್ ಬುಮ್ರಾ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತದ ವೇಗದ ಬೌಲಿಂಗ್ ದಾಳಿಯನ್ನು ಜಸ್ಪ್ರೀತ್ ಬುಮ್ರಾ ಮುನ್ನಡೆಸುತ್ತಿದ್ದಾರೆ. ಗಾಯದಿಂದಾಗಿ ಸರಣಿಯಿಂದ ಹೊರಗುಳಿದಿದ್ದ ಮೊಹಮ್ಮದ್ ಶಮಿ ಅನುಪಸ್ಥಿತಿಯಲ್ಲಿ, ಬುಮ್ರಾ ಅನನುಭವಿ ವೇಗದ ಬೌಲಿಂಗ್ ಲೈನ್-ಅಪ್‌ನ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಇದುವರೆಗೆ 141.2 ಓವರ್ ಬೌಲಿಂಗ್ ಮಾಡಿ 30 ವಿಕೆಟ್ ಪಡೆದಿದ್ದಾರೆ. ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಲ್ಲಿ ಬುಮ್ರಾಗೆ ವಿಶ್ರಾಂತಿ ನೀಡಲು ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಚಿಂತನೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಭಾರತ vs ಇಂಗ್ಲೆಂಡ್ ಟಿ20 ಸರಣಿ
1ನೇ ಟಿ20 ಪಂದ್ಯ: 22 ಜನವರಿ 2025, ಚೆನ್ನೈ
2ನೇ ಟಿ20 ಪಂದ್ಯ: 25 ಜನವರಿ 2025, ಕೋಲ್ಕತ್ತಾ
3ನೇ ಟಿ20 ಪಂದ್ಯ: 28 ಜನವರಿ 2025, ಗುಜರಾತ್
4ನೇ ಟಿ20 ಪಂದ್ಯ: 31 ಜನವರಿ 2025, ಪುಣೆ
5ನೇ ಟಿ20 ಪಂದ್ಯ: 2 ಫೆಬ್ರವರಿ 2025, ಮುಂಬೈ
ಭಾರತ vs ಇಂಗ್ಲೆಂಡ್ ಏಕದಿನ ಸರಣಿ
1ನೇ ಏಕದಿನ ಪಂದ್ಯ: 6 ಫೆಬ್ರವರಿ 2025, ನಾಗ್ಪುರ
2ನೇ ಏಕದಿನ ಪಂದ್ಯ: 9 ಫೆಬ್ರವರಿ 2025, ಕಟಕ್
3ನೇ ಏಕದಿನ ಪಂದ್ಯ: 12 ಜನವರಿ 2025, ಅಹಮದಾಬಾದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications