Jasprit Bumrah: ರವಿಚಂದ್ರನ್ ಅಶ್ವಿನ್ ಟೆಸ್ಟ್ ರ‍್ಯಾಕಿಂಗ್ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
ಭಾರತ ಟೆಸ್ಟ್ ತಂಡದ ಉಪನಾಯಕ ಜಸ್ಪ್ರೀತ್ ಬುಮ್ರಾ ಅವರು ಇತ್ತೀಚೆಗೆ ಬಿಡುಗಡೆಯಾದ ಐಸಿಸಿ ಟೆಸ್ಟ್ ರ‍್ಯಾಕಿಂಗ್‌ನಲ್ಲಿ ಅಗ್ರ ಸ್ಥಾನವನ್ನು ಗಳಿಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯ ನಡುವೆ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಐಸಿಸಿ ಟೆಸ್ಟ್ ರ‍್ಯಾಕಿಂಗ್‌ನಲ್ಲಿ ಬುಮ್ರಾ ಅವರು ತಮ್ಮ ವೃತ್ತಿಜೀವನದ ಅತ್ಯುತ್ತಮ ರೇಟಿಂಗ್ 904 ಅಂಕಗಳನ್ನು ಗಳಿಸಿದ್ದಾರೆ. ಈ ಮೂಲಕ ಬುಮ್ರಾ ಅವರು ಟೀಮ್ ಇಂಡಿಯಾದ ಮಾಜಿ ದಿಗ್ಗಜ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ದಾಖಲೆಯನ್ನು ಸರಿಗಟ್ಟಿದ್ದಾರೆ.
ಇತ್ತೀಚೆಗೆ ತಮ್ಮ ಅಮೋಘ ಬೌಲಿಂಗ್ ಪ್ರದರ್ಶನದ ಮೂಲಕ ಬುಮ್ರಾ ಸಾಧನೆಯ ಉತ್ತುಂಗದಲ್ಲಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಬುಮ್ರಾ ಆಸ್ಟ್ರೇಲಿಯಾ ಬ್ಯಾಟರ್‌ಗಳಿಗೆ ಸಾಕಷ್ಟು ತೊಂದರೆ ನೀಡಿದ್ದಾರೆ. ಹೀಗಾಗಿ ದಿಗ್ಗಜ ಸ್ಪಿನ್ನರ್ ಆಶ್ವಿನ್ ದಾಖಲೆ ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಬ್ರಿಸ್ಪೇನ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ಬಳಿಕ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಅಶ್ವಿನ್ ಅವರು 2016ರ ದೇಶೀಯ ಟೆಸ್ಟ್ ಋತುವಿನಲ್ಲಿ 904 ರೇಟಿಂಗ್ ಅಂಕಗಳನ್ನು ಸಾಧಿಸಿದರು. ನಿವೃತ್ತಿಯ ಸಮಯದಲ್ಲಿ ಅಶ್ವಿನ್ 789 ರೇಟಿಂಗ್ ಅಂಕಗಳನ್ನು ಹೊಂದಿದ್ದರು. ಇದೀಗ ಬುಮ್ರಾ ರೇಟಿಂಗ್ 904 ಅಂಕಗಳನ್ನು ಗಳಿಸುವ ಮೂಲಕ ಅಶ್ವಿನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದಲ್ಲದೆ, ಟೆಸ್ಟ್ ರ‍್ಯಾಕಿಂಗ್‌ನಲ್ಲಿ ಬುಮ್ರಾ ಅತಿ ಹೆಚ್ಚು ರೇಟಿಂಗ್ ಅಂಕ ಗಳಿಸಿದ ಭಾರತದ ಎರಡನೇ ಬೌಲರ್ ಮತ್ತು ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.
ಐಸಿಸಿ ಟೆಸ್ಟ್ ರ‍್ಯಾಕಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅವರಿಗೆ ಪೈಪೋಟಿ ನೀಡುತ್ತಿರುವ ಬೌಲರ್‌ಗಳೆಂದರೆ 856 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಮತ್ತು ನಾಲ್ಕನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್. ಐಸಿಸಿ ಟೆಸ್ಟ್ ರ‍್ಯಾಕಿಂಗ್‌ನಲ್ಲಿ ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ನಾಲ್ಕು ಸ್ಥಾನ ಕುಸಿದು 10ನೇ ಸ್ಥಾನಕ್ಕೆ ತಲುಪಿದ್ದಾರೆ. ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಬ್ಯಾಟರ್‌ಗಳ ರ‍್ಯಾಕಿಂಗ್‌ನಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಭಾರತ ತಂಡ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಒಂದು ಸ್ಥಾನ ಕುಸಿದು ಐದನೇ ಸ್ಥಾನಕ್ಕೆ ಇಳಿದಿದ್ದಾರೆ. ರಿಷಬ್ ಪಂತ್ ಟಾಪ್ 10 ಪಟ್ಟಿಯಿಂದ ಹೊರಬಿದ್ದಿದ್ದಾರೆ. ಭಾರತದ ಬ್ಯಾಟರ್‌ಗಳ ಪೈಕಿ ಕೆಎಲ್ ರಾಹುಲ್ 10 ಸ್ಥಾನ ಮೇಲೇರಿ 40ನೇ ಸ್ಥಾನಕ್ಕೆ ತಲುಪಿದ್ದು, ರವೀಂದ್ರ ಜಡೇಜಾ 42ನೇ ಸ್ಥಾನದಲ್ಲಿದ್ದಾರೆ.
ಇಂಗ್ಲೆಂಡ್ ತಂಡದ ಇಬ್ಬರು ಬ್ಯಾಟರ್‌ಗಳಾ ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಅಗ್ರ ಎರಡು ಸ್ಥಾನಗಳನ್ನು ಪಡೆದಿದ್ದಾರೆ. ರೂಟ್ 895 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಹ್ಯಾರಿ ಬ್ರೂಕ್ 876 ಅಂಕಗಳನ್ನು ಕಲೆ ಹಾಕುವ ಮೂಲಕ ಎರಡನೇ ಸ್ಥಾನವನ್ನು ಪಡೆದಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿ ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ 867 ಅಂಕಗಳೊಂದಿಗೆ ಸ್ಥಾನ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications