Jasprit Bumrah: ಸನ್ ವಿರುದ್ಧ ಎರಡು ವಿಕೆಟ್ ಪಡೆಯುತ್ತಿದ್ದಂತೆ ಬುಮ್ರಾ ದೊಡ್ಡ ದಾಖಲೆ
ಇಂಡಿಯನ್ ಪ್ರೀಮಿಯರ್ ಲೀಗ್ ರೋಚಕ ಘಟ್ಟದತ್ತ ಮುಖ ಮಾಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬುಧವಾರದಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಮೈದಾನಕ್ಕೆ ಇಳಿಯಲಿದೆ. ಈ ವೇಳೆ ಎಲ್ಲರ ಕಣ್ಣುಗಳು ರೋಹಿತ್ ಶರ್ಮಾ, ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಸೂರ್ಯ ಅವರ ಮೇಲೆ ನೆಟ್ಟಿರಲಿದೆ. ಅಷ್ಟೇ ಅಲ್ಲದೆ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಅವರ ಮೇಲೆ ಎಲ್ಲರ ಕಣ್ಣುಗಳು ಸಹ ನೆಟ್ಟಿರಲಿವೆ.
ಹೈದಬಾದಾನಲ್ಲಿ ನಡೆಯಲಿರುವ ಪಂದ್ಯದಲ್ಲಿ ಜಸ್ಪ್ರಿತ್ ಬುಮ್ರಾ ದೊಡ್ಡ ದಾಖಲೆಯನ್ನು ಬರೆಯುವ ಕನಸಿನಲಿದ್ದಾರೆ. ಈ ಪಂದ್ಯದಲ್ಲಿ ಬುಮ್ರಾ 2 ವಿಕೆಟ್‌ಗಳನ್ನ ಪಡೆದರೆ, ಮುಂಬೈ ಇಂಡಿಯನ್ಸ್ ಪರ ದೊಡ್ಡ ಸಾಧನೆಯನ್ನು ಮಾಡಲಿದ್ದಾರೆ. ಹಾಗಿದ್ದರೆ ಅವರು ಬರೆಯಲಿರುವ ದಾಖಲೆ ಯಾವುದು? ಎಂಬ ಕುತೂಹಲ ಹೆಚ್ಚಿಸಿದೆ.

ಜಸ್ಪ್ರಿತ್ ಬುಮ್ರಾ ಸನ್ ತಂಡದ ವಿರುದ್ಧ 2 ವಿಕೆಟ್‌ಗಳನ್ನು ಪಡೆದಿದ್ದೇ ಆದಲ್ಲಿ ಮುಂಬೈ ಇಂಡಿಯನ್ಸ್ ಪರ ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಲಿದ್ದಾರೆ. ಜಸ್ಪ್ರಿತ್ ಬುಮ್ರಾ 137 ಪಂದ್ಯಗಳಲ್ಲಿ 169 ವಿಕೆಟ್ ಪಡೆದಿದ್ದಾರೆ. ಸನ್ ವಿರುದ್ಧದ ಪಂದ್ಯದಲ್ಲಿ 2 ವಿಕೆಟ್ ಪಡೆದಿದ್ದೇ ಆದಲ್ಲಿ ಲಸಿತ್ ಮಲಿಂಗ್ ಅವರ ದಾಖಲೆಯನ್ನು ಅಳಿಸಿ ಹಾಕಬಹುದು. ಮಲಿಂಗ್ 122 ಪಂದ್ಯಗಳಿಂದ ಮಾಲಿಂಗ 170 ವಿಕೆಟ್ ಕಬಳಿಸಿದ್ದಾರೆ. ಮುಂಬೈ ಪರ ಅಇತ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಹರ್ಭಜನ್ ಸಿಂಗ್ ಮೂರನೇ ಸ್ಥಾನದಲ್ಲಿದ್ದಾರೆ. ಇವರ ಖಾತೆಯಲ್ಲಿ 127 ವಿಕೆಟ್‌ಗಳಿವೆ. 71 ವಿಕೆಟ್‌ಗಳನ್ನು ಪಡೆದಿರುವ ಮಿಚೆಲ್ ಮೆಕ್‌ಕ್ಲೆನಾಘನ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಐದನೇ ಸ್ಥಾನದಲ್ಲಿರುವ ಕೀರನ್ ಪೊಲಾರ್ಡ್ 69 ವಿಕೆಟ್ ಹೊಂದಿದ್ದಾರೆ.
ಸಿಎಸ್‌ಕೆ ವಿರುದ್ಧ ಆರ್ಭಟ
ಗಾಯದ ಕಾರಣದಿಂದ ಜಸ್ಪ್ರಿತ್ ಬುಮ್ರಾ ಐಪಿಎಲ್‌ನ ಆರಂಭಿಕ ಪಂದ್ಯಗಳಲ್ಲಿ ಆಡಿರಲಿಲ್ಲ. ಈಗ ಇವರು ಮೈದಾನಕ್ಕೆ ಮರಳಿದ್ದಾರೆ. ಜಸ್ಪ್ರಿತ್ ಬುಮ್ರಾ ಆಗಮನದಿಂದ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಲೈನ್ ಅಪ್ ಬಲಿಷ್ಠವಾಗಿದೆ. ಬುಮ್ರಾ ಈ ಐಪಿಎಲ್‌ನಲ್ಲಿ ಕೇವಲ 4 ಪಂದ್ಯಗಳನ್ನು ಆಡಿದ್ದು, 4 ವಿಕೆಟ್ ಪಡೆದಿದ್ದಾರೆ. ಇವರು ಸಿಎಸ್‌ಕೆ ವಿರುದ್ಧ ಪಂದ್ಯದಲ್ಲಿ ಶಿಸ್ತು ಬದ್ಧ ದಾಳಿ ನಡೆಸಿ ಅಬ್ಬರಿಸಿದರು. ಸಿಎಸ್‌ಕೆ ವಿರುದ್ಧ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದ್ದ ಬುಮ್ರಾ 4 ಓವರ್ ಬೌಲಿಂಗ್ ನಡೆಸಿ 25 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಎಸ್‌ಆರ್‌ಎಚ್ ವಿರುದ್ಧವೂ ಇದೇ ಪ್ರದರ್ಶನ ನೀಡುವಲ್ಲಿ ಸಫಲರಾದಲ್ಲಿ ದೊಡ್ಡ ದಾಖಲೆಯನ್ನು ಬರೆಯಬಹುದು.
ಐದು ಬಾರಿ ಐಪಿಎಲ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಮುಂಬೈ ಇಂಡಿಯನ್ಸ್ ತಂಡದ ಆರಂಭ ಈ ಬಾರಿ ಕಳಪೆಯಾಗಿತ್ತು. ಆದರೆ ಈ ಹಿಂದಿನ ಮೂರು ಪಂದ್ಯಗಳನ್ನು ಗೆದ್ದು ಭರ್ಜರಿ ಲಯಕ್ಕೆ ಮರಳಿದೆ. ಮುಂಬೈ ಇಂಡಿಯನ್ಸ್ ತಂಡ ಇದುವರೆಗೆ 8 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 4 ಪಂದ್ಯಗಳಲ್ಲಿ ಗೆದ್ದು, ಅಷ್ಟೇ ಸಂಖ್ಯೆಯ ಸೋಲು ಕಂಡಿದ್ದು, 8 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications