Champions Trophy 2025: ಗ್ರೂಪ್ ಹಂತದ ಪಂದ್ಯಗಳಿಗೆ ಜಸ್ಪ್ರೀತ್ ಬುಮ್ರಾ ಅಲಭ್ಯ ಸಾಧ್ಯತೆ!
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯೂ ಫೆಬ್ರವರಿ 19 ರಿಂದ ಪ್ರಾರಂಭವಾಗಲಿದೆ. ಪಾಕಿಸ್ತಾನ ಆತಿಥ್ಯ ವಹಿಸಲಿರುವ ಈ ಮೆಗಾ ಟೂರ್ನಿಯ ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಟೀಮ್ ಇಂಡಿಯಾ ತನ್ನ ಎಲ್ಲಾ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದೀಗ ಗ್ರೂಪ್ ಹಂತದ ಪಂದ್ಯಗಳನ್ನು ಜಸ್ಪ್ರೀತ್ ಬುಮ್ರಾ ಆಡುವುದು ಅನುಮಾನ ಎನ್ನಲಾಗಿದೆ.
ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಐದನೇ ಟೆಸ್ಟ್ ಪಂದ್ಯದಲ್ಲಿ ಆಡುವಾಗ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಗಾಯಗೊಂಡಿದ್ದರು. ಅವರು ಸಿಡ್ನಿ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಮಾಡಲಿಲ್ಲ. ಅಂದಿನಿಂದ, ಅವರ ಗಾಯ ಮತ್ತು ಫಿಟ್ನೆಸ್ ಬಗ್ಗೆ ಅನೇಕ ವರದಿಗಳು ಹೊರಬರುತ್ತಿವೆ.

ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯ ಗೂಪ್ರ್ ಹಂತದ ಪಂದ್ಯಗಳನ್ನು ಕಳೆದುಕೊಳ್ಳಬಹುದು. ಅವರ ಬೆನ್ನಿನಲ್ಲಿ ಊತ ಮತ್ತು ಸೆಳೆತವಿದೆ. ಪ್ರಸ್ತುತ, ಬುಮ್ರಾ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ. ಬುಮ್ರಾ ಅವರನ್ನು ಎನ್‌ಸಿಎಗೆ ವರದಿ ಮಾಡಲು ಕೇಳಲಾಗಿದೆ. ಮಾರ್ಚ್ ಮೊದಲ ವಾರದ ವೇಳೆಗೆ ಅವರು ಸಂಪೂರ್ಣ ಫಿಟ್ ಆಗುವ ನಿರೀಕ್ಷೆಯಿದೆ. ಇದರೊಂದಿಗೆ ಬಿಸಿಸಿಐ ಆಯ್ಕೆಗಾರರು ಚಾಂಪಿಯನ್ಸ್ ಟ್ರೋಫಿಯ ಟೀಮ್ ಇಂಡಿಯಾದ 15 ಸದಸ್ಯರ ತಂಡಕ್ಕೆ ಸೇರಿಸಿಕೊಂಡಿದ್ದಾರೆ. ಬಿಸಿಸಿಐ ಆಯ್ಕೆಗಾರರು ಬುಮ್ರಾ ಮೇಲೆ ತೀವ್ರ ನಿಗಾ ಇರಿಸಿದ್ದಾರೆ.
ವರದಿಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿ ಭಾರತ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ಆದಾಗ್ಯೂ, ಅವರು ಗುಂಪು ಹಂತದ ಪಂದ್ಯಗಳನ್ನು ಆಡುವುದು ಅನುಮಾನವಾಗಿದೆ. ಆದರೆ ಸಂಪೂರ್ಣ ಫಿಟ್ ಆದಾಗ ಟೀಮ್ ಇಂಡಿಯಾ ಪರ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳನ್ನು ಆಡಬಹುದು. ನಏಕೆಂದರೆ ಮಾರ್ಚ್ ಮೊದಲ ವಾರದ ವೇಳೆಗೆ ಅವರು ಫಿಟ್ ಆಗುವ ನಿರೀಕ್ಷೆಯಿದೆ.
ಶಮಿ ಆಗಮನ
ಜಸ್ಪ್ರೀತ್ ಬುಮ್ರಾ ಅನುಪಸ್ಥಿಯಲ್ಲಿ ಟೀಮ್ ಇಂಡಿಯಾ ಬೌಲಿಂಗ್ ವಿಭಾಗವನ್ನು ಮುನ್ನಡೆಸಲು ಮೊಹಮ್ಮದ್ ಶಮಿ ಸಜ್ಜಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಮೊಹಮ್ಮದ್ ಶಮಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಜಸ್ಪ್ರೀತ್ ಬುಮ್ರಾ ಸ್ಥಾನವನ್ನು ಶಮಿ ತುಂಬಲಿದ್ದಾರೆ. ಒಂದು ವೇಳೆ ಬುಮ್ರಾ ಫೀಟ್ ಆಗಿ ಚಾಂಪಿಯನ್ ಟ್ರೋಫಿಗೆ ಮರಳಿದರೆ, ಶಮಿ ಜೊತೆ ಮಿಂಚಿನ ಬೌಲಿಂಗ್ ದಾಳಿ ನಡೆಸಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications