Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Jasprit Bumrah: ಟೆಸ್ಟ್‌ ತಂಡದ ನಾಯಕತ್ವಕ್ಕಿಂತ ಮುಂಬೈ ನಾಯಕತ್ವ ಮೊದಲು ಬಯಸಿದ್ದರಾ ಬುಮ್ರಾ?

ಧರ್ಮಶಾಲಾದಲ್ಲಿ ಆತಿಥೇಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಅನುಭವಿ ವೇಗದ ಬೌಲರ್‌ ಜಸ್ಪ್ರೀತ್ ಬುಮ್ರಾ ಮುನ್ನಡೆಸಿದರು. ಈ ಪಂದ್ಯದ ವೇಳೆ ಜಸ್ಪ್ರೀತ್ ಬುಮ್ರಾ ಅವರು ನೀಡಿದ ಆ ಒಂದು ಹೇಳಿಕೆ ಈಗ ಸಖತ್ ವೈರಲ್ ಆಗುತ್ತಿದೆ.

19ನೇ ಆವೃತ್ತಿಯ 58ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯ ಪ್ಲೇ-ಆಫ್‌ ದೃಷ್ಟಿಯಿಂದ ಪಂಜಾಬ್‌ಗೆ ಮಹತ್ವದಾಗಿತ್ತು. ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಪಂಜಾಬ್‌ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 200 ರನ್‌ ಸೇರಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಮುಂಬೈ 19.5 ಓವರ್‌ಗಳಲ್ಲಿ 4 ವಿಕೆಟ್‌ಗೆ 205 ರನ್ ಕಲೆ ಹಾಕಿ ಜಯ ಸಾಧಿಸಿತು. ಈ ಮೂಲಕ ಪಂಜಾಬ್‌ ಗೆಲುವಿನ ಆಸೆಗೆ ಮುಂಬೈ ತಣ್ಣೀರು ಹಾಕಿತು. ಈ ಪಂದ್ಯದಲ್ಲಿ ಮುಂಬೈ ತಂಡವನ್ನು ಜಸ್ಪ್ರೀತ್ ಬುಮ್ರಾ ಮುನ್ನಡೆಸಿದರು.

Jasprit Bumrah

ಟಾಸ್ ವೇಳೆ ಮಾತನಾಡಿದ ಬುಮ್ರಾ, ನಾನು ಈ ತಂಡಕ್ಕೆ 19 ವರ್ಷದಲ್ಲಿ ಸೇರಿಕೊಂಡೆ. ನಾನು ಎಂದಿಗೂ ಈ ತಂಡದ ನಾಯಕತ್ವಕ್ಕಿಂತ ಮೊದಲು ಭಾರತ ಟೆಸ್ಟ್‌ ತಂಡದ ನಾಯಕತ್ವ ಸಿಗುತ್ತದೆ ಎಂದು ಅಂದುಕೊಂಡಿರಲೇ ಇಲ್ಲ. ನನಗೆ ತಂಡ ಹೊಸ ಜವಾಬ್ದಾರಿಯನ್ನು ನೀಡಿದೆ. ನನಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.

ಜಸ್ಪ್ರೀತ್ ಬುಮ್ರಾ ಈ ಹೇಳಿಕೆ ಈಗ ಸಂಚಲನ ಮೂಡಿಸಿದೆ. ಅಂದರೆ ಜಸ್ಪ್ರೀತ್ ಬುಮ್ರಾ ಅವರು ಟೀಮ್ ಇಂಡಿಯಾದ ಟೆಸ್ಟ್‌ ನಾಯಕ ಹಾಗೂ ಟಿ20 ನಾಯಕನಾಗುವ ಮೊದಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ಬಯಸಿದ್ದರಾ ಎಂಬ ಪ್ರಶ್ನೆಗಳನ್ನು ಹುಟ್ಟು ಹಾಕಿವೆ.

ಬುಮ್ರಾಗೆ ಪಟ್ಟ ಏಕೆ?

ಜಸ್ಪ್ರೀತ್ ಬುಮ್ರಾ ತಮ್ಮ ನಾಯಕತ್ವದಲ್ಲಿ ಸ್ಥಿರ ಪ್ರದರ್ಶನ ನೀಡಿ ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದ್ದಾರೆ. ಪಂಜಾಭ್‌ ವಿರುದ್ಧದ ಪಂದ್ಯದಲ್ಲಿ ಜಸ್ಪ್ರೀತ್ ತಂಡವನ್ನು ಮುನ್ನಡೆಸಿದ್ದು ಏಕೆ ಎಂಬ ಪ್ರಶ್ನೆಗಳು ಉದ್ಭವಿಸುತ್ತದೆ. ಅಸಲಿಗೆ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್ ಪಾಂಡ್ಯ ಬೆನ್ನು ನೋವಿನ ಕಾರಣಗಳಿಂದ ಹೊರಗುಳಿದಿದ್ದಾರೆ. ಇನ್ನು ಇವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಸೂರ್ಯಕುಮಾರ್ ಯಾದವ್ ಸಹ ಪಂಜಾಬ್‌ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದರು. ಇವರು ಕೌಟುಂಬಿಕ ಕಾರಣಗಳಿಂದ ದೂರ ಉಳಿದಿದ್ದರು. ಈ ಹಿನ್ನೆಲೆಯಲ್ಲಿ ಬುಮ್ರಾ ಮುಂಬೈ ಇಂಡಿಯನ್ಸ್ ತಂಡವನ್ನು ಇದೇ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಮುನ್ನಡೆಸಿದ್ದಾರೆ.

Jasprit Bumrah

ಮುಂಬೈ ಇಂಡಿಯನ್ಸ್‌ ಈ ಬಾರಿ ಲೀಗ್‌ನಲ್ಲಿ ಮೂವರು ನಾಯಕರನ್ನು ಕಂಡಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಮೂರು ನಾಯಕರನ್ನು ಕಂಡ ತಂಡ ಎಂಬ ಹೆಗ್ಗಳಿಕೆಗೆ ಮುಂಬೈ ಪಾತ್ರವಾಗಿದೆ. ಇದಕ್ಕೂ ಮೊದಲು ಈ ರೀತಿ ಐದು ಬಾರಿ ಆಗಿತ್ತು.

Story first published: Friday, May 15, 2026, 11:35 [IST]
Other articles published on May 15, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+