Jasprit Bumrah: ಜಸ್ಪ್ರೀತ್ ಬುಮ್ರಾಗೆ ಐಸಿಸಿಯಿಂದ ವಿಶೇಷ ಉಡುಗೊರೆ?
ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡದ ಸೋಲು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್‌ಗೆ ತಲುಪುವ ಅವಕಾಶವನ್ನು ಕೈ ಚೆಲ್ಲಿದೆ. ಈ ಸೋಲು ಗೌತಮ್ ಗಂಭೀರ್ ಅವರ ಕೋಚಿಂಗ್ ಮತ್ತು ರೋಹಿತ್ ಶರ್ಮಾ ನಾಯಕತ್ವದ ಮೇಲೆ ಪ್ರಭಾವ ಬೀರಿದೆ. ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಅನೇಕ ಸ್ಟಾರ್ ಆಟಗಾರರು ಕೇವಲ 4 ಪಂದ್ಯಗಳನ್ನು ಆಡಿದ ನಂತರ ಟೀಕೆಗೆ ಎದುರಿಸುವಂತಾಗಿದೆ. ಇತ್ತ ಏಕಾಂಗಿಯಾಗಿ ಪಂದ್ಯದ ಸ್ಥಿತಿಗತಿಗಳನ್ನೇ ಬದಲಾಯಿಸುವ ಮೂಲಕ ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮಿಂಚುತ್ತಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಟೀಮ್ ಇಂಡಿಯಾದ ಸೋಲಿನೊಂದಿಗೆ ಅವರ ಶ್ರಮ ವ್ಯರ್ಥವಾಗುತ್ತಿದೆ. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಟೀಮ್ ಇಂಡಿಯಾ ಅಭಿಗಮಾಗನಿಳಿಗೆ ಸಿಹಿ ಸುದ್ದಿ ಕೊಟ್ಟಿದೆ.

ಜಸ್ಪ್ರೀತ್ ಬುಮ್ರಾ ಅವರು ಸೋಮವಾರ ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಇಂಗ್ಲೆಂಡ್ ಸ್ಟಾರ್ ಬ್ಯಾಟರ್ ಜೋ ರೂಟ್ ಅವರೊಂದಿಗೆ ನಾಮನಿರ್ದೇಶನಗೊಂಡಿದ್ದಾರೆ. ಈ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಮತ್ತೊಬ್ಬ ಬ್ಯಾಟರ್ ಹ್ಯಾರಿ ಬ್ರೂಕ್ ಮತ್ತು ಶ್ರೀಲಂಕಾದ ಕಮಿಂದು ಮೆಂಡಿಸ್ ಕೂಡ ಸ್ಥಾನ ಪಡೆದಿದ್ದಾರೆ. ಬುಮ್ರಾ 2024 ರಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಬೌಲರ್ ಆಗಿದ್ದರು. ಅವರು 13 ಪಂದ್ಯಗಳಲ್ಲಿ 14.92 ಸರಾಸರಿ ಮತ್ತು 30.16 ಸ್ಟ್ರೈಕ್ ರೇಟ್‌ನಲ್ಲಿ 71 ವಿಕೆಟ್‌ಗಳನ್ನು ಪಡೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಬೌಲಿಂಗ್ ವಿಭಾಗ ದುರ್ಬಲವಾಗಿರಬಹುದು. ಆದರೆ ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾಕ್ಕೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಉಳಿದ ಬೌಲರ್‌ಗಳಿಂದ ಅವರಿಗೆ ಯಾವುದೇ ಸಾಥ್ ಇಲ್ಲಿಯವರೆಗೂ ಬಂದಿಲ್ಲ. ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲ ಬುಮ್ರಾ ಆಡಿರುವ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ 30 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದುವರೆಗಿನ ಸರಣಿಯಲ್ಲಿ ಅಗ್ರ ವಿಕೆಟ್ ಟೇಕರ್ ಎನಿಸಿಕೊಂಡಿದ್ದಾರೆ.
ಜಸ್ಪ್ರೀತ್ ಬುಮ್ರಾ 2023 ರಲ್ಲಿ ಬೆನ್ನುನೋವಿನಿಂದ ಚೇತರಿಸಿಕೊಂಡ ನಂತರ ಟೆಸ್ಟ್ ಕ್ರಿಕೆಟ್‌ಗೆ ಮರಳಿದ್ದರು. ನಂತರ 2024 ರಲ್ಲಿ ಬೌಲಿಂಗ್‌ನಲ್ಲಿ ತಮ್ಮ ಪ್ರಾಬಲ್ಯ ಸಾಧಿಸಿದ್ದರು. ಬುಮ್ರಾ ಕ್ಯಾಲೆಂಡರ್ ವರ್ಷದಲ್ಲಿ 13 ಟೆಸ್ಟ್ ಪಂದ್ಯಗಳಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, 71 ವಿಕೆಟ್‌ಗಳನ್ನು ಕಬಳಿಸುವಲ್ಲಿ ಯಶ್ವಸಿಯಾಗಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನ ನಂಬರ್-1 ಬೌಲರ್ ಎಂಬ ಹೆಗ್ಗಳಿಕೆ ಬಮ್ರಾ ಪಾತ್ರರಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications