Test Cricket: ವಿಶೇಷ ದಾಖಲೆ ಸೃಷ್ಟಿಸುವ ಸನಿಹದಲ್ಲಿ ಭಾರತದ ಸ್ಟಾರ್ ಬೌಲರ್ಸ್
ಪ್ರಸ್ತುತ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಪರ್ತ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ಗೆದ್ದು ಬೀಗಿದೆ. ಪರ್ತ್ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡಿದರು. ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 8 ವಿಕೆಟ್ ಪಡೆದು ಆಸೀಸ್ ಸೋಲಿಗೆ ಪ್ರಮುಖ ಪಾತ್ರವಹಿಸಿದರು. ಇದೀಗ ಅಡಿಲೇಡ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ವಿಶ್ವ ದಾಖಲೆ ಮಾಡುವ ಸನಿಹದಲ್ಲಿದ್ದಾರೆ. ಜೊತೆಗೆ ಈ ಸಾಲಿನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್‌ಗಳಾ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಕೂಡ ಇದ್ದಾರೆ.
ಈ ವರ್ಷ ಟೀಮ್ ಇಂಡಿಯಾದ ಸ್ಟಾರ್ ಬೌಲರ್‌ಗಳಾದ ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಇದೇ ಫಾರ್ಮ್ ಅನ್ನು ಈ ಮೂವರು ಮುಂದುವರೆಸಿದರೆ, 2024ರಲ್ಲಿ ವಿಶೇಷ ದಾಖಲೆ ಸೃಷ್ಟಿಸುವ ಅವಕಾಶವನ್ನು ಹೊಂದಿದ್ದಾರೆ. ಈ ವರ್ಷ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ 50 ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಲು ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಸಜ್ಜಾಗಿದ್ದಾರೆ.

ಪ್ರಸ್ತಕ ಸಾಲಿನಲ್ಲಿ ಬುಮ್ರಾ ಮತ್ತು ಅಶ್ವಿನ್ ತಲಾ 10 ಪಂದ್ಯಗಳ 20 ಇನ್ನಿಂಗ್ಸ್‌ಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಬುಮ್ರಾ 49 ವಿಕೆಟ್ ಕಬಳಿಸಿದರೆ, ಅಶ್ವಿನ್ 46 ವಿಕೆಟ್ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಬುಮ್ರಾ ಮತ್ತು ಅಶ್ವಿನ್ ಇಬ್ಬರೂ ತಲಾ ಮೂರು ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಮತ್ತೊಂದೆಡೆ ರವೀಂದ್ರ ಜಡೇಜಾ ಅವರು ಕೂಡ 10 ಪಂದ್ಯಗಳಲ್ಲಿ 44 ವಿಕೆಟ್ ಉರುಳಿಸಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದ ಈ ಮೂವರು ಸ್ಟಾರ್ ಬೌಲರ್‌ಗಳು ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ 50 ವಿಕೆಟ್ ಪೂರೈಸುವ ಸನಿಹದಲ್ಲಿದ್ದಾರೆ.
ಈ ವರ್ಷ ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ 50 ವಿಕೆಟ್ ಪಡೆಯುವ ಅವಕಾಶ ಹೊಂದಿರುವ ಟೀಮ್ ಇಂಡಿಯಾದ ಮೂವರು ಬೌಲರ್‌ಗಳ ಹೊರತಾಗಿ ಇಂಗ್ಲೆಂಡ್‌ನ ಇಬ್ಬರು ಬೌಲರ್‌ಗಳೂ ಇದ್ದಾರೆ. ಇಂಗ್ಲೆಂಡ್‌ನ ಸ್ಪಿನ್ನರ್ ಶೋಯಬ್ ಬಷೀರ್ 13 ಪಂದ್ಯಗಳಲ್ಲಿ 45 ವಿಕೆಟ್ ಪಡೆದಿದ್ದು, ವೇಗದ ಬೌಲರ್ ಗಸ್ ಅಕಿನ್‌ಸನ್ 9 ಪಂದ್ಯಗಳಿಂದ 43 ವಿಕೆಟ್ ಉರುಳಿಸಿದ್ದಾರೆ. ಈ ವರ್ಷ ಬುಮ್ರಾ, ಅಶ್ವಿನ್ ಮತ್ತು ಜಡೇಜಾ ಇನ್ನೂ ಮೂರು ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಬಷೀರ್ ಹಾಗು ಅಕಿನ್‌ಸನ್ ಎರಡೂ ಪಂದ್ಯಗಳಲ್ಲಿ ಇಂಗ್ಲೆಂಡ್ ಪರ ಕಣಕ್ಕೀಳಿದ್ದಾರೆ.
ಇದುವರೆಗೆ ವಿಶ್ವ ಟೆಸ್ಟ್ ಕ್ರಿಕೆಟ್‌ನಲ್ಲಿ ವರ್ಷವೊಂದರಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಶೇನ್ ವಾರ್ನ್ ಮತ್ತು ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಆಗ್ರಸ್ಥಾನದಲ್ಲಿದ್ದಾರೆ. ಈ ಇಬ್ಬರು ದಿಗ್ಗಜರು ವಿಶ್ವ ಕ್ರಿಕೆಟ್‌ನಲ್ಲಿ ಸಾಕಷ್ಟು ದಾಖಲೆಗಳನ್ನು ಸೃಷ್ಟಿಸಿದ್ದಾರೆ. 2005 ವಾರ್ನ್ ಅವರು 15 ಪಂದ್ಯಗಳಲ್ಲಿ 96 ವಿಕೆಟ್ ಪಡೆದಿದ್ದರು. ನಂತರದ ವರ್ಷ ಅಂದರೆ 2006ರಲ್ಲಿ ಮುರುಳೀಧರನ್ 11 ಪಂದ್ಯಗಳಲ್ಲಿ 90 ಬ್ಯಾಟರ್‌ಗಳನ್ನು ಬಲಿ ತೆಗೆದುಕೊಂಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications