Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs BAN 1st test: 400 ವಿಕೆಟ್‌ ಶಿಖರವನ್ನೇರಿದ ಜಸ್ಪ್ರೀತ್ ಬುಮ್ರಾ ವಿಶಿಷ್ಟ ದಾಖಲೆ

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡದ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇತಿಹಾಸ ಸೃಷ್ಟಿಸಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಅವರು ಹೊಸ ಮೈಲಿಗಲ್ಲು ಸಾಧಿಸಿದ್ದಾರೆ. ಅವರು ಈ ಸಾಧನೆ ಮಾಡಿದ ಅತ್ಯಂತ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

ಜಸ್ಪ್ರೀತ್ ಬುಮ್ರಾ ಅವರು ತಮ್ಮ 400 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಪೂರೈಸಿದ್ದಾರೆ. ಟೀಮ್ ಇಂಡಿಯಾ ಪರ ಅವರು 400 ವಿಕೆಟ್ ಪಡೆದ 10ನೇ ಬೌಲರ್ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಅತಿ ಕಡಿಮೆ ಪಂದ್ಯಗಳಲ್ಲಿ 400 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Jasprit Bumrah reached new milestone in Test cricket

ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಶಾದ್ಮನ್ ಇಸ್ಲಾಂ, ಮುಶ್ಫಿಕರ್ ರಹೀಮ್, ಹಸನ್ ಮಹಮೂದ್ ಅವರನ್ನು ಔಟ್ ಮಾಡುವ ಮೂಲಕ ಬುಮ್ರಾ ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ನೊಂದಾಯಿಸಿಕೊಂಡರು. ಇದಾದ ಬಳಿಕ ತಸ್ಕಿನ್ ಅಹ್ಮದ್ ಅವರನ್ನೂ ಬೌಲ್ಡ್ ಮಾಡಿದರು. ಬುಮ್ರಾ ಒಟ್ಟು 10 ಓವರ್‌ಗಳಲ್ಲಿ 40 ರನ್ ನೀಡಿ 4 ವಿಕೆಟ್‌ಗಳನ್ನು ಉರುಳಿಸಿದರು.

ಟೀಮ್ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ ಇದುವರೆಗೆ 70 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 89 ವಿಕೆಟ್ ಪಡೆದಿದ್ದಾರೆ. ಇದಲ್ಲದೇ, 36 ಟೆಸ್ಟ್ ಪಂದ್ಯಗಳಲ್ಲಿ 162 ವಿಕೆಟ್‌ಗಳನ್ನು ಜಸ್ಪ್ರೀತ್ ಬುಮ್ರಾ ಕಬಳಿಸಿದ್ದಾರೆ. 89 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 149 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಈಗ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಜಸ್ಪ್ರೀತ್ ಬುಮ್ರಾ ತನ್ನ ಪ್ರಾಬಲ್ಯ ಸಾಧಿಸಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿಹೆಚ್ಚು ವಿಕೆಟ್‌ಗಳನ್ನು ಪಡೆದಿರುವ ದಾಖಲೆಯನ್ನು ಮಾಜಿ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ (953) ಹೊಂದಿದ್ದಾರೆ.

ಜಸ್ಪ್ರೀತ್ ಬುಮ್ರಾ ವಿಶ್ವದ ಯಾವುದೇ ಮೈದಾನದಲ್ಲಿ ವಿಕೆಟ್ ಪಡೆಯುವ ಸಾಮರ್ಥ್ಯ ಹೊಂದಿದ್ದಾರೆ. 2016ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಅವರು ಪಾದಾರ್ಪಣೆ ಮಾಡಿದ್ದು, ಸದ್ಯ ಟೀಮ್ ಇಂಡಿಯಾದ ವೇಗದ ಬೌಲಿಂಗ್‌ನ ಪ್ರಮಖ ಅಸ್ತ್ರವಾಗಿದ್ದಾರೆ.

Story first published: Friday, September 20, 2024, 15:55 [IST]
Other articles published on Sep 20, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+