ICC Mens Player of the Month: ಐಸಿಸಿ ಪ್ರಶಸ್ತಿ ಗೆಲ್ಲಲು ಬುಮ್ರಾ, ರೋಹಿತ್, ಗುರ್ಬಾಜ್ ನಡುವೆ ಪೈಪೋಟಿ!
ಜುಲೈ 4 ಗುರುವಾರ, ಟಿ20 ವಿಶ್ವಕಪ್ 2024ರ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಮೂವರು ಸ್ಟಾರ್ ಕ್ರಿಕೆಟಿಗರನ್ನು ತಿಂಗಳ ಆಟಗಾರ ಪ್ರಶಸ್ತಿಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನಾಮನಿರ್ದೇಶನ ಮಾಡಿದೆ.
ಇದರಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಅಫ್ಘಾನಿಸ್ತಾನದ ವಿಕೆಟ್ ಕೀಪರ್ ಮತ್ತು ಬ್ಯಾಟರ್ ರಹಮಾನುಲ್ಲಾ ಗುರ್ಬಾಜ್ ಸೇರಿದ್ದಾರೆ. ಐಸಿಸಿ ತಿಂಗಳ 'ಜೂನ್' ಪ್ರಶಸ್ತಿ ಗೆಲ್ಲಲು ಈ ಮೂವರ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ.
ಭಾರತ ಟಿ20 ವಿಶ್ವಕಪ್ ಗೆಲ್ಲುವಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ಪ್ರಮುಖ ಪಾತ್ರ ವಹಿಸಿದ್ದರು. ಮತ್ತೊಂದೆಡೆ ಅಫ್ಘಾನಿಸ್ತಾನಕ್ಕೆ ಆರಂಭಿಕರಾದ ರಹಮಾನುಲ್ಲಾ ಗುರ್ಬಾಜ್ ತಮ್ಮ ತಂಡವನ್ನು ಸೆಮಿಫೈನಲ್‌ಗೆ ಕೊಂಡೊಯ್ಯಲು ಹಲವು ದೊಡ್ಡ ಇನ್ನಿಂಗ್ಸ್‌ಗಳನ್ನು ಆಡಿದ್ದರು.

ರೋಹಿತ್ ಶರ್ಮಾ
ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಚಾಂಪಿಯನ್ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ. 11 ವರ್ಷಗಳ ನಂತರ ಮೊದಲ ಬಾರಿಗೆ ಐಸಿಸಿ ಟ್ರೋಫಿ ಗೆಲ್ಲುವಲ್ಲಿ ರೋಹಿತ್ ಶರ್ಮಾ ಪ್ರಮುಖ ಪಾತ್ರವಹಿಸಿದ್ದರು.
ಟೀಮ್ ಇಂಡಿಯಾ ಪರ ಆರಂಭಿಕ ಬ್ಯಾಟರ್ ಆಗಿ ರೋಹಿತ್ ಶರ್ಮಾ ಅದ್ಭುತ ಪ್ರದರ್ಶನ ನೀಡಿದ್ದರು. ರೋಹಿತ್
36.71 ಸರಾಸರಿ ಮತ್ತು 156.7 ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನಲ್ಲಿ 257 ರನ್‌ಗಳನ್ನು ಹೊಡೆದಿದ್ದರು. ಜೊತೆಗೆ ಟೂರ್ನಿಯಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು.
ರೋಹಿತ್ ಆಸ್ಟ್ರೇಲಿಯಾ ವಿರುದ್ಧ ಅಂತಿಮ ಸೂಪರ್-8 ಪಂದ್ಯದಲ್ಲಿ (41 ಎಸೆತಗಳಲ್ಲಿ 92 ರನ್) ಮತ್ತು ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್‌ನಲ್ಲಿ (39 ಎಸೆತಗಳಲ್ಲಿ 57 ರನ್) ಅಬ್ಬರಿಸಿದ್ದರು.

ಜಸ್ಪ್ರೀತ್ ಬುಮ್ರಾ
ಟಿ20 ವಿಶ್ವಕಪ್ 2024ರಲ್ಲಿ ಭಾರತಕ್ಕೆ ವಿಕೆಟ್ ಬೇಕಾದಾಗ ನಾಯಕ ರೋಹಿತ್, ಜಸ್ಪ್ರೀತ್ ಬುಮ್ರಾ ಅವರಿಗೆ ಬಾಲ್ ನೀಡುತ್ತಿದ್ದರು. ಈ ವೇಳೆ ಬಲಗೈ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬ್ರೇಕ್ ಥ್ರೂ ನೀಡುತ್ತಿದ್ದರು.
ಅದು ನ್ಯೂಯಾರ್ಕ್‌ನಲ್ಲಿ ನಡೆದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಗುಂಪು ಪಂದ್ಯವಾಗಿರಲಿ ಅಥವಾ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಆಗಿರಲಿ. ಎಲ್ಲಾ ಪಂದ್ಯಗಳಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿ ಎದುರಾಳಿಗಳನ್ನು ಕಟ್ಟಿ ಹಾಕಿದ್ದರು.
ಬುಮ್ರಾ 8 ಪಂದ್ಯಗಳಲ್ಲಿ ಕೇವಲ 4.17 ರ ಆರ್ಥಿಕತೆಯೊಂದಿಗೆ 8.26 ರ ಸರಾಸರಿಯಲ್ಲಿ 15 ವಿಕೆಟ್‌ಗಳನ್ನು ಪಡೆದ್ದರು. ಈ ಪ್ರದರ್ಶನಕ್ಕಾಗಿ ಬುಮ್ರಾ ಅವರಿಗೆ ಮ್ಯಾನ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ನೀಡಲಾಗಿದೆ.

ರೆಹಮಾನುಲ್ಲಾ ಗುರ್ಬಾಜ್
ಅಫ್ಘಾನಿಸ್ತಾನದ ಆರಂಭಿಕ ಬ್ಯಾಟರ್ ಮತ್ತು ವಿಕೆಟ್ ಕೀಪರ್ ರಹಮಾನುಲ್ಲಾ ಗುರ್ಬಾಜ್ ಟಿ20 ವಿಶ್ವಕಪ್ 2024ರಲ್ಲಿ
ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಮೂಲಕ ಅಫ್ಘಾನಿಸ್ತಾನವನ್ನು ಮೊದಲ ಬಾರಿಗೆ ವಿಶ್ವಕಪ್‌ನ ಸೆಮಿಫೈನಲ್‌ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಗುರ್ಬಾಜ್ 35.12 ಸರಾಸರಿ ಮತ್ತು 124.33 ಸ್ಟ್ರೈಕ್ ರೇಟ್‌ನಲ್ಲಿ 281 ರನ್ ಗಳಿಸಿದ್ದರು. ಇದು ಟೂರ್ನಿಯಲ್ಲಿ ಯಾವುದೇ ಬ್ಯಾಟ್ಸ್‌ಮನ್ ಗಳಿಸದ ಅತಿ ಹೆಚ್ಚು ರನ್ ಆಗಿದ್ದು, ಅಫ್ಘಾನ್ ಬ್ಯಾಟರ್ ಮೊದಲ ಬಾರಿಗೆ ಅಗ್ರ ಸ್ಥಾನವನ್ನು ಸಾಧಿಸಿದ್ದರು.
ಗುರ್ಬಾಜ್ ಅವರ ಅದ್ಭುತ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 80 ಮತ್ತು ಆಸ್ಟ್ರೇಲಿಯಾ ವಿರುದ್ಧ 60 ರನ್ ಸೇರಿವೆ. ಅಫ್ಘಾನಿಸ್ತಾನ ಎರಡೂ ಇನ್ನಿಂಗ್ಸ್‌ಗಳಲ್ಲಿ ಐತಿಹಾಸಿಕ ಜಯ ದಾಖಲಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications