Jasprit Bumrah: ಇನ್ನೇನು ಕೆಲವೇ ಗಂಟೆಗಳಲ್ಲಿ ಬುಮ್ರಾ ಫಿಟ್ನೆಸ್ ವರದಿ ಬಹಿರಂಗ
ಇನ್ನೇನು ಕೆಲವೇ ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದೆ. ಈ ಮೆಗಾ ಟೂರ್ನಿಯಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸಲಿದ್ದು, ಟ್ರೋಫಿ ಮೇಲೆ ಕಣ್ಣು ನೆಟ್ಟಿವೆ. ಈಗಾಗಲೇ ಎರಡು ಬಾರಿ ಟ್ರೋಫಿಗೆ ಮುತ್ತಿಟ್ಟಿರುವ ಭಾರತ ಮತ್ತೊಮ್ಮೆ ದೊಡ್ಡ ಸಾಧನೆ ಮಾಡೋಕೆ ಪ್ಲ್ಯಾನ್ ಮಾಡಿಕೊಂಡಿದೆ. ಭಾರತ ಚಾಂಪಿಯನ್ಸ್ ಟ್ರೋಫಿಯಲ್ಲಿ ತನ್ನ ಅಭಿಯಾನವನ್ನು ಫೆ.20 ರಿಂದ ಆರಂಭಿಸಲಿದೆ. ಈ ವೇಳೆ ಟೀಮ್ ಇಂಡಿಯಾ ಅಭಿಮಾನಿಗಳು ಆ ಒಬ್ಬ ಪ್ಲೇಯರ್ ಫಿಟ್ನೆಸ್ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬೌಲರ್ ಜಸ್ಪ್ರಿತ್ ಬುಮ್ರಾ ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ಇನ್ನೇನು ಕೆಲವೇ ಘಂಟೆಗಳಲ್ಲಿ ಸ್ಪಷ್ಟ ಉತ್ತರ ಸಿಗಲಿದೆ. ಅಸಲಿಗೆ ಚಾಂಪಿಯನ್ಸ್ ಟ್ರೋಫಿ ಫೆ.19 ರಂದು ಪ್ರಾರಂಭವಾಗಲಿದೆ. ಈ ಟೂರ್ನಿಗೆ ತಂಡದಲ್ಲಿ ಬದಲಾವಣೆಗಳನ್ನು ಮಾಡಲು ಫೆ.11 ರಂದು ಕೊನೆಯ ದಿನವಾಗಿದೆ. ಈ ದಿನದೊಳಗೆ ತಂಡಗಳನ್ನು ತಮ್ಮ ತಂಡದಲ್ಲಿ ಬದಲಾವಣೆಗಳನ್ನು ಮಾಡಬಹುದಾಗಿದೆ. ಈ ಗಡುವು ಮುಗಿಯಲು ಇನ್ನು 24 ಗಂಟೆಗಳು ಮಾತ್ರ ಬಾಕಿ ಇದೆ.

ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ
ಟೀಮ್ ಇಂಡಿಯಾದ ಯರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ, ಆಸ್ಟ್ರಲಿಯಾದಲ್ಲಿ ನಡೆದಿದ್ದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಆಸ್ಟ್ರೇಲಿಯಾ ಬ್ಯಾಟರ್‌ಗಳನ್ನು ಕಾಟ ನೀಡಿದ್ದ ಬುಮ್ರಾ, ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಆದರೆ ಸಿಡ್ನಿ ಟೆಸ್ಟ್ ಪಂದ್ಯವನ್ನು ಆಡುವಾಗ ಅವರ ಬೆನ್ನೆನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರು ಮೈದಾನದಿಂದ ದೂರ ಉಳಿಯಬೇಕಾಯಿತು. ಅಲ್ಲಿಂದ ಈ ವರೆಗೆ ಬುಮ್ರಾ ಮೈದಾನಕ್ಕೆ ಇಳಿದಿಲ್ಲ. ಅಲ್ಲದೆ ಗಾಯದ ಸಮಸ್ಯೆಯನ್ನು ಎದುರಿಸುತ್ತಲೇ ಇದ್ದಾರೆ. ಅವರು ಯಾವಾಗ ಮತ್ತೆ ಬೌಲಿಂಗ್ ಮಾಡಲು ಫಿಟ್ ಆಗುತ್ತಾರೆ ಎಂಬುದು ಸ್ಪಷ್ಟವಾಗಿಲ್ಲ. ಅವರ ಫಿಟ್ನೆಸ್ ಬಗ್ಗೆ ಇನ್ನೂ ಅನಿಶ್ಚಿತತೆ ಇದೆ.
ಇನ್ನೇನು ಕೆಲವೇ ಘಂಟೆಗಳಲ್ಲಿ ಜಸ್ಪ್ರಿತ್ ಬುಮ್ರಾ ಅವರ ಗಾಯದ ಬಗ್ಗೆ ಬಿಗ್ ಅಪ್‌ಡೇಟ್ ಬಿಸಿಸಿಐ ನೀಡುವ ಸಾಧ್ಯತೆ ಇದೆ. ಅಭಿಮಾನಿಗಳು ಸಹ ಗುಡ್ ನ್ಯೂಸ್ ಬಯಸುತತಿದ್ದಾರೆ. ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಸದ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಪುನರ್ವಸತಿ ಪಡೆಯುತ್ತಿದ್ದಾರೆ. ಇವರು ಗಾಯದ ಸಮಸ್ಯೆಯಿಂದ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲೂ ಭಾಗವಹಿಸಲು ಸಾಧ್ಯವಾಗಲಿಲ್ಲ. ಇನ್ನೇನು ಕೆಲವೇ ಗಂಟೆಗಳಲ್ಲಿ ವೈದ್ಯರ ತಂಡ ಬುಮ್ರಾ ಫಿಟ್ನೆಸ್ ಬಗ್ಗೆ ಬಿಸಿಸಿಐಗೆ ಮಾಹಿತಿ ನೀಡಲಿದೆ. ವೈದ್ಯರು ನೀಡುವ ವರದಿಯನ್ನು ಆಧರಿಸಿ ಬಿಸಿಸಿಐ ತನ್ನ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ.

ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ, ಬುಮ್ರಾ ಇತ್ತೀಚೆಗೆ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಬೆನ್ನು ಸ್ಕ್ಯಾನ್ ಮಾಡಿಸಿಕೊಂಡಿದ್ದಾರೆ. ಇವರ ಈ ವರದಿಯನ್ನು ಆಧರಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಬುಮ್ರಾ ಫಿಟ್ನೆಸ್ ಇಲ್ಲದ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದರೆ, ಅವರ ಸ್ಥಾನದಲ್ಲಿ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಹರ್ಷಿತ್ ರಾಣಾ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications