Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Jasprit Bumrah ಮ್ಯಾಜಿಕ್, ಸಚಿನ್‌ ತೆಂಡೂಲ್ಕರ್ ದಾಖಲೆ ಅಳಿಸಿದ ವೇಗಿ: ಏನದು ದಾಖಲೆ?

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಟಿ20 ವಿಶ್ವಕಪ್‌ ಫೈನಲ್ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ 96 ರನ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ 3ನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಈ ಮೂಲಕ ಐತಿಹಾಸಿಕ ಸಾಧನೆ ಮಾಡಿದರು. ಫೈನಲ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ಬ್ಯಾಟಿಂಗ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದರೆ, ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಬಿಗುವಿನ ದಾಳಿ ನಡೆಸಿ 4 ವಿಕೆಟ್‌ ಪಡೆದು ಅಬ್ಬರಿಸಿದ್ದಾರೆ.

ಟಿ20 ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ಬಿಗುವಿನ ದಾಳಿ ನಡೆಸಿದ ಜಸ್ಪ್ರೀತ್ ಬುಮ್ರಾ, ನ್ಯೂಜಿಲೆಂಡ್ ತಂಡದ ಬ್ಯಾಟರ್‌ಗಳನ್ನು ಬಹುವಾಗಿ ಕಾಡಿದರು. ಅಲ್ಲದೆ 4 ಓವರ್‌ ಬೌಲಿಂಗ್ ನಡೆಸಿ 15 ರನ್‌ ನೀಡಿ 4 ವಿಕೆಟ್‌ ಪಡೆದರು. ಇವರ ಈ ಭರ್ಜರಿ ಪ್ರದರ್ಶನದ ಫಲವಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಹ ಲಭಿಸಿತು. ಈ ಮೂಲಕ ಜಸ್ಪ್ರೀತ್ ಬುಮ್ರಾ ಹಲವು ದಾಖಲೆಗಳನ್ನು ಬರೆದರು.

Jasprit Bumrah

ಟೀಮ್ ಇಂಡಿಯಾದ ವೇಗದ ಬೌಲರ್‌ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಇವರು ಒಟ್ಟಾರೆ 26 ಪಂದ್ಯಗಳಲ್ಲಿ 5.66 ಎಕಾನಮಿಯಲ್ಲಿ 40 ವಿಕೆಟ್‌ ಕಬಳಿಸಿ ಮಿಂಚಿದರು. ಈ ಮೂಲಕ ದೊಡ್ಡ ದಾಖಲೆಯನ್ನು ಬರೆದಿದ್ದಾರೆ. ಇನ್ನು ಜಸ್ಪ್ರೀತ್ ಬುಮ್ರಾ ಮತ್ತೊಂದು ದಾಖಲೆ ಬರೆದಿದ್ದು, ಈ ದಾಖಲೆ ತಡವಾಗಿ ಬೆಳಕಿಗೆ ಬಂದಿದೆ.

ಸಚಿನ್ ದಾಖಲೆ ಅಳಿಸಿದ ಬುಮ್ರಾ

ಟೀಮ್ ಇಂಡಿಯಾದ ವೇಗದ ಬೌಲರ್‌ ಜಸ್ಪ್ರೀತ್ ಬುಮ್ರಾ ಹೊಸ ದಾಖಲೆಯನ್ನು ಬರೆದಿದ್ದಾರೆ. ಇವರು ಫೈನಲ್‌ನಲ್ಲಿ ನೀಡಿದ ಭರ್ಜರಿ ಪ್ರದರ್ಶನದ ಮೂಲಕ ಸಚಿನ್‌ ತೆಂಡೂಲ್ಕರ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಜಸ್ಪ್ರೀತ್ ಬುಮ್ರಾ ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಭಾರತೀಯ ಬೌಲರ್‌ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ. ಐಸಿಸಿ ಟೂರ್ನಿಯ ನಾಕೌಟ್ ಪಂದ್ಯಗಳಲ್ಲಿ ಬುಮ್ರಾ 16 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಬಿಗುವಿನ ದಾಳಿಯ ಮೂಲಕ ಬುಮ್ರಾ, ಅಶ್ವಿನ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಭಾರತದ ಪರ ಐಸಿಸಿ ಟೂರ್ನಿಗಳಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ದಾಖಲೆ ವೇಗದ ಬೌಲರ್‌ ಮೊಹಮ್ಮದ್ ಶಮಿ ಅವರಿಗೆ ಸಲ್ಲುತ್ತದೆ. ಇವರು 22 ವಿಕೆಟ್‌ ಕಬಳಿಸಿದ್ದಾರೆ.

ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಭಾರತ ಪರ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್ಸ್‌ಗಳ ಪಟ್ಟಿ

ಮೊಹಮ್ಮದ್ ಶಮಿ, 22
ಜಹೀರ್ ಖಾನ್, 17
ರವಿಚಂದ್ರನ್ ಅಶ್ವಿನ್, 16
ಸಚಿನ್ ತೆಂಡೂಲ್ಕರ್, 15
ರವೀಂದ್ರ ಜಡೇಜಾ, 15

Story first published: Tuesday, March 10, 2026, 13:09 [IST]
Other articles published on Mar 10, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+