Jasprit Bumrah: ನ್ಯೂಜಿಲೆಂಡ್ ವೈದ್ಯರಿಂದ ಸಲಹೆ ಪಡೆದ ಜಸ್ಪ್ರೀತ್ ಬುಮ್ರಾ
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಟೂರ್ನಿಗೂ ಮುನ್ನ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಗಾಯಗೊಂಡರುವುದು ಟೀಮ್ ಇಂಡಿಯಾದ ಒತ್ತಡವನ್ನು ಹೆಚ್ಚಿಸಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಆಯ್ಕೆ ಸಮಿತಿಯು ಯಾವುದೇ ಸಂದರ್ಭದಲ್ಲೂ ಜನವರಿ 12 ರೊಳಗೆ ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಬಹುದಾಗಿದೆ. ಟೀಮ್ ಇಂಡಿಯಾದ ಮ್ಯಾಚ್ ವಿನ್ನರ್ ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುತ್ತಾರೋ? ಇಲ್ಲವೋ? ಎಂಬ ಸಸ್ಪೆನ್ಸ್ ಹೆಚ್ಚಾಗಿದೆ. ಇದೀ ಜಸ್ಪ್ರೀತ್ ಬುಮ್ರಾ ಬಗ್ಗೆ ಒಂದು ಅಪ್ಡೇಟ್ ಹೊರಬಂದಿದೆ. ಇದು ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಅಚ್ಚರಿಗೊಳಿಸಬಹುದು.
ಜಸ್ಪ್ರೀತ್ ಬುಮ್ರಾ ಅವರು ನ್ಯೂಜಿಲೆಂಡ್ ಮೂಳೆ ವೈದ್ಯರಾದ ಡಾ. ರೋವನ್ ಸ್ಚೌಟೆನ್ ಅವರನ್ನು ಸಂಪರ್ಕಿಸಿದ್ದಾರೆ ಎಂದು ವರದಿಗಳು ಹೇಳಿವೆ. ಡಾ. ರೋವನ್ ಸ್ಚೌಟೆನ್ ಅವರು 2023ರಲ್ಲಿ ಬೆನ್ನು ನೋವಿನಿಂದ ಬಳಲುತ್ತಿದ್ದ ಜಸ್ಪ್ರೀತ್ ಬುಮ್ರಾ ಅವರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದರು. ಇದೀಗ ಮತ್ತೊಮ್ಮೆ ಬುಮ್ರಾ ಬೆನ್ನು ನೋವಿಗೆ ಒಳಗಾಗಿದ್ದು, ಈ ಸಂದರ್ಭದಲ್ಲಿ ವೈದ್ಯರನ್ನು ಭೇಟಿ ಮಾಡಿರುವುದು ಟೀಮ್ ಇಂಡಿಯಾ ಮತ್ತು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ತರಿಸಿದೆ.

ಜಸ್ಪ್ರೀತ್ ಬುಮ್ರಾ ಗಾಯದ ಗಂಭೀರತೆಯ ಬಗ್ಗೆ ಬಿಸಿಸಿಐ ವೈದ್ಯಕೀಯ ತಂಡ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆರ್ಥೋಪೆಡಿಕ್ ಸರ್ಜನ್ ಡಾ.ರೋವನ್ ಸ್ಚೌಟೆನ್ ಬಿಸಿಸಿಐ ವೈದ್ಯಕೀಯ ತಂಡದೊಂದಿಗೆ ಸಂಪರ್ಕದಲ್ಲಿದ್ದು, ಆಯ್ಕೆದಾರರಿಗೆ ಈ ಬಗ್ಗೆ ತಿಳಿಸಲಾಗುವುದು ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿವೆ.
ಬುಮ್ರಾ ಅನುಮಾನ?
ಜನವರಿ 22 ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ತವರಿನ ಸರಣಿಗೆ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗುವುದು ಎಂದು ವರದಿಗಳಾಗಿವೆ. ಚಾಂಪಿಯನ್ಸ್ ಟ್ರೋಫಿಗಾಗಿ ದುಬೈಗೆ ತೆರಳುವ ಮೊದಲು ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಐದು ಟಿ20 ಮತ್ತು ಮೂರು ಏಕದಿನ ಪಂದ್ಯಗಳ ಸರಣಿಗಳನ್ನು ತವರಿನಲ್ಲಿ ಆಡಲಿದೆ.
ವರದಿಗಳ ಪ್ರಕಾರ, ಐಸಿಸಿ ನಿಗದಿಪಡಿಸಿರುವ ಜನವರಿ 12 ರೊಳಗೆ ಚಾಂಪಿಯನ್ಸ್ ಟ್ರೋಫಿಗೆ ತಾತ್ಕಾಲಿಕ ತಂಡಗಳನ್ನು ಘೋಷಣೆ ಮಾಡಬೇಕಿದೆ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾ ಒಳಗೆ ಜಸ್ಪ್ರೀತ್ ಬುಮ್ರಾ ಸ್ಥಾನ ಪಡೆಯಲಿದ್ದಾರೆ. ಆದರೆ, ಬಿಸಿಸಿಐ ವೈದ್ಯಕೀಯ ತಂಡದಿಂದ ಗ್ರೀನ್ ಸಿಗ್ನಲ್ ಪಡೆದ ನಂತರವೇ ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಅನುಮತಿ ಪಡೆಯಲಿದ್ದಾರೆ. ಇಲ್ಲದಿದ್ದರೆ ಅವರು ಮೆಗಾ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.
ಮೊಹಮ್ಮದ್ ಶಮಿ ಟೀಮ್ ಇಂಡಿಯಾಗೆ ಮರಳುವುದನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಆಯ್ಕೆ ಸಮಿತಿ ವೇಗದ ಬೌಲಿಂಗ್ ಘಟಕವನ್ನು ಹೇಗೆ ಸಿದ್ಧಪಡಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಮೊಹಮ್ಮದ್ ಶಮಿ 2023ರ ಏಕದಿನ ವಿಶ್ವಕಪ್‌ನಲ್ಲಿ ಗಾಯಗೊಂಡ ಕಾರಣ ಒಂದು ವರ್ಷ ಮೈದಾನದಿಂದ ದೂರವಿದ್ದ ನಂತರ ಕಳೆದ ವರ್ಷ ಅಕ್ಟೋಬರ್‌ನಲ್ಲಿ ದೇಶೀಯ ಕ್ರಿಕೆಟ್ ಮೂಲಕ ಮೈದಾನಕ್ಕೆ ಮರಳಿದ್ದಾರೆ. ಇಂತಹ ಸಂದರ್ಭದಲ್ಲಿ ಜಸ್ಪ್ರೀತ್ ಬುಮ್ರಾ ಕೂಡ ತಂಡಕ್ಕೆ ಸೇರಿಕೊಂಡರೆ ಟೀಮ್ ಇಂಡಿಯಾ ಬೌಲಿಂಗ್ ಬಲಿಷ್ಠವಾಗಿರಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications