ಲಂಕಾ ದಹನಕ್ಕೆ ಜಸ್ಟ್ರೀತ್ ಬೂಮ್ರಾ ರೆಡಿ; ಅಭ್ಯಾಸದಲ್ಲಿ ಟೀಮ್ ಇಂಡಿಯಾ ವೇಗಿ

ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಮೂರು ಟಿ20 ಪಂದ್ಯಗಳ ಕಿರು ಸರಣಿಯನ್ನಾಡಲು ಗುವಾಹಟಿಗೆ ಬಂದಿಳಿದಿದೆ. ಆಟಗಾರರು ಈಗಾಗಲೇ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ಕೆಲ ಸರಣಿಗಳನ್ನು ಗಾಯದ ಕಾರಣಕ್ಕೆ ತಪ್ಪಿಸಿಕೊಂಡಿದ್ದ ಜಸ್ಪ್ರೀತ್ ಬೂಮ್ರಾ ಇಂದು ಬೌಲಿಂಗ್ ಅಭ್ಯಾಸದಲ್ಲಿ ಕಾಣಿಸಿಕೊಂಡಿದ್ದಾರೆ.
ಜಸ್ಟ್ರೀತ್ ಬೂಮ್ರಾ ಅಭ್ಯಾಸದಲ್ಲಿ ತೊಡಗಿಸಿಕೊಂಡಿರುವ ವೀಡಿಯೋವೊಂದನ್ನು ಇಂದು ಬಿಸಿಸಿಐ ತನ್ನ ಅಧೀಕೃತ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದೆ. ಈ ಮೂಲಕ ಬೂಮ್ರಾ ಎದುರಾಳಿಗಳಿಗೆ ಸವಾಲೊಡ್ಡಲು ಸಿದ್ಧರಾಗಿದ್ದಾರೆ.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಗೂ ಮುನ್ನ ಬೂಮ್ರಾ ಗಾಯಗೊಂಡು ತಂಡದಿಂದ ಹೊರಗುಳಿದಿದ್ದರು. ಚಿಕಿತ್ಸೆಯ ನಂತರ ಕಳೆದ ಡಿಸೆಂಬರ್‌ನಲ್ಲಿ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ.
ಬೂಮ್ರಾ ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಪಂದ್ಯವನ್ನು ಆಡಿದ್ದರು. ಈ ಸಂದರ್ಭದಲ್ಲಿ ಬೂಮ್ರಾ ಏಳು ವಿಕೆಟ್ ಪಡೆದು ಮಿಂಚಿದ್ದರು. ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬೂಮ್ರಾ ಹ್ಯಾಟ್ರಕ್ ಸಾಧನೆ ಮಾಡಿದ್ದರು. ಈ ಮೂಲಕ ಟೆಸ್ಟ್ ಪಂದ್ಯದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ಭಾರತದ ಮೂರನೇ ಬೌಲರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಹರ್ಭಜನ್ ಸಿಂಗ್ ಮತ್ತು ಇರ್ಫಾನ್ ಪಠಾಣ್ ಟೆಸ್ಟ್‌ನಲ್ಲಿ ಹ್ಯಾಟ್ರಿಕ್ ಸಾಧಿಸಿದ ಇನ್ನಿಬ್ಬರು ಆಟಗಾರರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications