Jasprit Bumrah: ಐಸಿಸಿಯ ಗೌರವಕ್ಕೆ ಪಾತ್ರವಾದ ಟೀಮ್ ಇಂಡಿಯಾ ವೇಗಿ
ಐಸಿಸಿ ಪ್ರತಿ ತಿಂಗಳೂ ನೀಡುವ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಘೋಷಿಸಿದೆ. ಈ ಪ್ರಶಸ್ತಿಗೆ ರೇಸ್‌ನಲ್ಲಿದ್ದ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್, ದಕ್ಷಿಣ ಆಫ್ರಿಕಾದ ಡಾನ್ ಪ್ಯಾಟರ್ಸನ್ ಅವರನ್ನು ಹಿಂದಿಕ್ಕಿದ ಭಾರತದ ಸ್ಟಾರ್ ವೇಗಿ ಜಸ್ಪ್ರಿತ್ ಬುಮ್ರಾ ಈ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಜಸ್ಪ್ರಿತ್ ಬುಮ್ರಾ ಟೀಮ್ ಇಂಡಿಯಾ ಪರ ಅಮೋಘ ಪ್ರದರ್ಶನ ನೀಡಿದ್ದರು. ಅಲ್ಲದೆ ವಿಕೆಟ್ ಬೇಟೆಯಲ್ಲಿ ಮುಂಚೂಣಿಯಲ್ಲಿದ್ದರು. ಇವರ ಅಮೋಘ ಸಾಧನೆಗೆ ಈಗ ಗೌರವ ಸಂದಿದೆ.
ಈ ಬಾರಿಯ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಟೀಮ್ ಇಂಡಿಯಾದ ಪರ ಜಸ್ಪ್ರಿತ್ ಬುಮ್ರಾ ಅಮೋಘ ಪ್ರದರ್ಶನ ನೀಡಿದ್ದಾರೆ. ಅಷ್ಟೇ ಅಲ್ಲ ಇವರು ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ ಹಾಗೂ ಸಿಡ್ನಿ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾವನ್ನು ಸಹ ಮುನ್ನಡೆಸಿದ್ದಾರೆ. ಜಸ್ಪ್ರಿತ್ ಬುಮ್ರಾ ಡಿಸೆಂಬರ್‍ನಲ್ಲಿ ಸೊಗಸಾದ ದಾಳಿ ಸಂಘಟಿಸಿದ್ದು, 22 ವಿಕೆಟ್ ಬೇಟೆ ನಡೆಸಿದ್ದಾರೆ. ಈ ವೇಳೆ ಅವರ ಸರಾಸರಿ 14.22 ಆಗಿದೆ.

ಸರಣಿಯಲ್ಲಿ 32 ವಿಕೆಟ್ ಸಾಧನೆ
ಆಸೀಸ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಸರಣಿಯನ್ನು ಕೈ ಚೆಲ್ಲಿರಬಹುದು ಆದರೆ, ಜಸ್ಪ್ರಿತ್ ಬುಮ್ರಾ ಪ್ರದರ್ಶನದ ಫಲವಾಗಿ ಎಲ್ಲರ ಚಿತ್ತವನ್ನು ಕದ್ದರು. ಇನ್ನು ಗಬ್ಬಾದಲ್ಲಂತೂ ಬ್ಯಾಟಿಂಗ್‌ನಿಂದಲೂ ತಂಡಕ್ಕೆ ನೆರವಾದರು. ಬಾರ್ಡರ್ ಗವಾಸ್ಕರ್ ಸರಣಿಯ ಐದನೇ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಬುಮ್ರಾ ಗಾಯದ ಸಮಸ್ಯೆಯಿಂದ ಬೌಲಿಂಗ್ ಮಾಡಲಿಲ್ಲ. ಇವರು ಈ ಐದು ಪಂದ್ಯಗಳ ಸರಣಿಯಲ್ಲಿ 32 ವಿಕೆಟ್ ಪಡೆದು ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‍ಗಳ ಪಟ್ಟಿಯಲ್ಲಿ ಜಂಟಿ ಮೊದಲ ಸ್ಥಾನವನ್ನು ಪಡೆದಿದ್ದಾರೆ. ಈ ಮೊದಲು ಈ ಸಾಧನೆಯನ್ನು ಹರ್ಭಜನ್ ಸಿಂಗ್ ಮಾಡಿದ್ದರು. ಇವರ ಬುಟ್ಟಿಯಲ್ಲು ಸಹ 32 ವಿಕೆಟ್‌ಗಳಿವೆ.
ಆಸೀಸ್ ನೆಲದಲ್ಲಿ ಆರ್ಭಟ
ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲೂ ಬುಮ್ರಾ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ಮುಂದುವರಿಸಿದರು ಮತ್ತು ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್‌ಗಳು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಅವರು 5 ವಿಕೆಟ್‌ಗಳನ್ನು ಕಬಳಿಸಿ ಆಸ್ಟ್ರೇಲಿಯಾವನ್ನು 155 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಆಸ್ಟ್ರೇಲಿಯಾ ಪ್ರವಾಸದಲ್ಲಿ, ಅವರು ಟೀಮ್ ಇಂಡಿಯಾದ ಅತಿದೊಡ್ಡ ಪಂದ್ಯ ವಿಜೇತರಾಗಿ ಹೊರಹೊಮ್ಮಿದರು ಮತ್ತು ಇಡೀ ಸರಣಿಯಲ್ಲಿ ಒಟ್ಟು 32 ವಿಕೆಟ್‌ಗಳನ್ನು ಕಬಳಿಸಿದರು. ಆ ಸರಣಿಯ ಸಮಯದಲ್ಲಿ ಅವರು 200 ಟೆಸ್ಟ್ ವಿಕೆಟ್‌ಗಳನ್ನು ಪೂರ್ಣಗೊಳಿಸಿದರು.
ಎರಡನೇ ಬಾರಿಗೆ ಪ್ರಶಸ್ತಿ
ಜಸ್ಪ್ರಿತ್ ಬುಮ್ರಾ ಐಸಿಸಿ ತಿಂಗಳು ಆಟಗಾರ ಪ್ರಶಸ್ತಿಯನ್ನು ಎರಡನೇ ಬಾರಿಗೆ ಪಡೆದು ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು 2024ರ ಜನವರಿಯಲ್ಲಿ ಈ ಪ್ರಶಸ್ತಿ ಬುಮ್ರಾ ಮುಡಿಗೆ ಸಂದಿತ್ತು. ಈ ಮೂಲಕ ತಿಂಗಳು ಆಟಗಾರ ಪ್ರಶಸ್ತಿಯನ್ನು ಎರಡು ಬಾರಿ ಪಡೆದ ಎರಡನೇ ಭಾರತೀಯ ಆಟಗಾರ ಎಂಬ ಖ್ಯಾತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಶುಭಮನ್ ಗಿಲ್ ಈ ಸಾಧನೆಯನ್ನು ಮಾಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications