ಚಿಕ್ಕ ವಯಸ್ಸಿನಲ್ಲಿ ಐಸಿಸಿ ಅಧ್ಯಕ್ಷ ಹುದ್ದೆಗೆ ಏರಿದ ಜಯ್ ಶಾ
ಭಾರತೀಯ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರಿಗೆ ದೊಡ್ಡ ಹುದ್ದೆ ಸಿಕ್ಕಿದೆ. ಇವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಚೇರಮೆನ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಹುದ್ದೆಗೆ ಅವರು ಮಂಗಳವಾರ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಡಿಸೆಂಬರ್ 1 ರಿಂದ ಅವರು ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಜಯ್ ಶಾ ನೇಮಕದ ಬಗ್ಗೆ ಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ. ಜಯ್ ಶಾ ಅಧ್ಯಕ್ಷರಾಗುತ್ತಿದ್ದಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪ್ರಾಬಲ್ಯ ಗಣನೀಯವಾಗಿ ಹೆಚ್ಚಾಗಲಿದೆ. ಜಯ್ ಶಾ ಅವರ ಅಧಿಕಾರ ಅವಧಿ ಸೆಪ್ಟಂಬರ್ 2025ರ ವರೆಗೆ ಇರಲಿದೆ.

ಅವಿರೋಧ ಆಯ್ಕೆ
ಹಾಲಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಮೂರನೇ ಅವಧಿಗೆ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಿದ್ಧರಿಲಿಲ್ಲ. ಹೀಗಾಗಿ ಈ ಸ್ಥಾನದ ಮೇಲೆ ಜಯ್ ಶಾ ವಿರಾಜಮಾನರಾಲಿದ್ದಾರೆ. ಗ್ರೆಗ್ ಬಾರ್ಕ್ಲೇ ಅವರಿಗೆ ಜಯ್ ಶಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜಯ್ ಶಾ ಅವರ ಬೆಂಬಲಕ್ಕೆ ಹೆಚ್ಚಿನ ಸದಸ್ಯರು ಸಮ್ಮತಿ ಸೂಚಿಸಿದ್ದರಿಂದ ಇವರು ಅಧ್ಯಕ್ಷರಾಗಿ ಆಯ್ಕೆ ಆಗುವುದು ಬಹುತೇಕ ಖಚಿತ ಎಂದು ಪರಿಗಣಿಸಲಾಗಿತ್ತು.
ಐಸಿಸಿ ಮುಖ್ಯಸ್ಥರ ಹುದ್ದೆಗೆ ಜಯ್ ಶಾ ನಾಮನಿರ್ದೇಶನ ಮಾಡುತ್ತಲೇ ಗೆಲುವು ಫಿಕ್ಸ್ ಎಂದು ಅಂದಾಜಿಸಲಾಗಿತ್ತು. ಇನ್ನು ಈ ಗಾದಿಗೆ ಏರಲು ಜಯ್ ಶಾ ಅವರಿಗೆ 16 ಸದಸ್ಯರ ಮತಗಳಲ್ಲಿ 9 ಸದಸ್ಯರ ಮತ ಬಿದ್ದರೂ ಸಾಕಿತ್ತು. ಆಸ್ಟ್ರೇಲಿಯಾ, ಇಂಗ್ಲೆಂಡ್ ಮಂಡಳಿಗಳು ಬಹಿರಂಗವಾಗಿ ಅವರಿಗೆ ಬೆಂಬಲವನ್ನು ನೀಡಿದ್ದವು.
ಚಿಕ್ಕ ವಯಸ್ಸಿನಲ್ಲಿ ದೊಡ್ಡ ಹುದ್ದೆ
35ನೇ ವಯಸ್ಸಿನಲ್ಲಿ ದೊಡ್ಡ ಹುದ್ದೆ ಅಲಂಕರಿಸಿ ಇತಿಹಾಸ ನಿರ್ಮಿಸಿದ್ದಾರೆ. ಇವರಿಗಿಂತ ಮೊದಲು ಜಗಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ಐಸಿಸಿ ಅಧ್ಯಕ್ಷರಾಗಿದ್ದರು.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಐಸಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರೆ, ಬಿಸಿಸಿಐ ಕಾರ್ಯದರ್ಶಿ ಯಾರು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ರೇಸ್‌ನಲ್ಲಿ ರೋಹನ್ ಜೇಟ್ಲಿ ಹೆಸರು ವ್ಯಾಪಕವಾಗಿ ಕೇಳಿ ಬರುತ್ತಿದೆ. ರೋಹನ್ ಅವರು ದಿವಂಗತ ಬಿಜೆಪಿ ನಾಯಕ ಅರುಣ್ ಜೇಟ್ಲಿ ಅವರ ಪುತ್ರ. ಆದರೆ ರೋಹನ್ ಈ ಊಹಾಪೋಹಗಳನ್ನು ಅಲ್ಲಗಳೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications