ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೀಮ್ ಇಂಡಿಯಾಗೆ ಆಯ್ಕೆಯಾಗಲು ಇನ್ನೂ ಯಾವ ರೀತಿಯ ಆಟವಾಡಬೇಕು; ಉನಾದ್ಕತ್ ಬೇಸರ

Jaydev Unadkat expresses disappointment over exclusion from India’s recent overseas squads

ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಹಾಗೂ ಈ ಪಂದ್ಯ ಮುಗಿದ ಬೆನ್ನಲ್ಲೇ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿಯನ್ನು ಭಾರತ ತಂಡ ಆಡಲಿದೆ. ಹೀಗಾಗಿ ಈ ಎರಡೂ ಸರಣಿಗಳಿಗೂ ಸೇರಿ ಬಿಸಿಸಿಐ 20 ಸದಸ್ಯರ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಿದೆ.

ಕೊಹ್ಲಿ ಅಲ್ಲ ಅತಿಹೆಚ್ಚು ಸಂಭಾವನೆ ಪಡೆಯುವ ನಾಯಕ; ಇಲ್ಲಿದೆ ಟಾಪ್ 5 ನಾಯಕರ ಪಟ್ಟಿಕೊಹ್ಲಿ ಅಲ್ಲ ಅತಿಹೆಚ್ಚು ಸಂಭಾವನೆ ಪಡೆಯುವ ನಾಯಕ; ಇಲ್ಲಿದೆ ಟಾಪ್ 5 ನಾಯಕರ ಪಟ್ಟಿ

ಈ ಕುರಿತು ಇದೀಗ ಸೌರಾಷ್ಟ್ರ ತಂಡದ ಆಟಗಾರ ಜಯದೇವ್ ಉನಾದ್ಕತ್ ಮಾತನಾಡಿದ್ದು ಬೇಸರ ವ್ಯಕ್ತಪಡಿಸಿದ್ದಾರೆ. 2019-20ನೇ ಸಾಲಿನ ರಣಜಿ ಟ್ರೋಫಿಯಲ್ಲಿ ಜಯದೇವ್ ಉನಾದ್ಕತ್ ನಾಯಕತ್ವದ ಸೌರಾಷ್ಟ್ರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆ ಟೂರ್ನಿಯಲ್ಲಿ ಜಯದೇವ್ ಉನಾದ್ಕತ್ 10 ಪಂದ್ಯಗಳಲ್ಲಿ 67 ವಿಕೆಟ್‍ಗಳನ್ನು ಪಡೆದು ಮಿಂಚಿದ್ದರು. ರಣಜಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕಾರಣ ಜಯದೇವ್ ಉನಾದ್ಕತ್ ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿ ಅವಕಾಶ ಪಡೆಯಲಿದ್ದಾರೆ ಎಂಬ ಸುದ್ದಿ ಇತ್ತು ಆದರೆ ತಂಡ ಪ್ರಕಟವಾದಾಗ ಜಯದೇವ್ ಉನದ್ಕತ್ ಅವರ ಹೆಸರಿರಲಿಲ್ಲ.

ಯಾರಿಂದಲೂ ಮುರಿಯಲಾಗದ ಸಿಎಸ್‌ಕೆ ನಿರ್ಮಿಸಿರುವ 5 ದಾಖಲೆಗಳು!ಯಾರಿಂದಲೂ ಮುರಿಯಲಾಗದ ಸಿಎಸ್‌ಕೆ ನಿರ್ಮಿಸಿರುವ 5 ದಾಖಲೆಗಳು!

ಈ ಕುರಿತು ಬೇಸರ ವ್ಯಕ್ತಪಡಿಸಿರುವ ಉನಾದ್ಕತ್ 'ಈ ಬಾರಿಯ ಇಂಗ್ಲೆಂಡ್ ಪ್ರವಾಸಕ್ಕೆ ನನ್ನ ಹೆಸರನ್ನು ಆಯ್ಕೆ ಮಾಡುತ್ತಾರೆ ಎಂದು ಕಾದಿದ್ದೆ, ಆದರೆ ಈ ಬಾರಿಯೂ ನನಗೆ ನಿರಾಸೆ ಉಂಟಾಗಿದೆ. ಕಳೆದ ರಣಜಿ ಟ್ರೋಫಿಯಲ್ಲಿ 67 ವಿಕೆಟ್ ಪಡೆದು ಉತ್ತಮ ಪ್ರದರ್ಶನವನ್ನು ನೀಡಿದ್ದೆ, ಆದರೆ 2020 ಐಪಿಎಲ್ ಟೂರ್ನಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡಲಿಲ್ಲ. ಇತ್ತೀಚಿನ ದಿನಗಳಲ್ಲಿ ರಣಜಿಯಲ್ಲಿ ಉತ್ತಮ ಪ್ರದರ್ಶನ ತೋರಿದರೆ ಯಾರೂ ಗಮನಿಸುವುದಿಲ್ಲ ಆದರೆ ಐಪಿಎಲ್ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೆ ತಂಡದಲ್ಲಿ ಸ್ಥಾನ ಸಿಗುತ್ತಿದೆ' ಎಂದು ಬೇಸರ ವ್ಯಕ್ತಪಡಿಸಿದರು.

Story first published: Monday, May 24, 2021, 15:58 [IST]
Other articles published on May 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X