ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಂದು ಮಹತ್ತರ ಮೈಲಿಗಲ್ಲು ತಲುಪಿದ ಜೋ ರೂಟ್
ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸುತ್ತಿದ್ದಾರೆ. ಪ್ರಸಕ್ತ ವರ್ಷ ಭರ್ಜರಿ ರನ್ ಕಕೆ ಹಾಕಿ ಅಬ್ಬರಿಸಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಗುರುವಾರದಿಂದ, ನ್ಯೂಜಿಲೆಂಡ್ ವಿರುದ್ಧ ಆರಂಭವಾದ ಟೆಸ್ಟ್ ಕ್ರಿಕೆಟ್‌ನಲ್ಲಿ ದಾಖಲೆ ಬರೆದಿದ್ದಾರೆ. ಈ ಮೂಲಕ ಈ ಸಾಧನೆಯನ್ನು ಮಾಡಿದ ಇಂಗ್ಲೆಂಡ್ ತಂಡದ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ ರೂಟ್ ಮೈದಾನಕ್ಕೆ ಇಳಿಯುತ್ತಿದ್ದಂತೆ ಈ ಸಾಧನೆ ಮಾಡಿದರು. ಹಾಗಿದ್ದರೆ ಆ ಸಾಧನೆ ಏನು ಎಂಬ ಬಗ್ಗೆ ವರದಿ ಇಲ್ಲಿದೆ.
ನ್ಯೂಜಿಲೆಂಡ್ ಪ್ರವಾಸ ಬೆಳೆಸಿರುವ ಇಂಗ್ಲೆಂಡ್ ಈ ವೇಳೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಯ ಮೊದಲ ಪಂದ್ಯ ಗುರುವಾರ ನಡೆಯಿತು. ಕ್ರೈಸ್ಟ್ ಚರ್ಚ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಮಾಡಲು ಮುಂದಾಯಿತು. ಈ ವೇಳೆ ಮೊದಲ ಬ್ಯಾಟ್ ಮಾಡಿ ಇಂಗ್ಲೆಂಡ್ ಮೊದಲ ದಿನದಾಟದ ಮುಕ್ತಾಯಕ್ಕೆ 8 ವಿಕೆಟ್‌ಗೆ 319 ರನ್ ಸೇರಿಸಿತು. ಈ ಪಂದ್ಯದಲ್ಲಿ ಇಂಗ್ಲೆಂಡ್ ಪರ ಜೋ ರೂಟ್ ದಾಖಲೆಯ ಪುಟಕ್ಕೆ ಮತ್ತೊಮ್ಮೆ ಎಂಟ್ರಿ ನೀಡಿದ್ದಾರೆ.

ರೂಟ್ ಬರೆದ ದಾಖಲೆ ಯಾವುದು?
ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಸುಮಾರು ಎರಡು ತಿಂಗಳ ನಂತರ ಟೆಸ್ಟ್ ಕ್ರಿಕೆಟ್‌ಗೆ ಮರಳಿದ್ದಾರೆ. ಈ ವೇಳೆ ಅವರು 93 ರನ್‌ಗಳ ಅದ್ಭುತ ಇನ್ನಿಂಗ್ಸ್ ಕಟ್ಟಿ ತವರಿನ ಅಭಿಮಾನಿಗಳ ಮುಂದೆ ಅಬ್ಬರಿಸಿದರು. ಆದರೆ ಜಸ್ಟ್ 7 ರನ್‌ಗಳಿಂದ ಇವರು ಶತಕ ವಂಚಿತರಾದರು.
ಈ ಟೆಸ್ಟ್ ಇಂಗ್ಲೆಂಡ್ ತಂಡದ ಅನುಭವಿ ಆಟಗಾರ ಜೋ ರೂಟ್ ಅವರಿಗೆ ವಿಶೇಷವಾಗಿದೆ. ಈ ಟೆಸ್ಟ್ ಪಂದ್ಯ ಜೋ ರೂಟ್ ಟೆಸ್ಟ್ ಕ್ರಿಕೆಟ್ ಜೀವನದ 150ನೇ ಪಂದ್ಯವಾಗಿರಲಿದೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 11ನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ಇವರು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಅಂಗಳಕ್ಕೆ ಇಳಿಯುವ ಮೂಲಕ ರೂಟ್, ಶ್ರೀಲಂಕಾದ ಮಹೇಲಾ ಜಯವರ್ಧನೆ ಅವರ ದಾಖಲೆಯನ್ನು ಅಳಿಸಿ ಹಾಕಿದರು. ಮಹೆಲಾ ಟೆಸ್ಟ್ ಕ್ರಿಕೆಟ್‌ನಲ್ಲಿ 149 ಟೆಸ್ಟ್ ಪಂದ್ಯಗಳನ್ನು ಆಡಿದ್ದರು.
ಜೋ ರೂಟ್ ಅವರಿಗೂ ಮೊದಲು ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್, ಸ್ಟುವರ್ಟ್ ಬ್ರಾಡ್ ಮತ್ತು ಅಲಿಸ್ಟರ್ ಕುಕ್ ಮಾತ್ರ ಈ ಸಾಧನೆ ಮಾಡಿದ್ದರು. ಅಲಿಸ್ಟರ್ ಕುಕ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 161 ಪಂದ್ಯಗಳನ್ನು ಆಡಿದ್ದಾರೆ. ಜೇಮ್ಸ್ ಆಂಡರ್ಸನ್ 188, ಸ್ಟುವರ್ಟ್ ಬ್ರಾಡ್ 167 ಟೆಸ್ಟ್ ಪಂದ್ಯಗಳನ್ನು ಆಡಿದ್ದು ಈಗಾಗಲೇ ನಿವೃತ್ತಿ ಪಡೆದಿದ್ದಾರೆ.

ರೂಟ್ ಸಾಧನೆ
ಜೋ ರೂಟ್ 150 ಪಂದ್ಯಗಳಲ್ಲಿ 12754 ರನ್ ಗಳಿಸಿದ್ದಾರೆ. ಈ ವೇಳೆ ಅವರ ಸರಾಸರಿ 51.01 ಮತ್ತು 45.77 ಸ್ಟ್ರೈಕ್ ರೇಟ್‌ನಲ್ಲಿ ಆಗಿದೆ. ಜೋ ರೂಟ್ 35 ಶತಕ ಮತ್ತು 70 ಅರ್ಧ ಶತಕಗಳನ್ನು ಗಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications