Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

2ನೇ ಮಗುವಿಗೆ ತಂದೆಯಾದ ಜೋ ರೂಟ್, ಮಗುವಿನ ಫೋಟೋ ವೈರಲ್

Joe Root becomes father for the second time

ಲಂಡನ್, ಜುಲೈ 8: ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಜೋ ರೂಟ್ ಎರಡನೇ ಮಗುವಿಗೆ ತಂದೆಯಾಗಿದ್ದಾರೆ. ಇಂಗ್ಲೆಂಡ್ vs ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮಧ್ಯೆಯೇ ರೂಟ್‌ ಪತ್ನಿ ಕ್ಯಾರಿ ಕೊಟೆರೆಲ್ ಎರಡನೇ ಮಗುವಿಗೆ ಜನ್ಮವಿತ್ತಿದ್ದಾರೆ. ಜೋ ರೂಟ್ ಮತ್ತು ನವಜಾತ ಶಿಶುವಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಎರಡನೇ ಮಗು ಮತ್ತು ಮೊದಲ ಮಗನ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಜೋ ರೂಟ್, 'ಇಂಗ್ಲೆಂಡ್ ಕ್ರಿಕೆಟಿಗರಿಗೆ ಶುಭ ಹಾರೈಕೆಗಳು. ನಾವು ನಿಮ್ಮ ಆಟವನ್ನು ವೀಕ್ಷಿಸುತ್ತಿದ್ದೇವೆ ಮತ್ತು ನಿಮ್ಮನ್ನು ಬೆಂಬಲಿಸುತ್ತಿದ್ದೇವೆ,' ಎಂದು ಬರೆದುಕೊಂಡಿದ್ದಾರೆ.

ಇಂಗ್ಲೆಂಡ್ vs ವೆಸ್ಟ್ ಇಂಡೀಸ್, 1ನೇ ಟೆಸ್ಟ್ ಪಂದ್ಯ, Live ಸ್ಕೋರ್‌ಕಾರ್ಡ್

1
46753

ತನಗೆ ಎರಡನೇ ಮಗುವಾಗುತ್ತಿರುವುದು ಗೊತ್ತಿದ್ದರಿಂದ ಇಂಗ್ಲೆಂಡ್ ಟೆಸ್ಟ್ ತಂಡದ ಎಂದಿನ ನಾಯಕ ರೂಟ್, ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ನಿಂದ ಬಿಡುವು ಪಡೆದುಕೊಂಡಿದ್ದರು. ರೂಟ್ ಅನುಪಸ್ಥಿತಿಯಲ್ಲಿ ಉಪನಾಯಕ ಬೆನ್ ಸ್ಟೋಕ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.

Joe Root becomes father for the second time

ಸೌತಾಂಪ್ಟನ್‌ನ ರೋಸ್‌ಬೌಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್-ವೆಸ್ಟ್ ಇಂಡೀಸ್ ಮೊದಲನೇ ಟೆಸ್ಟ್ ಪಂದ್ಯಕ್ಕೆ ಆರಂಭದಲ್ಲೇ ಮಳೆ ಅಡ್ಡಿಪಡಿಸಿತು. ಮಳೆಯ ಕಾರಣ ಪಂದ್ಯ ವಿಳಂಬವಾಗಿ ಆರಂಭವಾಯಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ ಆಡುತ್ತಿದೆ.

Story first published: Thursday, July 9, 2020, 10:08 [IST]
Other articles published on Jul 9, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+