Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಸೆಮಿಫೈನಲ್‌ಗೂ ಮುನ್ನ ಆಸೀಸ್‌ಗೆ ಎಚ್ಚರಿಕೆ ರವಾನಿಸಿದ ಜೋ ರೂಟ್‌

Joe Root confident Australia will find it difficult to beat England

ಬರ್ಮಿಂಗ್‌ಹ್ಯಾಮ್‌, ಜುಲೈ 09: ವಿಶ್ವಕಪ್‌ ಟೂರ್ನಿಯ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುತ್ತಿದ್ದು, ಲೀಗ್‌ ಹಂತದಲ್ಲಿ ಅನುಭವಿಸಿದ ಸೋಲಿಗೆ ನಾಕ್‌ಔಟ್‌ ಹಂತದಲ್ಲಿ ಇಂಗ್ಲೆಂಡ್‌ ಸೇಡು ತೀರಿಸಿಕೊಳ್ಳಲಿದೆ ಎಂದು ಅನುಭವಿ ಬ್ಯಾಟ್ಸ್‌ಮನ್‌ ಜೋ ರೂಟ್‌ ಹೇಳಿದ್ದಾರೆ.

ವಿಶ್ವಕಪ್‌ ವೇಳಾಪಟ್ಟಿ / ಮುಖಾಮುಖಿ ದಾಖಲೆಗಳು / ಅಂಕಪಟ್ಟಿ

ಇಲ್ಲಿನ ಎಡ್ಜ್‌ಬಾಸ್ಟನ್‌ ಕ್ರೀಡಾಂಗಣದಲ್ಲಿ ಜುಲೈ 11ರಂದು (ಗುರುವಾರ) ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ ತಂಡಗಳು ಕಾದಾಟ ನಡೆಸಲಿವೆ. ಕಳೆದ ತಿಂಗಳು ಲಾರ್ಡ್ಸ್‌ನಲ್ಲಿ ನಡೆದ ಲೀಗ್‌ ಹಂತದ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಆಸ್ಟ್ರೇಲಿಯಾ ಸುಲಭ ಜಯ ದಾಖಲಿಸಿತ್ತು.

ಆದರೆ ಇಂಗ್ಲೆಂಡ್‌ ತಂಡ ಇದೀಗ ಆತ್ಮವಿಶ್ವಾಸದ ಅಲೆಯಲ್ಲಿದೆ. ಏಕೆಂದರೆ ತನ್ನ ಅಂತಿಮ ಲೀಗ್‌ ಪಂದ್ಯಗಳಲ್ಲಿ ಅಂಕಪಟ್ಟಿಯ ಅಗ್ರಸ್ಥಾನಿ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳನ್ನು ಬಗ್ಗುಬಡಿದಿರುವ ಇಂಗ್ಲೆಂಡ್‌, ಸೆಮಿಫೈನಲ್‌ ಹಣಾಹಣಿಯಲ್ಲಿ ಆಸೀಸ್‌ ಪಡೆಯನ್ನೂ ಹತ್ತಿಕ್ಕಲು ಎದುರು ನೋಡುತ್ತಿದೆ.

"ಆಸ್ಟ್ರೇಲಿಯಾ ವಿರುದ್ಧ ನಾವು ಆಡಿರುವ ಕಳೆದ 11 ಪಂದ್ಯಗಳನ್ನು ಗಮನಿಸಿದರೆ ನಮ್ಮ ತಂಡ 9 ಪಂದ್ಯಗಳನ್ನು ಗೆದ್ದಿದೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ನಮ್ಮ ತಂಡದ ಆಟಗಾರರು ಆಸ್ಟ್ರೇಲಿಯಾ ವಿರುದ್ಧ ಆಡಿದ ಉತ್ತಮ ಅನುಭವ ಹೊಮದಿದ್ದಾರೆ. ಅಷ್ಟೇ ಅಲ್ಲದೆ ಉತ್ತಮ ದಾಖಲೆಯನ್ನೂ ಹೊಂದಿದ್ದಾರೆ. ಇದೇ ಆತ್ಮವಿಶ್ವಾಸದೊಂದಿಗೆ ಗುರುವಾರ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲಿದ್ದೇವೆ," ಎಂದು ಜೋ ರೂಟ್‌ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

"ನಮ್ಮ ತಂಡ ಉತ್ತಮ ಸ್ಥಿತಿಯಲ್ಲಿದೆ. ಏಕೆಂದರೆ ಕಳೆದ ಎರಡು ಪಂದ್ಯಗಳು ಕೂಡ ನಮ್ಮ ಪಾಲಿಗೆ ನಾಕ್‌ಔಟ್‌ ಪಂದ್ಯಗಳಂತಿತ್ತು. ಯಾರು ಫೇವರಿಟ್‌ ಎಂಬುದು ಇಲ್ಲಿ ಮುಖ್ಯವಲ್ಲ. ಆ ದಿನದಂದು ಯಾವ ತಂಡ ಉತ್ತಮವಾಗಿ ಆಡುತ್ತದೆ ಎಂಬುದಷ್ಟೇ ಇಲ್ಲಿ ಮುಖ್ಯವಾಗುತ್ತದೆ. ಕಳೆದ ಎರಡು ಪಂದ್ಯಗಳಲ್ಲಿ ನಮ್ಮ ತಂಡ ನೀಡುವ ಪ್ರದರ್ಶನವನ್ನು ಸೆಮಿಫೈನಲ್‌ನಲ್ಲೂ ಕಾಯ್ದುಕೊಂಡರೆ, ನಮ್ಮೆದುರು ಆಡುವುದು ಅಷ್ಟು ಸುಲಭದ ಮಾತಲ್ಲ," ಎಂದಿದ್ದಾರೆ.

"ಕಳೆದ ಎರಡೂ ಪಂದ್ಯಗಳಲ್ಲಿ ಬಹಳ ಒತ್ತಡದಲ್ಲಿ ಆಡಿದ್ದೇವೆ. ಇದರ ಸನುಭವ ಸೆಮಿಫೈನಲ್‌ ಪಂದ್ಯದಲ್ಲಿ ನೆರವಿಗೆ ಬರಲಿದೆ. ಅಂಕಿ ಅಂಶಗಳನ್ನು ಗಮನಿಸಿದರೆ ನಮ್ಮ ತಂಡ ಬಲಿಷ್ಠವಾಗಿದೆ. ಆದರೂ ಪಂದ್ಯದಲ್ಲಿ ಒತ್ತಡ ನಿಭಾಯಿಸುವ ತಂಡಕ್ಕೆ ಗೆಲುವು ಒಲಿಯಲಿದೆ,'' ಎಂದು ಸೆಮಿಫೈನಲ್‌ ಪಂದ್ಯದ ಕುರಿತಾಗಿ ರೂಟ್‌ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Story first published: Tuesday, July 9, 2019, 21:48 [IST]
Other articles published on Jul 9, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+