Joe Root Century: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ದಿಗ್ಗಜರ ಕ್ಲಬ್ ಸೇರಿದ ಜೋ ರೂಟ್
ಇತ್ತೀಚೆಗೆ ವಿಶ್ವ ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಜೋ ರೂಟ್ ಅಬ್ಬರ ಜೋರಾಗಿದೆ. ಪ್ರಸ್ತುತ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಜೋ ರೂಟ್ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ.
ಅದ್ಭುತ ಫಾರ್ಮ್‌ನಲ್ಲಿರುವ ಜೋ ರೂಟ್ ಸತತವಾಗಿ ಶತತಗಳನ್ನು ಬಾರಿಸಿದ್ದಾರೆ. ಶನಿವಾರ ಲಾರ್ಡ್ಸ್‌ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ತಮ್ಮ ವೃತ್ತಿಜೀವನದ 34ನೇ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಇಂಗ್ಲೆಂಡ್ ಪರ ಅತಿ ಹೆಚ್ಚು ಟೆಸ್ಟ್ ಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಜೋ ರೂಟ್ ಇತಿಹಾಸ
ಮೂರನೇ ದಿನದಂದು ಮೊದಲ ಇನ್ನಿಂಗ್ಸ್‌ನಲ್ಲಿ 143 ರನ್ ಗಳಿಸಿದ ರೂಟ್ ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಶತಕ ಹೊಡೆದು ಸಂಭ್ರಮಿಸಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್ ಪರ ಅತಿ ಹೆಚ್ಚು ಟೆಸ್ಟ್ ಶತಕಗಳ ಹೊಡೆದಿರುವ ದಾಖಲೆ ಅಲಸ್ಟೈರ್ ಕುಕ್ (33) ಹೆಸರಿನಲ್ಲಿತ್ತು. ಇದೀಗ ರೂಟ್ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಶ್ರೀಲಂಕಾದ ವೇಗದ ಬೌಲರ್ ಲಹಿರು ಕುಮಾರ ಬೌಲಿಂಗ್‌ನಲ್ಲಿ ಬೌಂಡರಿ ಬಾರಿಸುವ ಮೂಲಕ
ರೂಟ್ 111 ಎಸೆತಗಳಲ್ಲಿ ಶತಕ ಸಿಡಿಸಿದ್ದಲ್ಲದೆ, ಇದು ಅವರ ವೇಗದ ಟೆಸ್ಟ್ ಶತಕವಾಗಿದೆ. ರೂಟ್ ತಮ್ಮ 145ನೇ ಟೆಸ್ಟ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಆದರೆ ಕುಕ್ 161 ಪಂದ್ಯಗಳನ್ನು ತೆಗೆದುಕೊಂಡಿದ್ದಾರೆ.
ಲಾರ್ಡ್ಸ್‌ನಲ್ಲಿ ಅದ್ಭುತ ದಾಖಲೆ
ರೂಟ್ ಲಾರ್ಡ್ಸ್‌ನಲ್ಲಿ ತಮ್ಮ ಏಳನೇ ಟೆಸ್ಟ್ ಶತಕ ಬಾರಿಸುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ. ಅವರು ಲಾರ್ಡ್ ಅಂಗಳದಲ್ಲಿ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಗಳಿಸಿದ ಆಟಗಾರಲ್ಲಿ ಮೊದಲಿಗರಾಗಿದ್ದಾರೆ. ಇಂಗ್ಲೆಂಡ್‌ನ ದಿಗ್ಗಜ ಬ್ಯಾರಟ್‌ಗಳಾದ ಗ್ರಹಾಂ ಗೂಚ್ ಮತ್ತು ಮೈಕೆಲ್ ವಾನ್ ಅವರು ಲಾರ್ಡ್ಸ್‌ನಲ್ಲಿ ತಲಾ ಆರು ಶತಕಗಳನ್ನು ಹೊಡೆದಿದ್ದಾರೆ.
ದಿಗ್ಗಜರ ಕ್ಲಬ್
ಲಾರ್ಡ್ಸ್‌ನಲ್ಲಿ ರೂಟ್ ಒಂದೇ ಟೆಸ್ಟ್‌ನಲ್ಲಿ ಎರಡು ಸತತಗಳನ್ನು ಗಳಿಸುವ ಮೂಲಜ ದಿಗ್ಗಜರ ಕ್ಲಬ್ ಸೇರಿದ್ದಾರೆ. ವೆಸ್ಟ್ ಇಂಡೀಸ್‌ನ ಜಾರ್ಜ್ ಹ್ಯಾಡ್ಲಿ, ಗೂಚ್ ಮತ್ತು ವಾನ್ ನಂತರ ಈ ಸಾಧನೆ ಮಾಡಿದ ನಾಲ್ಕನೇ ಬ್ಯಾಟರ್ ಆಗಿದ್ದಾರೆ. 1990 ರಲ್ಲಿ ಲಾರ್ಡ್ಸ್‌ನಲ್ಲಿ ಭಾರತದ ವಿರುದ್ಧ ಗೂಚ್ ಈ ದಾಖಲೆಯನ್ನು ಸೃಷ್ಟಿಸಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದವರ ಪಟ್ಟಿಯಲ್ಲಿ ಟೀಮ್ ಇಂಡಿಯಾದ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ (51 ಶತಕಗಳು) ಅಗ್ರಸ್ಥಾನದಲ್ಲಿದ್ದಾರೆ. ರೂಟ್ 34 ಟೆಸ್ಟ್ ಶತಕಗಳನ್ನು ಹೊಡೆದು ಜಂಟಿ ಆರನೇ ಸ್ಥಾನವನ್ನು ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications