Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Joe Root: ಸಚಿನ್ ತೆಂಡೂಲ್ಕರ್ ಟೆಸ್ಟ್ ರೆಕಾರ್ಡ್ ಬ್ರೇಕ್ ಮಾಡಿ ಇತಿಹಾಸ ಸೃಷ್ಟಿಸಿದ ರೂಟ್

ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ಭಾನುವಾರ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ಎಂಟು ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಈ ಗೆಲುವಿನೊಂದಿಗೆ ಅನೇಕ ಇಂಗ್ಲೆಂಡ್ ಆಟಗಾರರು ಕೂಡ ದಾಖಲೆಗಳನ್ನು ಮಾಡಿದ್ದಾರೆ. ಅವರಲ್ಲಿ ಸ್ಟಾರ್ ಬ್ಯಾಟರ್ ಜೋ ರೂಟ್ ಕೂಡ ಒಬ್ಬರು.

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ 23 ರನ್​ ಬಾರಿಸುವ ಮೂಲಕ ಜೋ ರೂಟ್ ಟೆಸ್ಟ್ ಕ್ರಿಕೆಟ್‌​​ನಲ್ಲಿ ಹೊಸ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಟೀಮ್ ಇಂಡಿಯಾದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ವಿಶ್ವ ದಾಖಲೆಯನ್ನು ರೂಟ್ ಮುರಿದ್ದಾರೆ. ಜೋ ರೂಟ್ ಟೆಸ್ಟ್ ಕ್ರಿಕೆಟ್‌ನ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ.

Joe Root Creates History by Breaking Sachin Tendulkar s Test Record

ಸಚಿನ್ ತೆಂಡೂಲ್ಕರ್ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಒಟ್ಟು 60 ಬಾರಿ ಬ್ಯಾಟಿಂಗ್ ಮಾಡಿದ್ದಾರೆ. ಈ ವೇಳೆ ಒಟ್ಟು 1625 ರನ್ ಗಳಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆ ಮುರಿಯುವಲ್ಲಿ ಜೋ ರೂಟ್ ಯಶಸ್ವಿಯಾಗಿದ್ದಾರೆ. ನಾಲ್ಕನೇ ಇನ್ನಿಂಗ್ಸ್‌ನಲ್ಲಿ 49 ಬಾರಿ ಬ್ಯಾಟಿಂಗ್ ಮಾಡಿರುವ ಜೋ ರೂಟ್ ಇದುರವೆಗೆ 1630 ರನ್ ಬಾರಿಸಿದ್ದಾರೆ. ಇದರೊಂದಿಗೆ 147 ವರ್ಷಗಳ ಟೆಸ್ಟ್ ಕ್ರಿಕೆಟ್‌ ಇತಿಹಾಸದಲ್ಲೇ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ರೂಟ್ ಮಾಡಿರುವುದು ವಿಶೇಷ.

ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳು

  • ಜೋ ರೂಟ್: 1630 ರನ್‌ಗಳು
  • ಸಚಿನ್ ತೆಂಡೂಲ್ಕರ್: 1625 ರನ್‌ಗಳು
  • ಅಲಿಸ್ಟೇರ್ ಕುಕ್: 1611 ರನ್‌ಗಳು
  • ಗ್ರೇಮ್ ಸ್ಮಿತ್: 1611 ರನ್‌ಗಳು
  • ಶಿವನಾರಾಯಣ ಚಂದ್ರಪಾಲ್: 1580 ರನ್‌ಗಳು

Story first published: Sunday, December 1, 2024, 13:06 [IST]
Other articles published on Dec 1, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+