For Quick Alerts
ALLOW NOTIFICATIONS  
For Daily Alerts
 

ಶುಭಮನ್‌ ಗಿಲ್ ದಾಖಲೆಯ ಮೇಲೆ ರೂಟ್ ಕಣ್ಣು

ಆಸ್ಟ್ರೇಲಿಯಾದಲ್ಲಿ ಸದ್ಯ ಆಶಸ್‌ ಟೆಸ್ಟ್‌ ಸರಣಿ ನಡೆಯುತ್ತಿದೆ. ಈ ಸರಣಿಯಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸುತ್ತಿವೆ. ಈ ವೇಳೆ ಎಲ್ಲರ ಕಣ್ಣುಗಳು ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ ಜೋ ರೂಟ್‌ ಅವರ ಮೇಲೆ ನೆಟ್ಟಿರಲಿವೆ. ಇವರು ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯದಲ್ಲಿ ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಜೋ ರೂಟ್‌ ಪ್ರಸಕ್ತ ವರ್ಷ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಸೈ ಎನಿಸಿಕೊಂಡಿದ್ದಾರೆ. ಆಶಸ್‌ ಸರಣಿಯಲ್ಲಿ ಇವರು ಬಿಗ್ ಇನಿಂಗ್ಸ್ ಕಟ್ಟುವಲ್ಲಿ ಸಫಲರಾದಲ್ಲಿ ದೊಡ್ಡ ದಾಖಲೆ ಬರೆಯಬಹುದು.

ಇಂಗ್ಲೆಂಡ್‌ ಸ್ಟಾರ್‌ ಬ್ಯಾಟರ್‌ ಜೋ ರೂಟ್‌ ಆಶಸ್‌ ಸರಣಿಯಲ್ಲಿ ಕೊಂಚ ರನ್‌ ಕಲೆ ಹಾಕುವಲ್ಲಿ ಎಡವುತ್ತಿದ್ದಾರೆ. ಆದರೆ ಇವರು ಈ ಸರಣಿಯಲ್ಲಿ ಈಗಾಗಲೇ ಒಂದು ಶತಕ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ನಾಲ್ಕನೇ ಟೆಸ್ಟ್‌ ಪಂದ್ಯದಲ್ಲೂ ಇವರು ಅಸಾಧಾರಣ ಪ್ರದರ್ಶನ ನೀಡಿದ್ದೇ ಆದಲ್ಲಿ ದೊಡ್ಡ ದಾಖಲೆ ಬರೆಯಬಹುದು. ಪ್ರಸಕ್ತ ವರ್ಷ ಮೂರು ಸ್ವರೂಪದ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಜೋ ರೂಟ್‌ ಮೂರನೇ ಸ್ಥಾನದಲ್ಲಿದ್ದಾರೆ. ಇವರು ಇದನ್ನು ಮೀರಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆಯಬಹುದಾಗಿದೆ.

Joe Root Eyes Shubman Gill s Milestone Record in Upcoming Boxing Day Test

2005ರಲ್ಲಿ ಮೂರು ಸ್ವರೂಪದಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ದಾಖಲೆ ಟೀಮ್ ಇಂಡಿಯಾದ ಭರವಸೆಯ ಆಟಗಾರ ಶುಭಮನ್‌ ಗಿಲ್ ಅವರಿಗೆ ಸಲ್ಲುತ್ತದೆ. ಇವರು ಮೂರು ಸ್ವರೂಪಗಳಲ್ಲಿ 1,598 ರನ್ ಗಳಿಸಿದ್ದಾರೆ. ಇವರು ಮೂರು ಸ್ವರೂಪದಲ್ಲಿ ಅತಿ ಹೆಚ್ಚು ರನ್ ಬಾರಿಸಿದ ದಾಖಲೆ ಹೊಂದಿದ್ದಾರೆ. ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಜೋ ರೂಟ್‌ ದೊಡ್ಡ ದಾಖಲೆ ಬರೆಯುವ ಅವಕಾಶ ಹೊಂದಿದ್ದಾರೆ.

ದಾಖಲೆಯ ಮೇಲೆ ಕಣ್ಣು

ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್‌ ಶುಭಮನ್‌ ಗಿಲ್‌ ಪ್ರಸಕ್ತ ವರ್ಷ ಆಡಿದ 35 ಪಂದ್ಯಗಳಲ್ಲಿ 42 ಇನ್ನಿಂಗ್ಸ್‌ಗಳಲ್ಲಿ 49 ಸರಾಸರಿಯಲ್ಲಿ 1,764 ರನ್ ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಇಂಗ್ಲೆಂಡ್ ತಂಡದ ಜೋ ರೂಟ್ ಇದ್ದಾರೆ. ಇವರು ಆಡಿದ 24 ಪಂದ್ಯಗಳಲ್ಲಿ 31 ಇನ್ನಿಂಗ್ಸ್‌ಗಳಲ್ಲಿ 1,598 ರನ್ ಬಾರಿಸಿದ್ದಾರೆ. ಗಿಲ್ ಅವರ ದಾಖಲೆಯನ್ನು ಮೀರಿ ನಿಲ್ಲಲು ಇನ್ನು 167 ರನ್‌ ಅವಶ್ಯಕತೆಯಿದೆ. ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಟೆಸ್ಟ್‌ ಪಂದ್ಯದಲ್ಲಿ ರೂಟ್‌ ಈ ಸಾಧನೆ ಮಾಡಿದಲ್ಲಿ ದೊಡ್ಡ ದಾಖಲೆ ಬರೆಯಬಹುದು.

Joe Root Eyes Shubman Gill s Milestone Record in Upcoming Boxing Day Test

ವೆಸ್ಟ್‌ ಇಂಡೀಸ್‌ ತಂಡದ ಸ್ಟಾರ್‌ ಬ್ಯಾಟರ್ ಶಾಯ್‌ ಹೋಪ್‌ ಅತಿ ಹೆಚ್ಚು ರನ್‌ ಕಲೆ ಹಾಕಿದ ಲೆಕ್ಕಾಚಾರದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇವರು 42 ಪಂದ್ಯಗಳಲ್ಲಿ 1,760 ರನ್ ಗಳಿಸಿದ್ದಾರೆ. ಜಿಂಬಾಬ್ವೆಯ ಬ್ರಿಯಾನ್ ಬೆನೆಟ್ 1,585 ರನ್, ಪಾಕಿಸ್ತಾನದ ಸಲ್ಮಾನ್ ಅಲಿ ಆಘಾ 1,569 ರನ್‌ ಸಿಡಿಸಿ ಐದನೇ ಸ್ಥಾನದಲ್ಲಿದ್ದಾರೆ.

Story first published: Monday, December 22, 2025, 21:41 [IST]
Other articles published on Dec 22, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+