ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಪ್ರಕಟ: ಸ್ಟೋಕ್ಸ್‌ಗೆ ಇಲ್ಲ ಸ್ಥಾನ
ಜೂನ್ 17 ರಿಂದ ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡವನ್ನು ಘೋಷಿಸಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯು ತಂಡದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದೆ. ಮೊದಲ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡಿದ ಇಂಗ್ಲೆಂಡ್ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ಮತ್ತು ವೇಗಿ ಗಸ್ ಅಟ್ಕಿನ್ಸನ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ನೈಟ್ ಕ್ಲಬ್ ವಿವಾದ ಬಳಿಕ ನಾಯಕ ಬೆನ್ ಸ್ಟೋಕ್ಸ್ ಹಾಗೂ ಅಟ್ಕಿನ್ಸನ್ ಜಗಳದಿಂದಾಗಿ ಇಸಿಬಿ ಹೊರಗಿಟ್ಟಿದೆ.
ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಭರವಸೆಯ ಆಟಗಾರ ಜೋ ರೂಟ್ ಅವರನ್ನು ತಂಡದ ಹಂಗಾಮಿ ನಾಯಕನನ್ನಾಗಿ ಇಸಿಬಿ ನೇಮಿಸಿದೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆಲುವು ಸಾಧಿಸಿದ ಬಳಿಕ ಇಂಗ್ಲೆಂಡ್ ಆಟಗಾರರು ಪಾರ್ಟಿಯ ಗಲಾಟೆ ಮಾಡಿಕೊಂಡಿದ್ದಾರೆ. ಲಾರ್ಡ್ಸ್ ಟೆಸ್ಟ್ ಮುಗಿದ ನಂತರ ಚೆಲ್ಸಿಯಾ ನೈಟ್‌ಕ್ಲಬ್‌ನಲ್ಲಿ ನಡೆದ ಗಲಾಟೆಯ ಬಗ್ಗೆ ತನಿಖೆ ನಡೆಯುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ ಸ್ಟೋಕ್ಸ್ ನಾಯಕತ್ವ ಮಾತ್ರವಲ್ಲದೆ, ಇಡೀ ವೃತ್ತಿ ಜೀವನಕ್ಕೆ ಕುತ್ತು ಬಂದಿದೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡವು ಬೆನ್ ಸ್ಟೋಕ್ಸ್ ಮತ್ತು ಗಸ್ ಅಟ್ಕಿನ್ಸನ್ ಅವರನ್ನು ಕೈಬಿಟ್ಟಿದೆ. ಅಲ್ಲದೆ ತಂಡದಲ್ಲಿ ಅನುಭವಿ ವೇಗದ ಬೌಲರ್ ಜೋಫ್ರಾ ಆರ್ಚರ್ ಹಾಗೂ ಜೋರ್ಡಾನ್ ಕಾಕ್ಸ್ ಅವರಿಗೆ ಮಣೆ ಹಾಕಿದೆ. ಆರ್ಚರ್ ಆಷಸ್ ಟೆಸ್ಟ್ ಸರಣಿಯ ಬಳಿಕ ಇದೇ ಮೊದಲ ಬಾರಿಗೆ ತಂಡ ಸೇರಿಕೊಂಡಿದ್ದಾರೆ.
ಜೋ ರೂಟ್ ಸಾಧನೆ
ಇಂಗ್ಲೆಂಡ್ ತಂಡದ 35 ವರ್ಷದ ಅನುಭವಿ ಬ್ಯಾಟರ್ ಜೋ ರೂಟ್ ಅವರಿಗೆ ಪಟ್ಟವನ್ನು ಕಟ್ಟಲಾಗಿದೆ. ಇವರು ಈ ವರೆಗೆ ಇಂಗ್ಲೆಂಡ್ ತಂಡವನ್ನು 64 ಟೆಸ್ಟ್ ಪಂದ್ಯಗಳಲ್ಲಿ ಮುಂದಾಳತ್ವ ವಹಿಸಿದ್ದರು. ರೂಟ್ ಇಂಗ್ಲೆಂಡ್ ಪರ 164 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 50ರ ಸರಾಸರಿಯಲ್ಲಿ 13952 ರನ್ ಕಲೆ ಹಾಕಿದ್ದಾರೆ. ಈ ವೇಳೆ 41 ಶತಕ, 66 ಅರ್ಧಶತಕ ಸಿಡಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡ: ಜೋ ರೂಟ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಸೋನಿ ಬೇಕರ್, ಶೋಯೆಬ್ ಬಶೀರ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಜೋರ್ಡಾನ್ ಕಾಕ್ಸ್, ಬೆನ್ ಡಕೆಟ್, ಮ್ಯಾಥ್ಯೂ ಫಿಶರ್, ಎಮಿಲಿಯೊ ಗೇ, ಜೇಮ್ಸ್ ರೂ, ಒಲಿ ರಾಬಿನ್ಸನ್, ಜೇಮೀ ಸ್ಮಿತ್ (ವಿಕೆಟ್ ಕೀಪರ್), ಜೋಶ್ ಟಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications